ಡಿಸೆಂಬರ್ 03 ರಂದು ವಿಶ್ವ ವಿಕಲಚೇತನರ ದಿನಾಚರಣೆಯನ್ನು ರಾಜ್ಯ ಮಟ್ಟದಲ್ಲಿ ಆಚರಿಸುವ ಸಂದರ್ಭದಲ್ಲಿ, ವಿಕಲಚೇತನರ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿರುವ ವ್ಯಕ್ತಿಗಳು, ಸಂಸ್ಥೆಗಳು ಮತ್ತು ವಿಶೇಷ ಶಿಕ್ಷಕರಿಗೆ ರಾಜ್ಯ ಮಟ್ಟದ ಪ್ರಶಸ್ತಿ ನೀಡಿ ಗೌರವಿಸಲು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ಅರ್ಜಿಗಳನ್ನು ಆಹ್ವಾನಿಸಿದೆ.
ಆಸಕ್ತರು ಇಲಾಖೆಯ ಅಧಿಕೃತ ವೆಬ್‌ಸೈಟ್ dwdsc.karnataka.gov.in ಮೂಲಕ ಅರ್ಜಿ ನಮೂನೆಗಳನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು. ಅಥವಾ ಶಿವಮೊಗ್ಗ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಕಲ್ಯಾಣಾಧಿಕಾರಿಗಳ ಕಚೇರಿ, ಜಿಲ್ಲಾ ಕಚೇರಿ, ಕಾಮಾಕ್ಷಿ ಬೀದಿ, ಗಣಪತಿ ದೇವಸ್ಥಾನದ ಹತ್ತಿರ, ಶಿವಮೊಗ್ಗ ಇಲ್ಲಿಂದಲೂ ಅರ್ಧಿಯನ್ನು ಪಡೆಯಬಹುದಾಗಿದೆ.
ಅರ್ಜಿದಾರರು ಜಿಲ್ಲಾ, ರಾಜ್ಯ, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾಡಿದ ಸಾಧನೆಗಳ ಬಗ್ಗೆ ಲಗತ್ತಿಸಿದ ಪ್ರಮಾಣ ಪತ್ರಗಳನ್ನು ಕ್ರಮ ಸಂಖ್ಯೆಯೊಂದಿಗೆ ನಮೂದಿಸಬೇಕು. ಸಂಬಂಧಿಸಿದ ದಾಖಲೆಗಳ ಹಾರ್ಡ್ ಹಾಗೂ ಸಾಫ್ಟ್ ಕಾಪಿಯೊಂದಿಗೆ ಸಂಪೂರ್ಣವಾಗಿ ಭರ್ತಿ ಮಾಡಿದ ಪ್ರಸ್ತಾವನೆಯನ್ನು ನವೆಂಬರ್ 09 ರೊಳಗೆ ಕಚೇರಿಗೆ ಖುದ್ದಾಗಿ ತಲುಪಿಸುವಂತೆ ತಿಳಿಸಲಾಗಿದೆ. ಅಂತಿಮ ದಿನಾಂಕದ ನಂತರ ಬರುವ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ: 08182-251676 ಅನ್ನು ಸಂಪರ್ಕಿಸი ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.
ವಿಕಲಚೇತನರ ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ
Date:
