Saturday, November 7, 2026
Saturday, November 7, 2026

The Bharat Scouts and Guides ಮಕ್ಕಳಲ್ಲಿ ಶಿಸ್ತು,ಸೇವಾಮನೋಭಾವ,ನಾಯಕತ್ವ ಗುಣ ಬೆಳೆಸುವಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯದ್ದು ಮುಖ್ಯಪಾತ್ರ- ವಿ.ಅಭಿಷೇಕ್.

Date:

The Bharat Scouts and Guides ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಸಂಸ್ಥೆಯ 77ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಜಿಲ್ಲಾ ಸಂಸ್ಥೆಯ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಧ್ವಜ ದಿನದ ಚೀಟಿ ಬಿಡುಗಡೆ ಸಮಾರಂಭವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಅಭಿಷೇಕ್ ವಿ. ಅವರು ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್‌ನ ಧ್ವಜ ದಿನದ ಚೀಟಿಯನ್ನು ಬಿಡುಗಡೆಗೊಳಿಸಿ ಮಾತನಾಡಿದರು.

ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯು ಮಕ್ಕಳಲ್ಲಿ ಶಿಸ್ತು, ಸೇವಾ ಮನೋಭಾವ, ನಾಯಕತ್ವ ಗುಣ, ದೇಶಪ್ರೇಮ ಹಾಗೂ ಸಮಾಜಸೇವೆಯ ಮೌಲ್ಯಗಳನ್ನು ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ. ವಿದ್ಯಾರ್ಥಿಗಳು ಉತ್ತಮ ನಾಗರಿಕರಾಗಿ ರೂಪುಗೊಳ್ಳಲು ಸಂಸ್ಥೆಯ ಚಟುವಟಿಕೆಗಳು ಸಹಕಾರಿಯಾಗಿವೆ ಎಂದು ತಿಳಿಸಿದರು.

ಸಂಸ್ಥೆಯ ಧ್ವಜ ದಿನದ ಚೀಟಿ ಬಿಡುಗಡೆ ಮೂಲಕ ಸಂಸ್ಥೆಯ ಸೇವಾ ಚಟುವಟಿಕೆಗಳು ಹಾಗೂ ಧ್ಯೇಯೋದ್ದೇಶಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶ ಹೊಂದಲಾಗಿದೆ.

The Bharat Scouts and Guides ಕಾರ್ಯಕ್ರಮದಲ್ಲಿ ಪ್ರಧಾನ ಆಯುಕ್ತರಾದ ಶಕುಂತಲಾ ಚಂದ್ರಶೇಖರ್, ಆಯುಕ್ತರಾದ ಎಸ್.ಜಿ. ಆನಂದ್, ಕೆ. ರವಿ, ರಾಜೇಶ್ ಅವಲಕ್ಕಿ, ಕೇಂದ್ರ ಸ್ಥಾನಿಕ ಆಯುಕ್ತರಾದ ಜಿ. ವಿಜಯ್ ಕುಮಾರ್, ಮಲ್ಲಿಕಾರ್ಜುನ್ ಕಾನೂರ್, ಸಿ.ಎನ್. ಸುಜಯ್, ಸೋಮಣ್ಣ, ಪ್ರಭಾವತಿ ಹಾಗೂ ಕಾರ್ಯದರ್ಶಿ ಕೆ.ವಿ. ಚಂದ್ರಶೇಖರಯ್ಯ ಸೇರಿದಂತೆ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಸಂಸ್ಥೆಯ ವಿವಿಧ ಪದಾಧಿಕಾರಿಗಳು ಹಾಗೂ ನ್ಯಾಷನಲ್ ಪಬ್ಲಿಕ್ ಶಾಲೆಯ ಕಬ್ಸ್ ಅಂಡ್ ಬುಲ್ ಬುಲ್ಸ್ ಮತ್ತು ಶಿಕ್ಷಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B. Y. Raghavendra ಬೆಳೆ ವಿಮಾ ಕಂಪನಿಗಳು ರೈತರಿಗೆ ಘೋಷಿಸಿದ ವಿಮಾ ಪರಿಹಾರ ಮೊತ್ತ ನೀಡಿ- ಬಿ.ವೈ.ರಾಘವೇಂದ್ರ

B. Y. Raghavendra ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಮುಂಗಾರು...

Kannada Rajyotsava ಕನ್ನಡ ಭಾಷೆಯನ್ನು ಉಳಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ: ಹೆಚ್.ಸಿ. ಸುರೇಶ್

Kannada Rajyotsava ಅನ್ಯ ಭಾಷೆಗಳ ಪ್ರಭಾವದಿಂದ ಕನ್ನಡ ಭಾಷೆಯ ಬಳಕೆ ಕಡಿಮೆಯಾಗುತ್ತಿರುವ...

Kannada Rajyotsava ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಕಟಣೆಗಳಿಗೆ ಶೇ.50% ರಿಯಾಯಿತಿ

Kannada Rajyotsava ಕನ್ನಡ ರಾಜ್ಯೋತ್ಸವದ ಅಂಗವಾಗಿ 2026ರ ನವೆಂಬರ್ ತಿಂಗಳು ಪೂರ್ತಿ...