ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಗಬ್ಬೂರು ಗ್ರಾಮದ ಬಳಿ ಖಾಸಗಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅಪಘಾತದಲ್ಲಿ ಕುಸ್ಕೂರು ಗ್ರಾಮದ ಚಂದ್ರನಾಯ್ಕ್ (41) ಮೃತಪಟ್ಟ ದುರ್ದೈವಿಯಾಗಿದ್ದಾರೆ. ಶಿರಾಳಕೊಪ್ಪದಿಂದ ಶಿಕಾರಿಪುರ ಪಟ್ಟಣದ ಕಡೆಗೆ ಬರುತ್ತಿದ್ದ ಖಾಸಗಿ ಬಸ್, ಬೈಕ್ಗೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.
ಡಿಕ್ಕಿಯ ರಭಸಕ್ಕೆ ಗಂಭೀರವಾಗಿ ಗಾಯಗೊಂಡ ಚಂದ್ರನಾಯ್ಕ್ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಶಿಕಾರಿಪುರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
