Thursday, November 5, 2026
Thursday, November 5, 2026

D.K. Shivakumar ಎರಡು ವರ್ಷಗಳಲ್ಲಿ 2 ಸಾವಿರ ಕೆಪಿಎಸ್ ಶಾಲೆಗಳ ಸ್ಥಾಪನೆ ಗುರಿ: ಡಿ.ಕೆ. ಶಿವಕುಮಾರ್

Date:

D.K. Shivakumar ರಾಜ್ಯದ ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ (ಕೆಪಿಎಸ್) ಉನ್ನತೀಕರಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ಸಮುದಾಯ ಮತ್ತು ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (CCSR) ಉಪಕ್ರಮದಡಿ ಒಟ್ಟು 15 ಸಂಸ್ಥೆಗಳೊಂದಿಗೆ 56 ಕೆಪಿಎಸ್ ಶಾಲೆಗಳ ಸ್ಥಾಪನೆಗಾಗಿ ₹206.10 ಕೋಟಿ ಮೊತ್ತದ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಮುಖ್ಯಮಂತ್ರಿ ಅವರ ಸಮ್ಮುಖದಲ್ಲಿ ನಡೆದ ‘ನಮ್ಮ ಶಾಲೆ ನಮ್ಮ ಜವಾಬ್ದಾರಿ’ ಎಂಬ ಕೊಡುಗೆದಾರರ ಸಭೆಯಲ್ಲಿ ಈ ಒಪ್ಪಂದಗಳನ್ನು ಮಾಡಿಕೊಳ್ಳಲಾಗಿದೆ.

ಈಗಾಗಲೇ ಸಿಸಿಎಸ್‌ಆರ್ ಉಪಕ್ರಮದಡಿ ₹85 ಕೋಟಿ ಮೊತ್ತದ 18 ಒಪ್ಪಂದಗಳನ್ನು ಮಾಡಿಕೊಳ್ಳಲಾಗಿದ್ದು, 33 ಶಾಲೆಗಳನ್ನು ಉನ್ನತೀಕರಿಸಲಾಗುತ್ತಿದೆ. ಇನ್ನು 12 ಸಂಸ್ಥೆಗಳೊಂದಿಗೆ 23 ಶಾಲೆಗಳ ಅಭಿವೃದ್ಧಿಗಾಗಿ ₹64 ಕೋಟಿ ಮೌಲ್ಯದ ಒಪ್ಪಂದ ಮಾಡಿಕೊಳ್ಳುವ ಪ್ರಕ್ರಿಯೆ ಪ್ರಗತಿಯಲ್ಲಿದೆ.

ಒಟ್ಟಾರೆ ಈ ಉಪಕ್ರಮದಡಿ ₹355.10 ಕೋಟಿ ಹೂಡಿಕೆಯೊಂದಿಗೆ 45 ಒಪ್ಪಂದಗಳನ್ನು ಮಾಡಿಕೊಳ್ಳಲಾಗಿದ್ದು, 112 ಕೆಪಿಎಸ್ ಶಾಲೆಗಳನ್ನು ಸ್ಥಾಪಿಸುವ ಯೋಜನೆ ರೂಪಿಸಲಾಗಿದೆ. ಮುಂದಿನ ಎರಡು ವರ್ಷಗಳಲ್ಲಿ ರಾಜ್ಯಾದ್ಯಂತ 2,000 ಕೆಪಿಎಸ್ ಶಾಲೆಗಳನ್ನು ಸ್ಥಾಪಿಸುವ ಗುರಿಯನ್ನು ಸರ್ಕಾರ ಹೊಂದಿದೆ.

ರಾಜ್ಯದ ಎಲ್ಲ ಅರ್ಹ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವುದೇ ಸರ್ಕಾರದ ಪ್ರಮುಖ ಉದ್ದೇಶವಾಗಿದೆ. ಸರ್ಕಾರಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಪಡಿಸಿ, ಶಿಕ್ಷಣದ ಗುಣಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ ಈ ಉಪಕ್ರಮ ಮಹತ್ವದ ಪಾತ್ರ ವಹಿಸಲಿದೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kannada Rajyotsava ಕನ್ನಡ ಭಾಷೆಯನ್ನು ಉಳಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ: ಹೆಚ್.ಸಿ. ಸುರೇಶ್

Kannada Rajyotsava ಅನ್ಯ ಭಾಷೆಗಳ ಪ್ರಭಾವದಿಂದ ಕನ್ನಡ ಭಾಷೆಯ ಬಳಕೆ ಕಡಿಮೆಯಾಗುತ್ತಿರುವ...

Kannada Rajyotsava ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಕಟಣೆಗಳಿಗೆ ಶೇ.50% ರಿಯಾಯಿತಿ

Kannada Rajyotsava ಕನ್ನಡ ರಾಜ್ಯೋತ್ಸವದ ಅಂಗವಾಗಿ 2026ರ ನವೆಂಬರ್ ತಿಂಗಳು ಪೂರ್ತಿ...