Sunday, November 8, 2026
Sunday, November 8, 2026

ಹೊಸನಗರದಲ್ಲಿ ಕೆಎಸ್‌ಆರ್‌ಟಿಸಿ ಸಿಬ್ಬಂದಿಯ ಮಾನವೀಯತೆ: ಸಮಯಪ್ರಜ್ಞೆಯಿಂದ ಪ್ರಯಾಣಿಕನ ಪ್ರಾಣ ರಕ್ಷಣೆ

Date:

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರಿಗೆ ದಿಢೀರ್ ಎದೆನೋವು ಕಾಣಿಸಿಕೊಂಡಾಗ, ಸಮಯಪ್ರಜ್ಞೆ ಮೆರೆದ ಚಾಲಕ ಹಾಗೂ ನಿರ್ವಾಹಕರು ಅವರನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ.

ಸಾಗರದಿಂದ ಹೊಸನಗರಕ್ಕೆ ಸಂಚರಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಸೋನಲೆ ಗ್ರಾಮೀಣ ಬ್ಯಾಂಕ್ ಉದ್ಯೋಗಿ ವಿಶ್ವನಾಥ್ ಅವರಿಗೆ ಇದ್ದಕ್ಕಿದ್ದಂತೆ ಎದೆನೋವು ಕಾಣಿಸಿಕೊಂಡು ಅಸ್ವಸ್ಥರಾಗಿದ್ದಾರೆ.

ಈ ಸಂದರ್ಭದಲ್ಲಿ ಆಂಬ್ಯುಲೆನ್ಸ್‌ಗಾಗಿ ಕಾಯದೆ, ಬಸ್ ಚಾಲಕ ಮೋಹನ್ ಹಾಗೂ ನಿರ್ವಾಹಕ ಪರಮೇಶ್ವರ್ ಟಿ. ನಾಯ್ಕ ಅವರು ತಕ್ಷಣ ಬಸ್ಸನ್ನೇ ನೇರವಾಗಿ ಹೊಸನಗರ ಸರ್ಕಾರಿ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ.

ಗೋಲ್ಡನ್ ಅವರ್‌ನಲ್ಲಿಯೇ ಆಸ್ಪತ್ರೆಗೆ ದಾಖಲಾದ ವಿಶ್ವನಾಥ್ ಅವರಿಗೆ ವೈದ್ಯರು ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಆಸ್ಪತ್ರೆಗೆ ರವಾನಿಸಲಾಗಿದೆ.

ಪ್ರಯಾಣಿಕನ ಸಂಕಷ್ಟದ ಸಮಯದಲ್ಲಿ ಮಾನವೀಯತೆ ಹಾಗೂ ಕರ್ತವ್ಯಪ್ರಜ್ಞೆ ಮೆರೆದ ಕೆಎಸ್‌ಆರ್‌ಟಿಸಿ ಚಾಲಕ ಮೋಹನ್ ಮತ್ತು ನಿರ್ವಾಹಕ ಪರಮೇಶ್ವರ್ ಟಿ. ನಾಯ್ಕ ಅವರ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B. Y. Raghavendra ಬೆಳೆ ವಿಮಾ ಕಂಪನಿಗಳು ರೈತರಿಗೆ ಘೋಷಿಸಿದ ವಿಮಾ ಪರಿಹಾರ ಮೊತ್ತ ನೀಡಿ- ಬಿ.ವೈ.ರಾಘವೇಂದ್ರ

B. Y. Raghavendra ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಮುಂಗಾರು...

Kannada Rajyotsava ಕನ್ನಡ ಭಾಷೆಯನ್ನು ಉಳಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ: ಹೆಚ್.ಸಿ. ಸುರೇಶ್

Kannada Rajyotsava ಅನ್ಯ ಭಾಷೆಗಳ ಪ್ರಭಾವದಿಂದ ಕನ್ನಡ ಭಾಷೆಯ ಬಳಕೆ ಕಡಿಮೆಯಾಗುತ್ತಿರುವ...

Kannada Rajyotsava ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಕಟಣೆಗಳಿಗೆ ಶೇ.50% ರಿಯಾಯಿತಿ

Kannada Rajyotsava ಕನ್ನಡ ರಾಜ್ಯೋತ್ಸವದ ಅಂಗವಾಗಿ 2026ರ ನವೆಂಬರ್ ತಿಂಗಳು ಪೂರ್ತಿ...