ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ಭಾನುವಾರ ಆಯೋಜಿಸಿದ್ದ 71ನೇ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ಧ್ವಜಾರೋಹಣ ನೆರವೇರಿಸುವ ಮೂಲಕ ಉದ್ಘಾಟಿಸಿದರು.
ನಗರದ ವಿವಿಧ ಶಾಲೆಗಳ ವಿದ್ಯಾರ್ಥಿಗಳ ಪಥಸಂಚಲನ ವೀಕ್ಷಿಸಿ, ಗೌರವ ಸ್ವೀಕರಿಸಿದರು.
‘ಸಿಎಂವಿದ್ಯಾರ್ಥಿ ಸಹಾಯಸ್ತ’ ಯೋಜನೆ ಲೋಕಾರ್ಪಣೆ ಗೊಳಿಸಿದರು. ‘ಗ್ರಾಮಾನುಭವ‘ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಸಚಿವ ಮಧು ಬಂಗಾರಪ್ಪ, ಶಾಸಕ ಗಣೇಶ್ ಹುಕ್ಕೇರಿ,
ವಿಧಾನ ಪರಿಷತ್ ಸದಸ್ಯರಾದ ಡಾ.ಕೆ. ಗೋವಿಂದರಾಜು, ಎ ಪಿ ರಂಗನಾಥ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ವಿ. ರಶ್ಮೀ ಮಹೇಶ್, ಶಿಕ್ಷಣ ಇಲಾಖೆ ಆಯುಕ್ತೆ ವಿದ್ಯಾಕುಮಾರಿ, ಡಿಜಿಪಿ ಸಲೀಮ್, ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಇನ್ನಿತರರು ಉಪಸ್ಥಿತರಿದ್ದರು.
