ಶಿಕಾರಿಪುರದ ಪೊಲೀಸ್ ಸಿಬ್ಬಂದಿ ಗಿರೀಶ್ ಕುಮಾರ್ ಅವರು ರಸ್ತೆ ಅಪಘಾತದಲ್ಲಿ ಅಕಾಲಿಕವಾಗಿ ಮೃತಪಟ್ಟ ಹಿನ್ನೆಲೆಯಲ್ಲಿ, ಶಿಕಾರಿಪುರ ತಾಲ್ಲೂಕಿನ ಸಾಲೂರು ಗ್ರಾಮದಲ್ಲಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು.
ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ನಿಖಿಲ್ ಅವರು ಗಿರೀಶ್ ಕುಮಾರ್ ಅವರ ಪಾರ್ಥಿವ ಶರೀರಕ್ಕೆ ಪುಷ್ಪನಮನ ಸಲ್ಲಿಸಿ ಅಂತಿಮ ಗೌರವ ಅರ್ಪಿಸಿದರು. ಪೊಲೀಸ್ ಇಲಾಖೆಯ ವತಿಯಿಂದ ಮೃತ ಸಿಬ್ಬಂದಿಗೆ ಗೌರವ ವಂದನೆ ಸಲ್ಲಿಸಲಾಯಿತು.
ಪೊಲೀಸ್ ಇಲಾಖೆಯಲ್ಲಿ ಗಿರೀಶ್ ಕುಮಾರ್ ಅವರು ಸಲ್ಲಿಸಿದ ಸೇವೆ ಹಾಗೂ ಕರ್ತವ್ಯನಿಷ್ಠೆಯನ್ನು ಎಸ್ಪಿ ನಿಖಿಲ್ ಅವರು ಸ್ಮರಿಸಿದರು. ಅಲ್ಲದೆ, ದುಃಖತಪ್ತ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿ, ಜಿಲ್ಲಾ ಪೊಲೀಸ್ ಇಲಾಖೆಯ ಪರವಾಗಿ ತೀವ್ರ ಸಂತಾಪ ಸೂಚಿಸಿದರು.
