Wednesday, November 4, 2026
Wednesday, November 4, 2026

ಸಚಿವ ಈಶ್ವರ ಖಂಡ್ರೆ ಸೂಚನೆಗೆ ಜಯ: ಹೊನ್ನೆಸರ ಕೆರೆ ಒತ್ತುವರಿ ತೆರವು

Date:

ಸಾಗರ ತಾಲೂಕಿನ ಹೊನ್ನೆಸರ ಕೆರೆಯ ಒತ್ತುವರಿ ತೆರವುಗೊಳಿಸುವ ಮೂಲಕ ಹೆಗ್ಗೋಡು ಗ್ರಾಮ ಪಂಚಾಯಿತಿ ಅಧಿಕಾರಿಗಳು ಕೆರೆ ಸಂರಕ್ಷಣೆಗೆ ಮುಂದಾಗಿದ್ದಾರೆ. ಸಚಿವ ಈಶ್ವರ ಖಂಡ್ರೆ ಅವರ ಖಡಕ್ ಸೂಚನೆಯ ಬೆನ್ನಲ್ಲೇ ಒತ್ತುವರಿ ತೆರವು ಕಾರ್ಯ ನಡೆದಿದ್ದು, ಗ್ರಾಮಸ್ಥರ ವರ್ಷಗಳ ಹೋರಾಟಕ್ಕೆ ಕೊನೆಗೂ ನ್ಯಾಯ ಸಿಕ್ಕಂತಾಗಿದೆ.

2022ರಿಂದ ನೆನೆಗುದಿಗೆ ಬಿದ್ದಿದ್ದ ಕೆರೆಯ 16 ಗುಂಟೆ ಒತ್ತುವರಿ ಭೂಮಿಯನ್ನು ಜೆಸಿಬಿ ಮೂಲಕ ತೆರವುಗೊಳಿಸಲಾಗಿದೆ. ಒಟ್ಟು 2 ಎಕರೆ 11 ಗುಂಟೆ ವಿಸ್ತೀರ್ಣದ ಹೊನ್ನೆಸರ ಕೆರೆಯಲ್ಲಿ ಒತ್ತುವರಿಯಾಗಿದ್ದ ಜಾಗವನ್ನು ಅಧಿಕಾರಿಗಳು ಮುಕ್ತಗೊಳಿಸಿದ್ದಾರೆ.

ಸೆಪ್ಟೆಂಬರ್ 29ರಂದು ನಡೆದ ಕೆಡಿಪಿ ಸಭೆಯಲ್ಲಿ ಸಚಿವ ಈಶ್ವರ ಖಂಡ್ರೆ ಅವರು ಜಿಲ್ಲಾ ಪಂಚಾಯಿತಿ ಸಿಇಒ ಹಾಗೂ ಇಲಾಖೆಯ ಕಾರ್ಯದರ್ಶಿಗೆ ಖಡಕ್ ಸೂಚನೆ ನೀಡಿದ್ದರು. ಪ್ರಭಾವಿಗಳಿಗೆ ಹೆದರದೆ ಕೆರೆಯನ್ನು ಸಂರಕ್ಷಿಸುವಂತೆ ಅಧಿಕಾರಿಗಳಿಗೆ ಆದೇಶಿಸಿದ್ದರು.

ಸಚಿವರ ಸೂಚನೆಯ ಹಿನ್ನೆಲೆಯಲ್ಲಿ ಹೆಗ್ಗೋಡು ಗ್ರಾಮ ಪಂಚಾಯಿತಿ ಅಧಿಕಾರಿಗಳು ಒತ್ತುವರಿ ತೆರವು ಕಾರ್ಯಾಚರಣೆ ನಡೆಸಿದ್ದು, ಹಲವು ವರ್ಷಗಳಿಂದ ಕೆರೆ ಉಳಿವಿಗಾಗಿ ಹೋರಾಡುತ್ತಿದ್ದ ಗ್ರಾಮಸ್ಥರಲ್ಲಿ ಸಂತಸ ಮೂಡಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kannada Rajyotsava ಕನ್ನಡ ಭಾಷೆಯನ್ನು ಉಳಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ: ಹೆಚ್.ಸಿ. ಸುರೇಶ್

Kannada Rajyotsava ಅನ್ಯ ಭಾಷೆಗಳ ಪ್ರಭಾವದಿಂದ ಕನ್ನಡ ಭಾಷೆಯ ಬಳಕೆ ಕಡಿಮೆಯಾಗುತ್ತಿರುವ...

Kannada Rajyotsava ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಕಟಣೆಗಳಿಗೆ ಶೇ.50% ರಿಯಾಯಿತಿ

Kannada Rajyotsava ಕನ್ನಡ ರಾಜ್ಯೋತ್ಸವದ ಅಂಗವಾಗಿ 2026ರ ನವೆಂಬರ್ ತಿಂಗಳು ಪೂರ್ತಿ...