ಶಿವಮೊಗ್ಗ ನಗರದ ಪ್ರತಿಷ್ಠಿತ ನೃತ್ಯ ಸಂಸ್ಥೆಗಳಲ್ಲೊಂದಾದ ಮಯೂರಿ ನೃತ್ಯ ಕಲಾ ಕೇಂದ್ರದಿಂದ ವಿದುಷಿ ಶ್ವೇತಾ ಪ್ರಕಾಶ್ ನೇತೃತ್ವದಲ್ಲಿ ಕುವೆಂಪು ರಂಗಮಂದಿರದಲ್ಲಿ ನಡೆದ ಮಯೂರ ನೃತ್ಯೋತ್ಸವವನ್ನು ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಅವರು ಮಾತನಾಡಿ, ಭಾರತೀಯ ಸಂಸ್ಕೃತಿ ಯಲ್ಲಿ ನೃತ್ಯ ಕಲೆಗೆ ಸಾವಿರಾರು ವರ್ಷದ ಇತಿಹಾಸವಿದೆ. ಮಯೂರ ನೃತ್ಯ ಕಲಾ ಕೇಂದ್ರವು ಪ್ರತಿ ವರ್ಷ ಉತ್ತಮ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬಂದಿದ್ದು, ಸಂಸ್ಥೆಯ ವಿದ್ಯಾರ್ಥಿಗಳು ಉತ್ತಮ ಪ್ರದರ್ಶನ ನೀಡಿ ಸಂಸ್ಥೆಗೆ ಒಳ್ಳೆಯ ಹೆಸರು ತರುತ್ತಿದ್ದಾರೆ ಎಂದರು. ಮುಖ್ಯ ಅತಿಥಿಗಳಾಗಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ್ ಪಿ., ಮಮತಾ ಭಾಗವಹಿಸಿದ್ದರು. ಅಧ್ಯಕ್ಷತೆಯನ್ನು ಮಯೂರಿ ನೃತ್ಯ ಕಲಾ ಕೇಂದ್ರದ ನಿರ್ದೇಶಕ ವಿದುಷಿ ಶ್ವೇತ ಪ್ರಕಾಶ್ ವಹಿಸಿದ್ದರು. ನೃತ್ಯೋತ್ಸವದಲ್ಲಿ ವಿದ್ಯಾರ್ಥಿಗಳು ಆಕರ್ಷಕ ನೃತ್ಯ ಪ್ರದರ್ಶಿಸಿ ಜನಮನ ಗೆದ್ದರು.
ಜನಮನ ಸೂರೆಗೊಂಡ ಮಯೂರಿನೃತ್ಯ ಕಲಾ ಕೇಂದ್ರದ ನೃತ್ಯೋತ್ಸವ
Date:
