Saturday, November 7, 2026
Saturday, November 7, 2026

ಶಿವಮೊಗ್ಗದಲ್ಲಿ ಆಟೋರಿಕ್ಷಾಗಳಿಗೆ ಮೀಟರ್ ಅಳವಡಿಕೆ ಕಡ್ಡಾಯ-ಸಾರಿಗೆ ಅಧಿಕಾರಿ ಪ್ರಕಟಣೆ

Date:

ಶಿವಮೊಗ್ಗ ನಗರದಲ್ಲಿ ಸಂಚರಿಸುವ ಆಟೋರಿಕ್ಷಾಗಳಲ್ಲಿ ಮೀಟರ್ ಅಳವಡಿಸದೇ, ಪ್ರಯಾಣಿಕರಿಂದ ಅವೈಜ್ಞಾನಿಕವಾಗಿ ಹೆಚ್ಚಿನ ದರ ವಸೂಲಿ ಮಾಡುತ್ತಿರುವ ಕುರಿತು ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ಶಿವಮೊಗ್ಗ ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಕಟ್ಟುನಿಟ್ಟಿನ ಸೂಚನೆ ಹೊರಡಿಸಿದೆ.
ಸಾರ್ವಜನಿಕ ಸುಗಮ ಸಂಚಾರ ವ್ಯವಸ್ಥೆಯ ಹಿತದೃಷ್ಟಿಯಿಂದ ಶಿವಮೊಗ್ಗ ನಗರದ ಎಲ್ಲಾ ಆಟೋರಿಕ್ಷಾ ಚಾಲಕರು ಹಾಗೂ ಮಾಲೀಕರು ಮುಂದಿನ 10 ದಿನಗಳೊಳಗಾಗಿ ಕಡ್ಡಾಯವಾಗಿ ಮೀಟರ್ ಅಳವಡಿಸಿಕೊಳ್ಳಬೇಕು ಮತ್ತು ಪ್ರಾಧಿಕಾರ ನಿಗದಿಪಡಿಸಿದ ದರವನ್ನಷ್ಟೇ ಪಡೆಯಬೇಕು ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೂರು ನೀಡಲು ಸಹಾಯವಾಣಿ:
ಆಟೋರಿಕ್ಷಾ ಚಾಲಕರು ಮೀಟರ್ ಪ್ರಕಾರ ಬಾಡಿಗೆ ಪಡೆಯದಿದ್ದಲ್ಲಿ ಅಥವಾ ಮೀಟರ್ ಹಾಕಲು ನಿರಾಕರಿಸಿದಲ್ಲಿ, ಸಾರ್ವಜನಿಕರು ತಕ್ಷಣವೇ ದೂರು ಸಲ್ಲಿಸಲು ಮೊಬೈಲ್ ಸಂಖ್ಯೆ: 8277983404 ಅನ್ನು ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B. Y. Raghavendra ಬೆಳೆ ವಿಮಾ ಕಂಪನಿಗಳು ರೈತರಿಗೆ ಘೋಷಿಸಿದ ವಿಮಾ ಪರಿಹಾರ ಮೊತ್ತ ನೀಡಿ- ಬಿ.ವೈ.ರಾಘವೇಂದ್ರ

B. Y. Raghavendra ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಮುಂಗಾರು...

Kannada Rajyotsava ಕನ್ನಡ ಭಾಷೆಯನ್ನು ಉಳಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ: ಹೆಚ್.ಸಿ. ಸುರೇಶ್

Kannada Rajyotsava ಅನ್ಯ ಭಾಷೆಗಳ ಪ್ರಭಾವದಿಂದ ಕನ್ನಡ ಭಾಷೆಯ ಬಳಕೆ ಕಡಿಮೆಯಾಗುತ್ತಿರುವ...

Kannada Rajyotsava ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಕಟಣೆಗಳಿಗೆ ಶೇ.50% ರಿಯಾಯಿತಿ

Kannada Rajyotsava ಕನ್ನಡ ರಾಜ್ಯೋತ್ಸವದ ಅಂಗವಾಗಿ 2026ರ ನವೆಂಬರ್ ತಿಂಗಳು ಪೂರ್ತಿ...