ಭದ್ರಾವತಿ ತಾಲೂಕಿನ ಗುಡರ್ ಕೊಪ್ಪ ತಾಂಡ ಗ್ರಾಮದ ಸಮೀಪದ ಮುಖ್ಯ ರಸ್ತೆಯಲ್ಲಿ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.
ಯೋಗೀಶ್ ಎಂಬುವರಿಗೆ ಸೇರಿದ ಕಾರು ಎದುರಿನಿಂದ ಬಂದ ಬೈಕ್‌ಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಹೊಳೆಹೊನ್ನೂರು ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
