ಶಿವಮೊಗ್ಗ, ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಶಿವಮೊಗ್ಗ ವತಿಯಿಂದ ದಿನಾಂಕ 13-11-2026 ರಂದು ಬೆಳಿಗ್ಗೆ 10 ಗಂಟೆಗೆ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ.
ಈ ನೇರ ಸಂದರ್ಶನದಲ್ಲಿ ‘ಸಾಯಿ ಇಂಡಿಯಾ ಪ್ರೈ. ಲಿ.’ ಖಾಸಗಿ ಕಂಪನಿಯು ಭಾಗವಹಿಸುತ್ತಿದ್ದು, ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಿದೆ.
ಶೈಕ್ಷಣಿಕ ಅರ್ಹತೆ: ಐಟಿಐ ಮತ್ತು ಯಾವುದೇ ವಿಷಯದಲ್ಲಿ ಡಿಪ್ಲೊಮಾ ಮಾಡಿರುವ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಭಾಗವಹಿಸಬಹುದು.
ಪ್ರವೇಶ ಉಚಿತವಿದ್ದು, ಆಸಕ್ತ ಅಭ್ಯರ್ಥಿಗಳು ತಮ್ಮ ರಿಸ್ಯೂಮ್ ಮತ್ತು ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಗುತ್ಯಪ್ಪ ಕಾಲೋನಿ, ಪಂಪಾ ನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿ ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿಯನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ: 9380663606, 9108235132 ಮೂಲಕ ಸಂಪರ್ಕಿಸಬಹುದು ಎಂದು ಉದ್ಯೋಗಾಧಿಕಾರಿ ತಿಳಿಸಿದ್ದಾರೆ.
ನವೆಂಬರ್ 13 ರಂದು ಜಿಲ್ಲಾ ಉದ್ಯೋಗ ವಿನಿಮಯ ಕಛೇರಿಯಿಂದ ನೇರ ಸಂದರ್ಶನ
Date:
