Thursday, November 12, 2026
Thursday, November 12, 2026

ಶಿವಮೊಗ್ಗ ಜಿಲ್ಲೆಯಲ್ಲಿನ ಕ್ಷ-ಕಿರಣ ತಂತ್ರಜ್ಞರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

Date:

ಶಿವಮೊಗ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘದ (ಕ್ಷಯರೋಗ ವಿಭಾಗ) ವತಿಯಿಂದ ರಾಷ್ಟ್ರೀಯ ಆರೋಗ್ಯ ಅಭಿಯಾನದ ರಾಷ್ಟ್ರೀಯ ಕ್ಷಯರೋಗ ನಿರ್ಮೂಲನ ಕಾರ್ಯಕ್ರಮದಡಿ ಜಿಲ್ಲೆಯಲ್ಲಿ ಒಳಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸಲು ಖಾಲಿ ಇರುವ 3 ಕ್ಷ-ಕಿರಣ ತಂತ್ರಜ್ಞರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
10ನೇ ತರಗತಿ ಹಾಗೂ ಡಿಪ್ಲೊಮಾ ಇನ್ ಎಕ್ಸರೇ ಇಮೇಜಿಂಗ್ ಟೆಕ್ನಾಲಜಿ ಅಥವಾ ಪಿಯುಸಿ ಜೊತೆಗೆ ಸೈನ್ಸ್ ಮತ್ತು ಡಿಪ್ಲೊಮಾ ಇನ್ ಎಕ್ಸರೇ/ ಮೆಡಿಕಲ್ ಇಮೆಜಿಂಗ್ ಟೆಕ್ನಾಲಜಿ ವಿದ್ಯಾರ್ಹತೆಗ ಹೊಂದಿರಬೇಕು. ಮಾಸಿಕ ಕ್ರೋಢಿಕರಿಸಿದ ವೇತನ ರೂ. 16,067/- ನೀಡಲಾಗುವುದು.
ದಿನಾಂಕ 13/11/2026 ರಿಂದ 21/11/2026 ರವರೆಗೆ ಪ್ರತಿದಿನ ಸಂಜೆ 4:00 ಗಂಟೆಯ ತನಕ ಮಾತ್ರ ಅರ್ಜಿಗಳನ್ನು ವಿತರಿಸಲಾಗುತ್ತದೆ (ಸರ್ಕಾರಿ ರಜಾ ದಿನಗಳು ಹೊರತುಪಡಿಸಿ).
ಭರ್ತಿ ಮಾಡಿದ ಅರ್ಜಿಯನ್ನು ಪೂರಕ ದಾಖಲೆಗಳೊಂದಿಗೆ ಜಿಲ್ಲಾ ಕ್ಷಯರೋಗ ನಿಯಂತ್ರಣ ಅಧಿಕಾರಿಗಳ ಕಚೇರಿ, ಮೆಗ್ಗಾನ್ ಆಸ್ಪತ್ರೆ ಆವರಣ, ಶಿವಮೊಗ್ಗ ಇಲ್ಲಿಗೆ ದಿನಾಂಕ 21/11/2026 ರ ಸಂಜೆ 4;00 ಗಂಟೆಯವರೆಗೆ ಸಲ್ಲಿಸಬಹುದಾಗಿದೆ.
ನೇಮಕಾತಿ ಪ್ರಕ್ರಿಯೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಕಚೇರಿ ವೇಳೆಯಲ್ಲಿ ಕ್ಷಯರೋಗ ನಿಯಂತ್ರಣ ಅಧಿಕಾರಿಗಳ ಕಚೇರಿ, ಮೆಗ್ಗಾನ್ ಆಸ್ಪತ್ರೆ ಆವರಣ, ಶಿವಮೊಗ್ಗ ಇಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಕ್ಷಯ ರೋಗ ನಿರ್ಮೂಲನಾ ಅಧಿಕಾರಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗೃಹಲಕ್ಷ್ಮಿಯ ಬಲ, ಸ್ವಾವಲಂಬನೆಯ ಫಲ- ಡಿ.ಕೆ.ಶಿವಕುಮಾರ್

ಚಕ್ಕುಲಿ, ನಿಪ್ಪಟ್ಟು ಸೇರಿದಂತೆ 20ಕ್ಕೂ ಹೆಚ್ಚು ಬಗೆಯ ತಿನಿಸುಗಳನ್ನು ತಯಾರಿಸಿ ಮಾರಾಟ...

B. Y. Raghavendra ಬೆಳೆ ವಿಮಾ ಕಂಪನಿಗಳು ರೈತರಿಗೆ ಘೋಷಿಸಿದ ವಿಮಾ ಪರಿಹಾರ ಮೊತ್ತ ನೀಡಿ- ಬಿ.ವೈ.ರಾಘವೇಂದ್ರ

B. Y. Raghavendra ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಮುಂಗಾರು...