ತೀರ್ಥಹಳ್ಳಿ ತಾಲೂಕಿನ ಮೇಳಿಗೆ ಗ್ರಾಮದ ಕೌರಿಬೈಲು ಬಳಿ ವಾಹನ ಡಿಕ್ಕಿಯಾಗಿ ಚಿರತೆ ಮರಿ ಸಾವನ್ನಪ್ಪಿದೆ. ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವ ರಸ್ತೆಯಲ್ಲಿ ಚಿರತೆ ಮರಿ ರಸ್ತೆ ದಾಟುತ್ತಿದ್ದ ವೇಳೆ ವಾಹನವೊಂದು ಡಿಕ್ಕಿ ಹೊಡೆದಿರುವ ಶಂಕೆ ವ್ಯಕ್ತವಾಗಿದೆ.
ಈ ಭಾಗದಲ್ಲಿ ಹಲವು ಚಿರತೆಗಳಿದ್ದು, ರಸ್ತೆ ದಾಟುವ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ರಸ್ತೆಯಲ್ಲಿ ವಾಹನಗಳ ವೇಗಕ್ಕೆ ನಿಯಂತ್ರಣ ಹೇರುವುದರ ಜತೆಗೆ, ವನ್ಯಜೀವಿಗಳ ಸಂರಕ್ಷಣೆಗೆ ಸೂಕ್ತ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
