ಸೊಗಾನೆಯಲ್ಲಿರುವ ಶಿವಮೊಗ್ಗ ಕೇಂದ್ರ ಕಾರಾಗೃಹದ ಆವರಣಕ್ಕೆ ನಿಷೇಧಿತ ವಸ್ತುಗಳನ್ನು ಎಸೆಯಲು ಯತ್ನಿಸಿದ ಘಟನೆ ಬೆಳಕಿಗೆ ಬಂದಿದೆ. ಜೈಲು ಸಿಬ್ಬಂದಿಯ ಸಮಯಪ್ರಜ್ಞೆಯಿಂದ ಓರ್ವ ಆರೋಪಿಯನ್ನು ಬಂಧಿಸಲಾಗಿದ್ದು, ಇತರ ಇಬ್ಬರು ಪರಾರಿಯಾಗಿದ್ದಾರೆ. ಜೈಲಿನ ಆವರಣದ ಬಳಿ ಕಪ್ಪು ಕವರ್ನೊಂದಿಗೆ ಅನುಮಾನಾಸ್ಪದವಾಗಿ ಓಡಿಹೋಗುತ್ತಿದ್ದ ವ್ಯಕ್ತಿಯನ್ನು ಗಮನಿಸಿದ ಜೈಲು ಸಿಬ್ಬಂದಿ ಆತನನ್ನು ತಡೆಯಲು ಮುಂದಾಗಿದ್ದಾರೆ. ಈ ವೇಳೆ ಸಿಬ್ಬಂದಿ ಬೆನ್ನಟ್ಟಿದ ಪರಿಣಾಮ ಆರೋಪಿ ಸಿರಿಯೂರು ರಸ್ತೆಯಲ್ಲಿ ಸಿಕ್ಕಿಬಿದ್ದಿದ್ದಾನೆ. ಬಂಧಿತ ಆರೋಪಿಯನ್ನು ಹೊನ್ನೇಶ ಎಂದು ಗುರುತಿಸಲಾಗಿದೆ. ವಿಚಾರಣೆ ವೇಳೆ ಕರೀಂ ಹಾಗೂ ಪುನೀತ್ ಎಂಬುವವರ ಜೊತೆ ಬೈಕ್ನಲ್ಲಿ ಬಂದು ಜೈಲಿನೊಳಗೆ ನಿಷೇಧಿತ ವಸ್ತುಗಳನ್ನು ಎಸೆಯಲು ಯತ್ನಿಸಿರುವುದಾಗಿ ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ. ಘಟನೆಗೆ ಸಂಬಂಧಿಸಿದಂತೆ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪರಾರಿಯಾಗಿರುವ ಕರೀಂ ಹಾಗೂ ಪುನೀತ್ಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.
ಶಿವಮೊಗ್ಗ ಕೇಂದ್ರ ಕಾರಾಗೃಹಕ್ಕೆ ನಿಷೇಧಿತ ವಸ್ತು ಎಸೆಯಲು ಯತ್ನ: ಓರ್ವನ ಬಂಧನ, ಇಬ್ಬರು ಪರಾರಿ
Date:
