ಶಿವಮೊಗ್ಗ ಜಿಲ್ಲಾಡಳಿತದ ನೂತನ ಜಿಲ್ಲಾಧಿಕಾರಿಗಳಾಗಿ ಅಧಿಕಾರ ಸ್ವೀಕರಿಸಿರುವ ಶ್ರೀಯುತ ಪ್ರಕಾಶ್ ಜಿ.ಟಿ. ನಿಟಳಿ ಅವರಿಗೆ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ ಆತ್ಮೀಯವಾಗಿ ಗೌರವಿಸಿ, ಸುಸ್ವಾಗತ ಕೋರಲಾಯಿತು.
ಸಂಘದ ಅಧ್ಯಕ್ಷರನ್ನೊಳಗೊಂಡ ನಿಯೋಗವು ನೂತನ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ, ಅಭಿನಂದನೆ ಸಲ್ಲಿಸುವುದರ ಜೊತೆಗೆ ಜಿಲ್ಲೆಯ ಆರ್ಥಿಕ ಮತ್ತು ಕೈಗಾರಿಕಾ ಪ್ರಗತಿಯ ಕುರಿತು ಸಮಾಲೋಚನೆ ನಡೆಸಿತು.
ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷರಾದ ಬಿ ಗೋಪಿನಾಥ್ ಉಪಾಧ್ಯಕ್ಷರದ ಜಿ ವಿಜಯ್ ಕುಮಾರ್ ಕಾರ್ಯದರ್ಶಿ ಎ ಎಂ ಸುರೇಶ್ ಖಜಾಂಚಿ ಆರ್ ಮನೋಹರ ರವರು. ಉಪಸ್ಥಿತರಿದ್ದರು
