Friday, November 13, 2026
Friday, November 13, 2026

ಕೆರೆಗೆ ಬಿದ್ದ ಹೋರಿ ರಕ್ಷಿಸಲು ನೀರಿಗಿಳಿದ ಯುವಕನ ದಾರುಣ ಸಾವು

Date:

ಕೆರೆಗೆ ಬಿದ್ದ ಹೋರಿಯನ್ನು ರಕ್ಷಿಸಲು ನೀರಿಗೆ ಇಳಿದ ಯುವಕನೊಬ್ಬ ಕೆಸರಿನಲ್ಲಿ ಕಾಲು ಸಿಲುಕಿ ಮುಳುಗಿ ಮೃತಪಟ್ಟ ಘಟನೆ ಶಿಕಾರಿಪುರ ತಾಲ್ಲೂಕಿನ ಹುಣಸೇಕೊಪ್ಪ ಗ್ರಾಮದ ಸಮೀಪ ನಡೆದಿದೆ.

ಮೃತನನ್ನು 22 ವರ್ಷದ ಅಶ್ರಫ್ ಎಂದು ಗುರುತಿಸಲಾಗಿದೆ. ಕಾರ್ ಗ್ಯಾರೇಜ್‌ನಲ್ಲಿ ಕೆಲಸ ಮಾಡುತ್ತಿದ್ದ ಅಶ್ರಫ್, ಹಿತ್ತಲ ಗ್ರಾಮದಲ್ಲಿ ನಡೆದ ಹೋರಿ ಬಿಡುವ ಹಬ್ಬ ಮುಗಿಸಿಕೊಂಡು ವಾಪಸ್ ತೆರಳುತ್ತಿದ್ದ ವೇಳೆ ಹೋರಿ ಕೆರೆಗೆ ಬಿದ್ದಿದೆ. ನೀರಿನಲ್ಲಿ ಒದ್ದಾಡುತ್ತಿದ್ದ ಹೋರಿಯನ್ನು ರಕ್ಷಿಸಲು ಅಶ್ರಫ್ ಕೆರೆಗೆ ಇಳಿದಿದ್ದಾನೆ. ಈ ವೇಳೆ ಕೆರೆಯ ಕೆಸರಿನಲ್ಲಿ ಆತನ ಕಾಲು ಸಿಲುಕಿಕೊಂಡು ಹೊರಬರಲಾಗದೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ.

ಜೊತೆಯಲ್ಲಿದ್ದ ಯುವಕರು ರಕ್ಷಣೆಗೆ ಪ್ರಯತ್ನಿಸಿದರೂ ಅಶ್ರಫ್‌ನನ್ನು ಉಳಿಸಲು ಸಾಧ್ಯವಾಗಲಿಲ್ಲ. ಕುಟುಂಬಕ್ಕೆ ಆಧಾರವಾಗಿದ್ದ ಯುವಕನ ಸಾವಿನಿಂದ ಕುಟುಂಬಸ್ಥರು ಕಂಗಾಲಾಗಿದ್ದಾರೆ. ಮೃತನ ಕುಟುಂಬಕ್ಕೆ ಸರ್ಕಾರ ಪರಿಹಾರ ನೀಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಈ ಸಂಬಂಧ ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗೃಹಲಕ್ಷ್ಮಿಯ ಬಲ, ಸ್ವಾವಲಂಬನೆಯ ಫಲ- ಡಿ.ಕೆ.ಶಿವಕುಮಾರ್

ಚಕ್ಕುಲಿ, ನಿಪ್ಪಟ್ಟು ಸೇರಿದಂತೆ 20ಕ್ಕೂ ಹೆಚ್ಚು ಬಗೆಯ ತಿನಿಸುಗಳನ್ನು ತಯಾರಿಸಿ ಮಾರಾಟ...

B. Y. Raghavendra ಬೆಳೆ ವಿಮಾ ಕಂಪನಿಗಳು ರೈತರಿಗೆ ಘೋಷಿಸಿದ ವಿಮಾ ಪರಿಹಾರ ಮೊತ್ತ ನೀಡಿ- ಬಿ.ವೈ.ರಾಘವೇಂದ್ರ

B. Y. Raghavendra ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಮುಂಗಾರು...