ಹೊಸನಗರ ತಾಲೂಕಿನ ರಿಪ್ಪನ್ಪೇಟೆ ಸಮೀಪದ ವಡಗೆರೆ ಬಳಿ ಬೈಕ್ ನಿಯಂತ್ರಣ ತಪ್ಪಿ ಸ್ಕಿಡ್ ಆಗಿ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ.
ಶಿಕಾರಿಪುರ ತಾಲೂಕಿನ ನೆಲಬಾಗಿಲು ಗ್ರಾಮದ ದೇವದಾಸ್ ಗಾಯಗೊಂಡ ವ್ಯಕ್ತಿ. ಪಾತ್ರೆ ವ್ಯಾಪಾರ ಮುಗಿಸಿ ವಾಪಸ್ಸಾಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.
ಅಪಘಾತದ ತೀವ್ರತೆಗೆ ದೇವದಾಸ್ ಅವರಿಗೆ ಗಂಭೀರ ಗಾಯಗಳಾಗಿದ್ದು, ತೀವ್ರ ರಕ್ತಸ್ರಾವವಾಗಿದೆ. ತಕ್ಷಣ ಅವರನ್ನು ರಿಪ್ಪನ್ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಈ ಘಟನೆ ರಿಪ್ಪನ್ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
