ದೀಪಾವಳಿ ಹಬ್ಬದ ಪ್ರಯುಕ್ತ ಶಾಲಾ ಮಕ್ಕಳಲ್ಲಿ ಸೃಜನಶೀಲತೆ ಹಾಗೂ ಕರಕುಶಲ ಕಲೆಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಶಿವಮೊಗ್ಗ ಜಿಲ್ಲಾ ಸಂಸ್ಥೆ ಹಾಗೂ ಸ್ಥಳೀಯ ಸಂಸ್ಥೆ ವತಿಯಿಂದ ಆಕಾಶಬುಟ್ಟಿ ತಯಾರಿಕಾ ಸ್ಪರ್ಧೆಯನ್ನು ಆಯೋಜಿಸಲಾಗಿದೆ.
ನ.07 ರಂದು ಮಧ್ಯಾಹ್ನ 1.30 ರಿಂದ ಸಂಜೆ 5.00 ಗಂಟೆಯವರೆಗೆ ಶಿವಮೊಗ್ಗದ ಬಿ.ಎಚ್. ರಸ್ತೆಯಲ್ಲಿರುವ ಜಿಲ್ಲಾ ಸ್ಕೌಟ್ ಭವನದಲ್ಲಿ ಸ್ಪರ್ಧೆ ನಡೆಯಲಿದೆ.
ಪ್ರಾಥಮಿಕ ಶಾಲೆ, ಹಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲಾ ವಿಭಾಗಗಳಲ್ಲಿ ಸ್ಪರ್ಧೆ ಆಯೋಜಿಸಲಾಗಿದ್ದು, ಪ್ರತಿ ವಿಭಾಗದಲ್ಲೂ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನಗಳನ್ನು ನೀಡಲಾಗುವುದು.
ಸ್ಪರ್ಧೆಯಲ್ಲಿ ಭಾಗವಹಿಸುವ ಮಕ್ಕಳು ತಮ್ಮದೇ ಆದ ಆಕಾಶಬುಟ್ಟಿಗಳನ್ನು ತಯಾರಿಸಿ ಪ್ರದರ್ಶಿಸಲು ಅವಕಾಶವಿದೆ. ಮಕ್ಕಳಲ್ಲಿ ಸೃಜನಶೀಲತೆ, ಕಲಾತ್ಮಕ ಅಭಿರುಚಿ ಹಾಗೂ ಸ್ವಾವಲಂಬನೆಯ ಮನೋಭಾವ ಬೆಳೆಸುವುದು ಸ್ಪರ್ಧೆಯ ಮುಖ್ಯ ಉದ್ದೇಶವಾಗಿದೆ.
ಆಸಕ್ತ ವಿದ್ಯಾರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆಯುಕ್ತರಾದ ಕೆ. ರವಿ ದೂರವಾಣಿ ಸಂಖ್ಯೆ: 96638 83213, ಜಿಲ್ಲಾ ಕಾರ್ಯದರ್ಶಿ ಕೆ.ವಿ. ಚಂದ್ರಶೇಖರಯ್ಯ ದೂರವಾಣಿ ಸಂಖ್ಯೆ: 99456 26593 ಹಾಗೂ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಎ.ವಿ. ರಾಜೇಶ್ ದೂರವಾಣಿ ಸಂಖ್ಯೆ: 98456 79549 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಸಂಸ್ಥೆಯ ತಿಳಿಸಿದೆ.
