Saturday, October 31, 2026
Saturday, October 31, 2026

ಭಾರತೀಯ ಸೇನೆ ಸೇವೆಗಳು-ಉಚಿತ ವೃತ್ತಿ ಮಾರ್ಗದರ್ಶನ ಮತ್ತು ತರಬೇತಿಗೆ ಅರ್ಜಿ ಆಹ್ವಾನ

Date:

ಭಾರತೀಯ ಸೇನೆ/ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2026-27 ನೇ ಸಾಲಿನ 2 ನೇ ತಂಡ (ಬಾಲಕರಿಗೆ ಮಾತ್ರ)ಕ್ಕಾಗಿ ಆಯ್ಕೆ ಪೂರ್ವ ಸಿದ್ದತೆ ಬಗ್ಗೆ ಉಚಿತ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಆಭ್ಯರ್ಥಿಗಳು ನಿಗದಿತ ನಮೂನೆ ಅರ್ಜಿಯನ್ನು ಆಯಾ ಜಿಲ್ಲೆಯ ಜಿಲ್ಲಾ/ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ ಅರ್ಜಿಯನ್ನು ಖುದ್ದಾಗಿ ಅಥವಾ ನೊಂದಾಯಿತ ಅಂಚೆಯ ಮೂಲಕ ಜಿಲ್ಲಾ ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಬೆಳಗಾವಿ ಇಲ್ಲಿಗೆ ದಿ:16/11/2026 ರೊಳಗಾಗಿ ಸಲ್ಲಿಸುವುದು.

