Wednesday, November 4, 2026
Wednesday, November 4, 2026

ಶಿವಮೊಗ್ಗದಲ್ಲಿ ಆಸ್ಪತ್ರೆಗಳಿಗೆ ಖಾಸಗಿ ಪಾರ್ಕಿಂಗ್ ಕಡ್ಡಾಯ: ನಿಯಮ ಉಲ್ಲಂಘಿಸಿದರೆ ಕಾನೂನು ಕ್ರಮದ ಎಚ್ಚರಿಕೆ

Date:

ಶಿವಮೊಗ್ಗ ಸಂಚಾರ ವೃತ್ತ ಕಚೇರಿಯಲ್ಲಿ, ಶಿವಮೊಗ್ಗ ನಗರದ ಪಾರ್ಕ್ ಬಡಾವಣೆ ಹಾಗೂ ದುರ್ಗಿಗುಡಿ ಪ್ರದೇಶಗಳ ರಸ್ತೆಗಳಲ್ಲಿ ಪ್ರತಿದಿನ ಉಂಟಾಗುತ್ತಿರುವ ವಾಹನ ದಟ್ಟಣೆಯಿಂದ ಸುಗಮ ಸಂಚಾರಕ್ಕೆ ತೀವ್ರ ಅಡಚಣೆಯಾಗುತ್ತಿರುವ ಕುರಿತು ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಸ್ವೀಕೃತವಾಗಿರುತ್ತವೆ. ಅಲ್ಲದೆ, ಸಂಚಾರ ಗಸ್ತಿನ ಸಂದರ್ಭದಲ್ಲಿ ಸದರಿ ರಸ್ತೆಗಳಲ್ಲಿ ವಾಹನ ದಟ್ಟಣೆಯಿಂದಾಗಿ ಸಂಚಾರ ವ್ಯವಸ್ಥೆಗೆ ತೊಂದರೆಯಾಗುತ್ತಿರುವುದು ಕಂಡುಬಂದಿರುತ್ತದೆ.

ಈ ಹಿನ್ನೆಲೆಯಲ್ಲಿ, ಸದರಿ ಸಮಸ್ಯೆಯನ್ನು ನಿಯಂತ್ರಿಸಿ ಸುಗಮ ಸಂಚಾರ ವ್ಯವಸ್ಥೆಯನ್ನು ಕಲ್ಪಿಸುವ ಉದ್ದೇಶದಿಂದ ಶಿವಮೊಗ್ಗ ನಗರದ ಖಾಸಗಿ ಆಸ್ಪತ್ರೆಗಳ ಆಡಳಿತ ಮಂಡಳಿಯ ಮುಖ್ಯಸ್ಥರ ಸಭೆಯನ್ನು ಮಹಾನಗರ ಪಾಲಿಕೆಯ ಇಂಜಿನಿಯರ್‌ಗಳ ಸಮ್ಮುಖದಲ್ಲಿ ಕರೆಯಲಾಯಿತು.

ಸಭೆಯಲ್ಲಿ ಆಸ್ಪತ್ರೆಗಳ ಆಡಳಿತ ಮಂಡಳಿಯ ಮುಖ್ಯಸ್ಥರಿಗೆ ತಮ್ಮ ತಮ್ಮ ಆಸ್ಪತ್ರೆಗಳಿಗೆ ಆಗಮಿಸುವ ವಾಹನಗಳ ನಿಲುಗಡೆಗಾಗಿ ಆಸ್ಪತ್ರೆಯ ಆವರಣದಲ್ಲಿಯೇ ಸೂಕ್ತ ಪಾರ್ಕಿಂಗ್ ವ್ಯವಸ್ಥೆಯನ್ನು ಕಡ್ಡಾಯವಾಗಿ ಕಲ್ಪಿಸುವಂತೆ ಸೂಚಿಸಲಾಯಿತು. ಅಲ್ಲದೆ, ಆಸ್ಪತ್ರೆ ಕಟ್ಟಡ ನಿರ್ಮಾಣದ ಸಂದರ್ಭದಲ್ಲಿ ಪಾರ್ಕಿಂಗ್ ಉದ್ದೇಶಕ್ಕಾಗಿ ಮೀಸಲಿರಿಸಿರುವ ಸ್ಥಳವನ್ನು ಕಡ್ಡಾಯವಾಗಿ ವಾಹನಗಳ ನಿಲುಗಡೆಗೆ ಮಾತ್ರ ಬಳಸಬೇಕು ಹಾಗೂ ಸದರಿ ಸ್ಥಳವನ್ನು ಬೇರೆ ಯಾವುದೇ ಉದ್ದೇಶಕ್ಕಾಗಿ ಬಳಸಬಾರದು ಎಂದು ತಿಳಿಸಲಾಯಿತು.

ಮೇಲಿನ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಸಾರ್ವಜನಿಕರಿಗೆ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸಲು ಸಹಕರಿಸುವಂತೆ ತಿಳಿಸಲಾಯಿತು. ಸೂಚನೆಗಳನ್ನು ಉಲ್ಲಂಘಿಸುವ ಆಸ್ಪತ್ರೆಗಳ ಆಡಳಿತ ಮಂಡಳಿಗಳ ವಿರುದ್ಧ ನಿಯಮಾನುಸಾರ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸಭೆಯಲ್ಲಿ ಎಚ್ಚರಿಕೆ ನೀಡಲಾಯಿತು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kannada Rajyotsava ಕನ್ನಡ ಭಾಷೆಯನ್ನು ಉಳಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ: ಹೆಚ್.ಸಿ. ಸುರೇಶ್

Kannada Rajyotsava ಅನ್ಯ ಭಾಷೆಗಳ ಪ್ರಭಾವದಿಂದ ಕನ್ನಡ ಭಾಷೆಯ ಬಳಕೆ ಕಡಿಮೆಯಾಗುತ್ತಿರುವ...

Kannada Rajyotsava ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಕಟಣೆಗಳಿಗೆ ಶೇ.50% ರಿಯಾಯಿತಿ

Kannada Rajyotsava ಕನ್ನಡ ರಾಜ್ಯೋತ್ಸವದ ಅಂಗವಾಗಿ 2026ರ ನವೆಂಬರ್ ತಿಂಗಳು ಪೂರ್ತಿ...