Thursday, November 5, 2026
Thursday, November 5, 2026

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ರಾಯಲ್ ಶಾಲೆಯ ವಿದ್ಯಾರ್ಥಿಗಳ ಸಾಧನೆ

Date:

ಶಿವಮೊಗ್ಗ ನಗರದ ಪ್ರತಿಷ್ಠಿತ ರಾಯಲ್ ಇಂಗ್ಲಿಷ್ ಮೀಡಿಯಂ ಶಾಲೆಯ ವಿದ್ಯಾರ್ಥಿಗಳು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ವಿವಿಧ ವಿಭಾಗಗಳಲ್ಲಿ ಭಾಗವಹಿಸಿ ಒಟ್ಟು 26 ಬಹುಮಾನಗಳನ್ನು ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ.

ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು ಜಾನಪದ ನೃತ್ಯ, ಛದ್ಮವೇಷ, ಕವನ ವಾಚನ, ಗಜಲ್, ರಸಪ್ರಶ್ನೆ, ಅಭಿನಯ ಗೀತೆ, ಆಶುಭಾಷಣ ಹಾಗೂ ಉರ್ದು ಧಾರ್ಮಿಕ ಪಠಣ ಸೇರಿದಂತೆ ವಿವಿಧ ಸ್ಪರ್ಧೆಗಳಲ್ಲಿ ಪ್ರಥಮ ಬಹುಮಾನ ಪಡೆದಿದ್ದಾರೆ.

ಭರತನಾಟ್ಯ, ಚರ್ಚಾ ಸ್ಪರ್ಧೆ, ಜನಪದ ಗೀತೆ, ದೇಶಭಕ್ತಿ ಗೀತೆ, ಹಿಂದಿ, ಇಂಗ್ಲಿಷ್ ಹಾಗೂ ಕನ್ನಡ ಭಾಷಣ, ಪ್ರಬಂಧ ರಚನೆ ಮತ್ತು ಕಥೆ ಹೇಳುವ ಸ್ಪರ್ಧೆಗಳಲ್ಲಿ ದ್ವಿತೀಯ ಬಹುಮಾನ ಗಳಿಸಿದ್ದಾರೆ. ರಂಗೋಲಿ, ಭಾವಗೀತೆ, ಭಾಷಣ, ಹಿಂದಿ, ಇಂಗ್ಲಿಷ್ ಹಾಗೂ ಕನ್ನಡ ಕಂಠಪಾಠ ಮತ್ತು ಕವನ ವಾಚನ ಸ್ಪರ್ಧೆಗಳಲ್ಲಿ ತೃತೀಯ ಬಹುಮಾನ ಪಡೆದಿದ್ದಾರೆ.

ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಅಧ್ಯಕ್ಷರಾದ ಬಿ.ಟಿ. ತಿಪ್ಪೇಸ್ವಾಮಿ, ಗೌರವಾಧ್ಯಕ್ಷರಾದ ಎಸ್.ಎಸ್. ಜ್ಯೋತಿಪ್ರಕಾಶ್, ಕಾರ್ಯದರ್ಶಿ ಪೂಜಾ ನಾಗರಾಜ್, ಶಾಲೆಯ ಮುಖ್ಯೋಪಾಧ್ಯಾಯರಾದ ಮಂಜುನಾಥ್ ಎಲ್.ಎನ್. ಹಾಗೂ ಶಿಕ್ಷಕ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

ಶಾಲೆಯ ವಿದ್ಯಾರ್ಥಿಗಳ ಪ್ರತಿಭೆ ಮತ್ತು ಸಾಧನೆಗೆ ಆಡಳಿತ ಮಂಡಳಿ ಹಾಗೂ ಶಿಕ್ಷಕರು ಹರ್ಷ ವ್ಯಕ್ತಪಡಿಸಿ, ಮುಂದಿನ ದಿನಗಳಲ್ಲಿಯೂ ಹೆಚ್ಚಿನ ಸಾಧನೆ ಮಾಡುವಂತೆ ಶುಭ ಹಾರೈಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kannada Rajyotsava ಕನ್ನಡ ಭಾಷೆಯನ್ನು ಉಳಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ: ಹೆಚ್.ಸಿ. ಸುರೇಶ್

Kannada Rajyotsava ಅನ್ಯ ಭಾಷೆಗಳ ಪ್ರಭಾವದಿಂದ ಕನ್ನಡ ಭಾಷೆಯ ಬಳಕೆ ಕಡಿಮೆಯಾಗುತ್ತಿರುವ...

Kannada Rajyotsava ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಕಟಣೆಗಳಿಗೆ ಶೇ.50% ರಿಯಾಯಿತಿ

Kannada Rajyotsava ಕನ್ನಡ ರಾಜ್ಯೋತ್ಸವದ ಅಂಗವಾಗಿ 2026ರ ನವೆಂಬರ್ ತಿಂಗಳು ಪೂರ್ತಿ...