ಅರ್ಹತೆ: ಅರ್ಜಿ ಸಲ್ಲಿಸಲು ಅಭ್ಯರ್ಥಿ ಮತ್ತು ಕುಟುಂಬದ ಒಟ್ಟು ಗರಿಷ್ಟ ವಾರ್ಷಿಕ ಆದಾಯ ಮಿತಿ ಪ್ರವರ್ಗ-1ಕ್ಕೆ ರೂ.2.50 ಲಕ್ಷ ಹಾಗೂ ಪ್ರವರ್ಗ-2(ಎ), 3(ಎ) ಮತ್ತು 3(ಬಿ) ಗಳಿಗೆ ರೂ. 1 ಲಕ್ಷ ಒಳಗೊಂಡಿರಬೇಕು. ಅಭ್ಯರ್ಥಿಯು 10 ನೇ ತರಗತಿಯನ್ನು ಉತೀರ್ಣವಾಗಿದ್ದು, ಪ್ರತಿ ವಿಷಯದಲ್ಲಿ ಕನಿಷ್ಟ 33 ಅಂಕಗಳು ಮತ್ತು ಸರಾಸರಿ ಶೇ.45 ರಷ್ಟು ಅಂಕಗಳನ್ನು ಪಡೆದಿರಬೇಕು. ಗ್ರೇಡಿಂಗ್ ಸಿಸ್ಟಂ ಇದ್ದಲ್ಲಿ ಮೇಲ್ಕಂಡಂತೆ ಸಮಾನವಾದ ಗ್ರೇಡ್ ಪಡೆದಿರಬೇಕು. ಜನ್ಮ ದಿನಾಂಕ ಮತ್ತು ವಯಸ್ಸು 16/11/2026ಕ್ಕೆ ಅನ್ವಯಿಸುವಂತೆ ಅಭ್ಯರ್ಥಿಯು 16/11/2006 ರಿಂದ 16/11/2009 ರ ನಡುವಿನ ಅವಧಿಯಲ್ಲಿ ಜನಿಸಿರಬೇಕು. ಅಭ್ಯರ್ಥಿಗಳು ರ‍್ಯಾಲಿಯಲ್ಲಿ 10ನೇ ತರಗತಿ ಅಂಕಪಟ್ಟಿ, ಆಧಾರ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳ ಮೂಲದಾಖಲೆಗಳೊಂದಿಗೆ ಭಾಗವಹಿಸುವುದು.
ಸೌಲಭ್ಯಗಳು: ತರಬೇತಿ ನೀಡಲು ತಗಲುವ ವಾಸ್ತವಿಕ ವೆಚ್ಚವನ್ನು ಇಲಾಖೆಯಿಂದ ಭರಿಸಲಾಗುವುದು. ಒಂದು ಜೊತೆ ಟ್ರಾಕ್ ಸೂಟ್, ಶೂ ಹಾಗೂ ದೈಹಿಕ ತರಬೇತಿಯ ಸಮವಸ್ತ್ರವನ್ನು ನೀಡಲಾಗುವುದು. ತರಬೇತಿ ಅವಧಿಯು ಉಚಿತ ವಸತಿ ಮತ್ತು ಊಟ ಸಹಿತ 4 ತಿಂಗಳಿನದ್ದಾಗಿದ್ದು, ಈ ಸಮಯದಲ್ಲಿ ಅಭ್ಯರ್ಥಿಗಳು ಕಡ್ಡಾಯವಾಗಿ ತರಬೇತಿ ಕೇಂದ್ರದಲ್ಲಿಯೇ ಉಳಿದುಕೊಳ್ಳುವುದು. ತರಬೇತಿಯು ಸಂಪೂರ್ಣ ಉಚಿತವಾಗಿದ್ದು, ತರಬೇತಿಯನ್ನು ಪೂರ್ಣಗೊಳಿಸದೇ ಮೊಟಕುಗೊಳಿಸಿದ್ದಲ್ಲಿ ಅಂತಹ ಅಭ್ಯರ್ಥಿಯ ತರಬೇತಿ ಭರಿಸಿರುವ ವೆಚ್ಚವನ್ನು ಆ ಅಭ್ಯರ್ಥಿ ಮತ್ತು ಅವರ ತಂದೆ/ತಾಯಿ/ ಪೋಷಕರಿಂದ ವಸೂಲಿ ಮಾಡಲಾಗುವುದು.
ಅಭ್ಯರ್ಥಿಗಳಿಗೆ ತರಬೇತಿಯನ್ನು ಜಿಲ್ಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು, ಕೊ.ಸಂ.:204, 2ನೇ ಮಹಡಿ, ಸುವರ್ಣ ವಿಧಾನಸೌಧ, ಹಲಗಾ, ಬೆಳಗಾವಿ-590010 ಇಲ್ಲಿ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ದೂ.ಸಂ.:0831-2407221/ 08382-222129 ಗಳನ್ನು ಸಂಪರ್ಕಿಸುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Media Academy ಕರ್ನಾಟಕ ಮಾಧ್ಯಮ ಆಕಾಡೆಮಿಯಿಂದ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

Karnataka Media Academy ಕರ್ನಾಟಕ ಮಾಧ್ಯಮ ಅಕಾಡೆಮಿಯು 2026ನೇ ಸಾಲಿನ ವಿವಿಧ...

Kannada Rajyotsava ಕನ್ನಡ ರಾಜ್ಯೋತ್ಸವ – ನಮ್ಮ ಹೆಮ್ಮೆಯ ಹಬ್ಬ

Kannada Rajyotsava ಪ್ರತಿಯೊಬ್ಬ ಕನ್ನಡಿಗನಿಗೂ ಕನ್ನಡ ರಾಜ್ಯೋತ್ಸವವು ಹೆಮ್ಮೆ, ಸ್ವಾಭಿಮಾನ ಮತ್ತು...

Kuvempu University ಕುವೆಂಪು ವಿವಿ ಸಂಯೋಜನೆಗೆ ಆನ್‌ಲೈನ್ ಅರ್ಜಿ ಆಹ್ವಾನ

Kuvempu University ಕುವೆಂಪು ವಿಶ್ವವಿದ್ಯಾಲಯದ ವ್ಯಾಪ್ತಿಯ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ...