Friday, October 30, 2026
Friday, October 30, 2026

ಕೃಷಿಮೇಳ ,ಕಾಂಗ್ರೆಸ್ ನಾಯಕರ ಫ್ಲೆಕ್ಸ್ ಮಯ. ಸಂಸದ ರಾಘವೇಂದ್ರ ಅವರಿಂದ ” ಕ್ಲಾಸ್”

Date:

ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆದ ಕೃಷಿ ಮೇಳದಲ್ಲಿ ಫ್ಲೆಕ್ಸ್ ವಿಚಾರವಾಗಿ ಗದ್ದಲ ಉಂಟಾಗಿದೆ.

ಕೃಷಿ ಮೇಳದ ಮಾರ್ಗದುದ್ದಕ್ಕೂ ಕಾಂಗ್ರೆಸ್ ನಾಯಕರ ಫ್ಲೆಕ್ಸ್‌ಗಳನ್ನು ಅಳವಡಿಸಿರುವುದನ್ನು ಕಂಡು ಸಂಸದ ಬಿ.ವೈ. ರಾಘವೇಂದ್ರ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಇದು ಸರ್ಕಾರಿ ಕಾರ್ಯಕ್ರಮವೋ ಅಥವಾ ಕಾಂಗ್ರೆಸ್ ಪಕ್ಷದ ಕಾರ್ಯಕ್ರಮವೋ ಎಂದು ಪ್ರಶ್ನಿಸಿ ಆಯೋಜಕರ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

ತಮ್ಮ ಪಕ್ಷದ ಕಾರ್ಯಕ್ರಮಗಳಲ್ಲಿ ಬೇಕಾದರೆ ಫ್ಲೆಕ್ಸ್ ಹಾಕಿಕೊಳ್ಳಲಿ. ಆದರೆ ಕೃಷಿ ವಿಶ್ವವಿದ್ಯಾಲಯದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕರ ಫ್ಲೆಕ್ಸ್‌ಗಳ ಅಗತ್ಯವೇನಿದೆ? ಎಂದು ಪ್ರಶ್ನಿಸಿದ್ದಾರೆ.

ಈ ವೇಳೆ ಶಾಸಕ ಎಸ್.ಎನ್. ಚನ್ನಬಸಪ್ಪ ಕೂಡ ಸಂಸದರಿಗೆ ಸಾಥ್ ನೀಡಿದ್ದಾರೆ.

“ಈ ರೀತಿ ಮಾಡುವುದಾದರೆ ನಮ್ಮನ್ನು ಕಾರ್ಯಕ್ರಮಕ್ಕೆ ಯಾಕೆ ಕರೆಯುತ್ತೀರಿ? ನಾವು ಕಾರ್ಯಕ್ರಮಕ್ಕೆ ಬರಬೇಕೋ ಬೇಡವೋ? ಸರ್ಕಾರಕ್ಕೆ ಗೌರವ ಕೊಡಬೇಕು. ಹಾಗಂತ ನಮ್ಮನ್ನು ಡಿಗ್ರೇಡ್ ಮಾಡುವುದು ಸರಿಯೇ?” ಎಂದು ಸಂಸದರು ಕಿಡಿಕಾರಿದ್ದಾರೆ.

ಸಂಸದರ ಆಕ್ರೋಶಕ್ಕೆ ಪ್ರತಿಕ್ರಿಯಿಸಿದ ವಿಶ್ವವಿದ್ಯಾಲಯದ ಪ್ರಮುಖರು, ಆಗಿರುವ ತಪ್ಪನ್ನು ಸರಿಪಡಿಸುವುದಾಗಿ ಭರವಸೆ ನೀಡಿ ಕ್ಷಮೆಯಾಚಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kannada Rajyotsava ಕನ್ನಡ ರಾಜ್ಯೋತ್ಸವ – ನಮ್ಮ ಹೆಮ್ಮೆಯ ಹಬ್ಬ

Kannada Rajyotsava ಪ್ರತಿಯೊಬ್ಬ ಕನ್ನಡಿಗನಿಗೂ ಕನ್ನಡ ರಾಜ್ಯೋತ್ಸವವು ಹೆಮ್ಮೆ, ಸ್ವಾಭಿಮಾನ ಮತ್ತು...

Kuvempu University ಕುವೆಂಪು ವಿವಿ ಸಂಯೋಜನೆಗೆ ಆನ್‌ಲೈನ್ ಅರ್ಜಿ ಆಹ್ವಾನ

Kuvempu University ಕುವೆಂಪು ವಿಶ್ವವಿದ್ಯಾಲಯದ ವ್ಯಾಪ್ತಿಯ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ...

Radio Shivamogga ಕನ್ನಡ ರಾಜ್ಯೋತ್ಸವಕ್ಕೆ ರೇಡಿಯೋ ಶಿವಮೊಗ್ಗ 90.8 ಎಫ್.ಎಂ.ನಿಂದ 24 ಗಂಟೆಗಳ ನಿರಂತರ ನೇರಪ್ರಸಾರ

‘ರೇಡಿಯೋ ಶಿವಮೊಗ್ಗ ೯೦.೮ಎಫ್.ಎಂ. ಹಾಗೂ ಪರಿಸರ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ಕನ್ನಡ...

Breaking News ಪತಿ ಮತ್ತು ಪತಿಮನೆಯವರಿಂದ ಕಿರುಕುಳ: ಗೃಹಿಣಿ ಆತ್ಮಹತ್ಯೆ.

Breaking News ಗಂಡ ಹಾಗೂ ಗಂಡನ ಮನೆಯವರ ಕಿರುಕುಳದಿಂದ ವಿಷ ಸೇವಿಸಿ...