2026ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಸಮಾಜ ಸೇವಾ ಕ್ಷೇತ್ರದಲ್ಲಿ ಭಾಜನರಾಗಿರುವ ಹಿರಿಯ ರಾಜಕಾರಣಿ ಕಾಗೋಡು ತಿಮ್ಮಪ್ಪ ಅವರನ್ನು ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಅಭಿನಂದಿಸಿ, ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಆತ್ಮೀಯವಾಗಿ ಆಹ್ವಾನಿಸಲಾಯಿತು.
ನವೆಂಬರ್ 1ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿರುವ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಕಾಗೋಡು ತಿಮ್ಮಪ್ಪ ಅವರನ್ನು ಆಹ್ವಾನಿಸಲಾಯಿತು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಉಮೇಶ್ ಹೆಚ್. ಹಾಗೂ ಸಾಗರ ಭಾಗದ ಹಿರಿಯ ಸಂಗೀತ, ನೃತ್ಯ ಮತ್ತು ಜಾನಪದ ಕಲಾವಿದರು ಉಪಸ್ಥಿತರಿದ್ದರು.
