Friday, November 13, 2026
Friday, November 13, 2026

ಭದ್ರಾ ಮೇಲ್ದಂಡೆ ಯೋಜನೆಗೆ ಹೆಚ್ಚುವರಿ ನೀರು: ಭದ್ರಾವತಿ ಬಿಳಗಿ ಕ್ರಾಸ್ ಬಳಿ ರೈತರ ಪ್ರತಿಭಟನೆ

Date:

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಬಿಳಗಿ ಕ್ರಾಸ್ ಬಳಿ ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿ ರಸ್ತೆ ತಡೆ ನಡೆಸಿದರು.

ಭದ್ರಾ ಮೇಲ್ದಂಡೆ ಯೋಜನೆಗೆ ಹೆಚ್ಚುವರಿ ನೀರು ಹರಿಸುತ್ತಿರುವ ಸರ್ಕಾರದ ಕ್ರಮವನ್ನು ಖಂಡಿಸಿ ರೈತ ಸಂಘ ಹಾಗೂ ಭದ್ರಾ ಅಚ್ಚುಕಟ್ಟು ಹೋರಾಟ ಸಮಿತಿಯ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಯಿತು.

ಮಳೆ ಕೊರತೆಯಿಂದ ಭದ್ರಾ ಜಲಾಶಯದಲ್ಲಿ ನೀರಿನ ಸಂಗ್ರಹ ಕಡಿಮೆಯಾಗಿದ್ದು, ಅಚ್ಚುಕಟ್ಟು ಪ್ರದೇಶದ ರೈತರಿಗೆ ಸುಮಾರು 7 ಟಿಎಂಸಿ ನೀರಿನ ಕೊರತೆ ಎದುರಾಗಿದೆ. ನೀರಿನ ಅಭಾವದಿಂದ ಅಡಿಕೆ ಹಾಗೂ ತೆಂಗಿನ ಬೆಳೆಗಳು ಒಣಗುತ್ತಿವೆ. ಹೀಗಾಗಿ ನವೆಂಬರ್ ಮೂರನೇ ವಾರದೊಳಗೆ ನಾಲೆಗಳಿಗೆ ನೀರು ಹರಿಸಬೇಕೆಂದು ರೈತರು ಆಗ್ರಹಿಸಿದರು.

ತುಂಗಾ ತಿರುವು ಯೋಜನೆ ಪೂರ್ಣಗೊಳ್ಳುವವರೆಗೆ ಭದ್ರಾ ಜಲಾಶಯದ ನೀರನ್ನು ಬೇರೆ ಯೋಜನೆಗಳಿಗೆ ವರ್ಗಾಯಿಸಬಾರದು. ಭದ್ರಾ ಮೇಲ್ದಂಡೆ ಯೋಜನೆಗೆ ನೀರು ಹರಿಸುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಇನ್ನು ಪೊಲೀಸ್ ಬಲಪ್ರಯೋಗದ ಮೂಲಕ ನೀರನ್ನು ಬೇರೆಡೆಗೆ ಹರಿಸಲಾಗುತ್ತಿದೆ ಎಂದು ಆರೋಪಿಸಿದ ರೈತ ಸಂಘಟನೆಗಳು ಸರ್ಕಾರದ ಕ್ರಮವನ್ನು ತೀವ್ರವಾಗಿ ಖಂಡಿಸಿದವು.

ಭದ್ರಾ ಅಚ್ಚುಕಟ್ಟು ರೈತರ ಹಿತರಕ್ಷಣಾ ಸಮಿತಿ, ಜೈ ಕಿಸಾನ್ ರೈತ ಸಂಘ ಸೇರಿದಂತೆ ವಿವಿಧ ರೈತ ಸಂಘಟನೆಗಳ ಮುಖಂಡರು ಹಾಗೂ ರೈತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗೃಹಲಕ್ಷ್ಮಿಯ ಬಲ, ಸ್ವಾವಲಂಬನೆಯ ಫಲ- ಡಿ.ಕೆ.ಶಿವಕುಮಾರ್

ಚಕ್ಕುಲಿ, ನಿಪ್ಪಟ್ಟು ಸೇರಿದಂತೆ 20ಕ್ಕೂ ಹೆಚ್ಚು ಬಗೆಯ ತಿನಿಸುಗಳನ್ನು ತಯಾರಿಸಿ ಮಾರಾಟ...

B. Y. Raghavendra ಬೆಳೆ ವಿಮಾ ಕಂಪನಿಗಳು ರೈತರಿಗೆ ಘೋಷಿಸಿದ ವಿಮಾ ಪರಿಹಾರ ಮೊತ್ತ ನೀಡಿ- ಬಿ.ವೈ.ರಾಘವೇಂದ್ರ

B. Y. Raghavendra ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಮುಂಗಾರು...