Thursday, November 5, 2026
Thursday, November 5, 2026

ಭಾರತೀಯ ಸೇನೆ ಸೇವಾ ಉಚಿತ ವೃತ್ತಿ ಮಾರ್ಗದರ್ಶನ ಮತ್ತು ತರಬೇತಿಗೆ ಅರ್ಜಿ ಆಹ್ವಾನ

Date:

ಭಾರತೀಯ ಸೇನೆ/ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2026-27 ನೇ ಸಾಲಿನ 2 ನೇ ತಂಡ (ಬಾಲಕರಿಗೆ ಮಾತ್ರ)ಕ್ಕಾಗಿ ಆಯ್ಕೆ ಪೂರ್ವ ಸಿದ್ದತೆ ಬಗ್ಗೆ ಉಚಿತ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಆಭ್ಯರ್ಥಿಗಳು ನಿಗದಿತ ನಮೂನೆ ಅರ್ಜಿಯನ್ನು ಆಯಾ ಜಿಲ್ಲೆಯ ಜಿಲ್ಲಾ/ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ ಅರ್ಜಿಯನ್ನು ಖುದ್ದಾಗಿ ಅಥವಾ ನೊಂದಾಯಿತ ಅಂಚೆಯ ಮೂಲಕ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಆನೆಗುಂಡಿ ರಸ್ತೆ, ಬಿಜೈ ಕಾಪಿಕಾಡ್, ಮಂಗಳೂರು ತಾಲೂಕು, ದಕ್ಷಿಣ ಕನ್ನಡ ಜಿಲ್ಲೆ-575004 ಇಲ್ಲಿಗೆ ದಿ:03/12/2026 ರೊಳಗಾಗಿ ಸಲ್ಲಿಸುವುದು.
ಅರ್ಜಿ ಸಲ್ಲಿಸಲು ಅಭ್ಯರ್ಥಿ ಮತ್ತು ಕುಟುಂಬದ ಒಟ್ಟು ಗರಿಷ್ಟ ವಾರ್ಷಿಕ ಆದಾಯ ಮಿತಿ ಪ್ರವರ್ಗ-1ಕ್ಕೆ ರೂ.2.50 ಲಕ್ಷ ಹಾಗೂ ಪ್ರವರ್ಗ-2(ಎ), 3(ಎ) ಮತ್ತು 3(ಬಿ) ಗಳಿಗೆ ರೂ. 1 ಲಕ್ಷ ಒಳಗೊಂಡಿರಬೇಕು. ಅಭ್ಯರ್ಥಿಯು 10 ನೇ ತರಗತಿಯನ್ನು ಉತೀರ್ಣವಾಗಿದ್ದು, ಪ್ರತಿ ವಿಷಯದಲ್ಲಿ ಕನಿಷ್ಟ 33 ಅಂಕಗಳು ಮತ್ತು ಸರಾಸರಿ ಶೇ.45 ರಷ್ಟು ಅಂಕಗಳನ್ನು ಪಡೆದಿರಬೇಕು. ಗ್ರೇಡಿಂಗ್ ಸಿಸ್ಟಂ ಇದ್ದಲ್ಲಿ ಮೇಲ್ಕಂಡಂತೆ ಸಮಾನವಾದ ಗ್ರೇಡ್ ಪಡೆದಿರಬೇಕು. ಜನ್ಮ ದಿನಾಂಕ ಮತ್ತು ವಯಸ್ಸು 03/12/2026ಕ್ಕೆ ಅನ್ವಯಿಸುವಂತೆ ಅಭ್ಯರ್ಥಿಯು 03/12/2006 ರಿಂದ 03/12/2009 ರ ನಡುವಿನ ಅವಧಿಯಲ್ಲಿ ಜನಿಸಿರಬೇಕು. ಅಭ್ಯರ್ಥಿಗಳು ರ‍್ಯಾಲಿಯಲ್ಲಿ 10ನೇ ತರಗತಿ ಅಂಕಪಟ್ಟಿ, ಆಧಾರ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳ ಮೂಲದಾಖಲೆಗಳೊಂದಿಗೆ ಭಾಗವಹಿಸುವುದು.
ಅಭ್ಯರ್ಥಿಗಳಿಗೆ ತರಬೇತಿಯನ್ನು ದಕ್ಷಿಣ ಕನ್ನಡ ಜಿಲ್ಲೆಯನ್ನು ಆಯ್ಕೆ ಮಾಡಿಕೊಂಡ ಅಭ್ಯರ್ಥಿಗಳಿಗೆ ತರಬೇತಿಯನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾತ್ರ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ದೂ.ಸಂ.:0824-2225078/ 08182-222129 ಗಳನ್ನು ಸಂಪರ್ಕಿಸುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.

✒️

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kannada Rajyotsava ಕನ್ನಡ ಭಾಷೆಯನ್ನು ಉಳಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ: ಹೆಚ್.ಸಿ. ಸುರೇಶ್

Kannada Rajyotsava ಅನ್ಯ ಭಾಷೆಗಳ ಪ್ರಭಾವದಿಂದ ಕನ್ನಡ ಭಾಷೆಯ ಬಳಕೆ ಕಡಿಮೆಯಾಗುತ್ತಿರುವ...

Kannada Rajyotsava ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಕಟಣೆಗಳಿಗೆ ಶೇ.50% ರಿಯಾಯಿತಿ

Kannada Rajyotsava ಕನ್ನಡ ರಾಜ್ಯೋತ್ಸವದ ಅಂಗವಾಗಿ 2026ರ ನವೆಂಬರ್ ತಿಂಗಳು ಪೂರ್ತಿ...