Monday, November 9, 2026
Monday, November 9, 2026

ನವೆಂಬರ್ 21ರಿಂದ ಶಿವಮೊಗ್ಗ ವಿಮಾನ ನಿಲ್ದಾಣದಿಂದ ವಿಮಾನ ಸೇವೆ ಸಂಪೂರ್ಣ ಸ್ಥಗಿತ!

Date:

ಶಿವಮೊಗ್ಗ ಜಿಲ್ಲೆಯ ಜನರಿಗೆ ಮತ್ತೊಂದು ನಿರಾಸೆಯ ಸುದ್ದಿ ಎದುರಾಗಿದೆ. ನವೆಂಬರ್ 21ರಿಂದ ಶಿವಮೊಗ್ಗದ ಸೋಗಾನೆ ವಿಮಾನ ನಿಲ್ದಾಣದಿಂದ ವಿಮಾನಯಾನ ಸೇವೆ ಸಂಪೂರ್ಣ ಸ್ಥಗಿತಗೊಳ್ಳುವ ಸಾಧ್ಯತೆ ಎದುರಾಗಿದೆ.

ಸ್ಟಾರ್ ಏರ್ ಸಂಸ್ಥೆಯು ತನ್ನ ವಿಮಾನ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲು ನಿರ್ಧರಿಸಿದ್ದು, ಈಗಾಗಲೇ ಟಿಕೆಟ್ ಬುಕಿಂಗ್ ಪ್ರಕ್ರಿಯೆಯನ್ನೂ ನಿಲ್ಲಿಸಿದೆ ಎನ್ನಲಾಗಿದೆ. ನವೆಂಬರ್ 20ರವರೆಗೆ ಮಾತ್ರ ವಿಮಾನ ಟಿಕೆಟ್‌ಗಳು ಲಭ್ಯವಿದ್ದು, ನಂತರ ಶಿವಮೊಗ್ಗದಿಂದ ವಿಮಾನ ಹಾರಾಟ ಇರುವುದಿಲ್ಲ.

ಕೇಂದ್ರ ಸರ್ಕಾರದ ಉಡಾನ್ ಯೋಜನೆಯಡಿ ನೀಡಲಾಗುತ್ತಿದ್ದ ಸಬ್ಸಿಡಿ ಅವಧಿ ಮುಕ್ತಾಯಗೊಂಡಿದ್ದು, ಸರ್ಕಾರದ ಧನಸಹಾಯ ಸ್ಥಗಿತಗೊಂಡಿರುವುದೇ ಈ ನಿರ್ಧಾರಕ್ಕೆ ಪ್ರಮುಖ ಕಾರಣ ಎನ್ನಲಾಗಿದೆ.

ಇದರಿಂದ ಶಿವಮೊಗ್ಗದಿಂದ ಹೈದರಾಬಾದ್, ಗೋವಾ ಹಾಗೂ ತಿರುಪತಿಗೆ ಲಭ್ಯವಿದ್ದ ವಿಮಾನ ಸಂಪರ್ಕ ಸ್ಥಗಿತಗೊಳ್ಳಲಿದೆ. ಈಗಾಗಲೇ ಇಂಡಿಗೋ ಸಂಸ್ಥೆಯ ಸೇವೆ ಸ್ಥಗಿತಗೊಂಡ ಬೆನ್ನಲ್ಲೇ ಸ್ಟಾರ್ ಏರ್ ಕೂಡ ಹಿಂದೆ ಸರಿಯುತ್ತಿರುವುದು ಮಲೆನಾಡಿನ ಪ್ರಯಾಣಿಕರಿಗೆ ತೀವ್ರ ನಿರಾಸೆ ಮೂಡಿಸಿದೆ.

ಪ್ರಾದೇಶಿಕ ವಿಮಾನ ಸಂಪರ್ಕದ ಮೂಲಕ ಅಭಿವೃದ್ಧಿಯ ನಿರೀಕ್ಷೆ ಹೊಂದಿದ್ದ ಮಲೆನಾಡಿನ ಜನರಿಗೆ ಇದೀಗ ಮತ್ತೆ ವಿಮಾನಯಾನ ಸೇವೆ ಯಾವಾಗ ಪುನರಾರಂಭವಾಗಲಿದೆ ಎಂಬ ಪ್ರಶ್ನೆ ಎದುರಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗೃಹಲಕ್ಷ್ಮಿಯ ಬಲ, ಸ್ವಾವಲಂಬನೆಯ ಫಲ- ಡಿ.ಕೆ.ಶಿವಕುಮಾರ್

ಚಕ್ಕುಲಿ, ನಿಪ್ಪಟ್ಟು ಸೇರಿದಂತೆ 20ಕ್ಕೂ ಹೆಚ್ಚು ಬಗೆಯ ತಿನಿಸುಗಳನ್ನು ತಯಾರಿಸಿ ಮಾರಾಟ...

B. Y. Raghavendra ಬೆಳೆ ವಿಮಾ ಕಂಪನಿಗಳು ರೈತರಿಗೆ ಘೋಷಿಸಿದ ವಿಮಾ ಪರಿಹಾರ ಮೊತ್ತ ನೀಡಿ- ಬಿ.ವೈ.ರಾಘವೇಂದ್ರ

B. Y. Raghavendra ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಮುಂಗಾರು...

Kannada Rajyotsava ಕನ್ನಡ ಭಾಷೆಯನ್ನು ಉಳಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ: ಹೆಚ್.ಸಿ. ಸುರೇಶ್

Kannada Rajyotsava ಅನ್ಯ ಭಾಷೆಗಳ ಪ್ರಭಾವದಿಂದ ಕನ್ನಡ ಭಾಷೆಯ ಬಳಕೆ ಕಡಿಮೆಯಾಗುತ್ತಿರುವ...

Kannada Rajyotsava ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಕಟಣೆಗಳಿಗೆ ಶೇ.50% ರಿಯಾಯಿತಿ

Kannada Rajyotsava ಕನ್ನಡ ರಾಜ್ಯೋತ್ಸವದ ಅಂಗವಾಗಿ 2026ರ ನವೆಂಬರ್ ತಿಂಗಳು ಪೂರ್ತಿ...