Tuesday, November 3, 2026
Tuesday, November 3, 2026

ಶಿವಮೊಗ್ಗದಲ್ಲಿ ನ.05 ರಂದು ‘ಉದ್ಯೋಗ ಮೇಳ’: ನೇರ ಸಂದರ್ಶನ

Date:

ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ನವೆಂಬರ್ 05 ರಂದು ಬೆಳಿಗ್ಗೆ 10 ಗಂಟೆಗೆ ಉದ್ಯೋಗಕ್ಕಾಗಿ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ.
ಈ ಉದ್ಯೋಗ ಮೇಳದಲ್ಲಿ ನೆಕ್ಸ್ ಚರ್ ಮತ್ತು ಮುತ್ತೂಟ್ ಮನಿ ಪ್ರೈ.ಲಿ., ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದೆ.
ದಿನಾಂಕ: 05-11-2026 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾ ನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿ ಸಂದರ್ಶನ ನಡೆಯಲಿದ್ದು, ಪಿ.ಯು.ಸಿ. ಹಾಗೂ ಯಾವುದೇ ಪದವಿ ಪಡೆದ 18 ರಿಂದ 35 ವರ್ಷದ ಒಳಗಿನ ಅಭ್ಯರ್ಥಿಗಳು ಭಾಗವಹಿಸಬಹುದು. ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ತಮ್ಮ ಬಯೋಡೇಟಾ ಹಾಗೂ ಆಧಾರ್ ಕಾರ್ಡ್ ಪ್ರತಿಯನ್ನು ತರಬೇಕಾಗಿ ವಿನಂತಿಸಲಾಗಿದೆ. ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಉಚಿತ ಪ್ರವೇಶವಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ಇವರನ್ನು ನೇರವಾಗಿ ಸಂಪರ್ಕಿಸಬಹುದು ಅಥವಾ ದೂರವಾಣಿ ಸಂಖ್ಯೆ: 9380663606ಗಳಿಗೆ ಕರೆ ಮಾಡಬಹುದು ಎಂದು ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kannada Rajyotsava ಕನ್ನಡ ಭಾಷೆಯನ್ನು ಉಳಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ: ಹೆಚ್.ಸಿ. ಸುರೇಶ್

Kannada Rajyotsava ಅನ್ಯ ಭಾಷೆಗಳ ಪ್ರಭಾವದಿಂದ ಕನ್ನಡ ಭಾಷೆಯ ಬಳಕೆ ಕಡಿಮೆಯಾಗುತ್ತಿರುವ...

Kannada Rajyotsava ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಕಟಣೆಗಳಿಗೆ ಶೇ.50% ರಿಯಾಯಿತಿ

Kannada Rajyotsava ಕನ್ನಡ ರಾಜ್ಯೋತ್ಸವದ ಅಂಗವಾಗಿ 2026ರ ನವೆಂಬರ್ ತಿಂಗಳು ಪೂರ್ತಿ...