Monday, November 2, 2026
Monday, November 2, 2026

D.K. Shivakumar ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರೊಂದಿಗೆ ಸಂತೋಷ ಕೂಟದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

Date:

D.K. Shivakumar 71ನೇ ಕನ್ನಡ ರಾಜ್ಯೋತ್ಸವದ ಸಂಭ್ರಮದ ಅಂಗವಾಗಿ, ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆಗೈದು ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ಸಾಧಕರ ಗೌರವಾರ್ಥ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಭಾನುವಾರ ಸಂಜೆ ವಿಶೇಷ ಸಂತೋಷ ಕೂಟವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪಾಲ್ಗೊಂಡು ಪ್ರಶಸ್ತಿ ಪುರಸ್ಕೃತರೊಂದಿಗೆ ಆತ್ಮೀಯವಾಗಿ ಅವರ ಸಾಧನೆ ಹಾಗೂ ಕನ್ನಡ ನಾಡು, ನುಡಿ ಮತ್ತು ಸಂಸ್ಕೃತಿಗೆ ಸಲ್ಲಿಸಿರುವ ಅಮೂಲ್ಯ ಕೊಡುಗೆಗಳನ್ನು ಸ್ಮರಿಸಿದರು.

D.K. Shivakumar ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ, ವಿಧಾನಸಭಾಧ್ಯಕ್ಷ ಜಿ.ಎಸ್. ಪಾಟೀಲ್, ವಿಧಾನಪರಿಷತ್ ಸದಸ್ಯ ಸಲೀಂ ಅಹ್ಮದ್ ಸೇರಿದಂತೆ ವಿವಿಧ ಕ್ಷೇತ್ರಗಳ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು ಹಾಗೂ ಗಣ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kannada Rajyotsava ಕನ್ನಡ ಭಾಷೆಯನ್ನು ಉಳಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ: ಹೆಚ್.ಸಿ. ಸುರೇಶ್

Kannada Rajyotsava ಅನ್ಯ ಭಾಷೆಗಳ ಪ್ರಭಾವದಿಂದ ಕನ್ನಡ ಭಾಷೆಯ ಬಳಕೆ ಕಡಿಮೆಯಾಗುತ್ತಿರುವ...

Kannada Rajyotsava ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಕಟಣೆಗಳಿಗೆ ಶೇ.50% ರಿಯಾಯಿತಿ

Kannada Rajyotsava ಕನ್ನಡ ರಾಜ್ಯೋತ್ಸವದ ಅಂಗವಾಗಿ 2026ರ ನವೆಂಬರ್ ತಿಂಗಳು ಪೂರ್ತಿ...