Thursday, November 5, 2026
Thursday, November 5, 2026

ಮೆಟ್ರಕ್ ನಂತರದ ಸೌಲಭ್ಯಗಳ ಅರ್ಜಿ ಅವಧಿ ವಿಸ್ತರಣೆ

Date:

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2026-27ನೇ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ/ಅರೆಅಲೆಮಾರಿ ಜನಾಂಗದ ವಿದ್ಯಾರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ನವೆಂಬರ್ 30ರವರೆಗೆ ವಿಸ್ತರಿಸಿದೆ.
ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು https://ssp.postmatric.karnataka.gov.in ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಕಾರ್ಯಕ್ರಮಗಳ ವಿವರ, ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿವೇತನಕ್ಕೆ ಸಂಬಂಧಿಸಿದ ಸರ್ಕಾರದ ಆದೇಶಗಳ ಬಗ್ಗೆ ಹೆಚ್ಚಿನ ಮಾಹಿತಿಗಾಗಿ https://bcwd.karnataka.gov.in ವೆಬ್‌ಸೈಟ್ ಅನ್ನು ಭೇಟಿ ಮಾಡಬಹುದು. ಹೆಚ್ಚಿನ ಮಾಹಿತಿಗೆ ಇಲಾಖಾ ಸಹಾಯವಾಣಿ ದೂರವಾಣಿ ಸಂಖ್ಯೆ 8050770004 ಅಥವಾ ಇಮೇಲ್ bcwdhelpline@gmail.com ಅನ್ನು ಸಂಪರ್ಕಿಸಬಹುದಾಗಿದ್ದು, ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿಗಾಗಿ postmatrichelp@karnataka.gov.in ಅಥವಾ ದೂರವಾಣಿ ಸಂಖ್ಯೆ 1902 ಅನ್ನು ಸಂಪರ್ಕಿಸಬಹುದೆಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kannada Rajyotsava ಕನ್ನಡ ಭಾಷೆಯನ್ನು ಉಳಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ: ಹೆಚ್.ಸಿ. ಸುರೇಶ್

Kannada Rajyotsava ಅನ್ಯ ಭಾಷೆಗಳ ಪ್ರಭಾವದಿಂದ ಕನ್ನಡ ಭಾಷೆಯ ಬಳಕೆ ಕಡಿಮೆಯಾಗುತ್ತಿರುವ...

Kannada Rajyotsava ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಕಟಣೆಗಳಿಗೆ ಶೇ.50% ರಿಯಾಯಿತಿ

Kannada Rajyotsava ಕನ್ನಡ ರಾಜ್ಯೋತ್ಸವದ ಅಂಗವಾಗಿ 2026ರ ನವೆಂಬರ್ ತಿಂಗಳು ಪೂರ್ತಿ...