ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು ಹಾಗೂ ಶಿವಮೊಗ್ಗದ 2ನೇ ಹಂತದ ವಿನೋಬನಗರದಲ್ಲಿರುವ ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್ (ಕೆ.ಐ.ಸಿ.ಎಮ್) ಸಂಸ್ಥೆಯ ವತಿಯಿಂದ 6 ತಿಂಗಳ ಅವಧಿಯ ‘ಡಿಪ್ಲೊಮಾ ಇನ್ ಕೋ-ಆಪರೇಟಿವ್ ಆಡಿಟ್’ ತರಬೇತಿಯು ನವೆಂಬರ್ 14 ರಿಂದ ಪ್ರಾರಂಭವಾಗಲಿದೆ.
ಈ ಕೋರ್ಸ್ಗೆ ಬಿ.ಕಾಂ, ಬಿ.ಬಿ.ಎಂ ಅಥವಾ ಲೆಕ್ಕಶಾಸ್ತ್ರವನ್ನು ಐಚ್ಛಿಕ ವಿಷಯವನ್ನಾಗಿ ಒಳಗೊಂಡ ಇತರ ಪದವಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಸಾಮಾನ್ಯ ಅಭ್ಯರ್ಥಿಗಳಿಗೆ ಪ್ರವೇಶ ಶುಲ್ಕ ರೂ.9,500/- ಇದ್ದು, ಬಿಪಿಎಲ್ ಹಾಗೂ ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇರಲಿದೆ.
ಈ ತರಬೇತಿಯಲ್ಲಿ ಸಹಕಾರ ಕ್ಷೇತ್ರ ಮತ್ತು ಲೆಕ್ಕ ಪತ್ರ ನಿರ್ವಹಣೆಯ ಜ್ಞಾನ, ಲೆಕ್ಕ ಪರಿಶೋಧನೆ, ಟ್ಯಾಲಿ ಹಾಗೂ ಡಿಜಿಟಲ್ ಅಕೌಂಟಿಂಗ್ ಕೌಶಲ್ಯಗಳನ್ನು ಕಲಿಸಲಾಗುತ್ತದೆ. ಇದು ಸಹಕಾರ ಸಂಘ/ಸಂಸ್ಥೆಗಳಲ್ಲಿ ಹಾಗೂ ಖಾಸಗಿ ರಂಗದಲ್ಲಿ ಉದ್ಯೋಗ ಮತ್ತು ಸ್ವಯಂ ಉದ್ಯೋಗ ಕಂಡುಕೊಳ್ಳಲು ಸಹಕಾರಿಯಾಗಿದೆ.
ಅರ್ಜಿ ಸಲ್ಲಿಸಲು ನವೆಂಬರ್ 13 ಕೊನೆಯ ದಿನಾಂಕವಾಗಿದೆ. ಆನ್ಲೈನ್ ಮೂಲಕ https://dca.kscfl.in ಲಿಂಕ್ ಬಳಸಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 9449075746, 8310554752, 9845068191, ಅಥವಾ 7026246493 ಅನ್ನು ಸಂಪರ್ಕಿಸಬಹುದು ಎಂದು ಸಂಸ್ಥೆಯ ಪ್ರಾಂಶುಪಾಲರು ತಿಳಿಸಿದ್ದಾರೆ.
ಕೆ.ಐ.ಸಿ.ಎಂ ನಲ್ಲಿ ‘ಡಿಪ್ಲೊಮಾ ಇನ್ ಕೋ-ಆಪರೇಟಿವ್ ಆಡಿಟ್’ ತರಬೇತಿಗೆ ಅರ್ಜಿ ಆಹ್ವಾನ
Date:
