Friday, November 13, 2026
Friday, November 13, 2026

ಯಾವುದೇ ವೃತ್ತಿಯು ಕೀಳಲ್ಲ.ಮೇಲಲ್ಲ. ಕಾಯಕ ನಿಷ್ಠೆ ಮತ್ತು ಗೌರವ ಇರಬೇಕು- ಕೆ.ವಿ.ಪ್ರಭಾಕರ್

Date:

ಯಾವುದೇ ವೃತ್ತಿಯೂ ಕೀಳಲ್ಲ, ಮೇಲಲ್ಲ. ಮಾಡುವ ಕಾಯಕವನ್ನು ನಿಷ್ಠೆ ಮತ್ತು ಗೌರವದಿಂದ ನಿರ್ವಹಿಸಬೇಕು ಎಂದು ನಿಕಟಪೂರ್ವ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ತಿಳಿಸಿದರು.
ನಗರದ ಅಶೋಕನಗರದ ಧರ್ಮನಾಥ ಭವನದಲ್ಲಿ ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ (ರಿ.), ನ್ಯೂಸ್‌ಪೇಪರ್ ಡಿಸ್ಟ್ರಿಬ್ಯೂಟರ್ಸ್ ಚಾರಿಟಬಲ್ ಟ್ರಸ್ಟ್ (ರಿ.) ಹಾಗೂ ಬೆಳಗಾವಿ ದಿನಪತ್ರಿಕೆ ವಿತರಕರ ಸಂಘದ ಆಶ್ರಯದಲ್ಲಿ ಆಯೋಜಿಸಿದ್ದ ಪತ್ರಿಕಾ ವಿತರಕರ 6ನೇ ರಾಜ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.
ಪತ್ರಿಕೋದ್ಯಮದಲ್ಲಿ ಸಂಪಾದಕರು ಮತ್ತು ವರದಿಗಾರರನ್ನು ಮಾತ್ರ ಹೆಚ್ಚಾಗಿ ನೆನಪಿಸಿಕೊಳ್ಳಲಾಗುತ್ತದೆ. ಆದರೆ ಪತ್ರಿಕೆಗಳನ್ನು ಬೆಳಗಿನ ಜಾವ ಮನೆಮನೆಗೆ ತಲುಪಿಸುವ ವಿತರಕರು ಪತ್ರಿಕೋದ್ಯಮದ ಬೆನ್ನೆಲುಬಾಗಿದ್ದಾರೆ. ಜನರು ಬೆಳಗ್ಗೆ ಎದ್ದ ತಕ್ಷಣ ಪತ್ರಿಕೆಗಾಗಿ ಕಾಯುತ್ತಾರೆ. ಅಂತಹ ಮಹತ್ವದ ಜವಾಬ್ದಾರಿಯನ್ನು ನಿರ್ವಹಿಸುವ ವಿತರಕರು ತಮ್ಮ ವೃತ್ತಿಯನ್ನು ಹೆಮ್ಮೆಯಿಂದ ಸ್ವೀಕರಿಸಬೇಕು. ಪತ್ರಿಕಾ ವಿತರಕರಿಲ್ಲದೆ ಪತ್ರಿಕಾ ರಂಗವನ್ನು ಕಲ್ಪಿಸಿಕೊಳ್ಳಲು ಸಾಧ್ಯವಿಲ್ಲ. ಪತ್ರಿಕಾ ಸಂಸ್ಥೆಗಳು ವಿತರಕರನ್ನು ತಮ್ಮ ಸಂಸ್ಥೆಯ ಅವಿಭಾಜ್ಯ ಅಂಗವೆಂದು ಪರಿಗಣಿಸಿದಾಗ ಅವರಿಗೂ ಸೂಕ್ತ ಗೌರವ ಮತ್ತು ಸೌಲಭ್ಯ ದೊರೆಯಲಿದೆ ಎಂದರು.
ಸಮಾಜಕ್ಕೆ ಸಲ್ಲಿಸುವ ಸೇವೆಯನ್ನು ಹುದ್ದೆ ಅಥವಾ ಸ್ಥಾನಮಾನದಿಂದ ಅಳೆಯಬಾರದು. ಪತ್ರಿಕಾ ವಿತರಕರನ್ನು ಸಮಾಜದ ಹೀರೋಗಳಂತೆ ಗುರುತಿಸಬೇಕು. ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವ ಮೂಲಕ ಅವರ ಭವಿಷ್ಯ ರೂಪಿಸಬೇಕು ಎಂದು ಸಲಹೆ ನೀಡಿದರು.
ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಮಾತನಾಡಿ, ಪತ್ರಿಕಾ ವಿತರಕರು ಕಾರ್ಮಿಕ ಇಲಾಖೆಯ ಮೂಲಕ ಇ-ಶ್ರಮ್ ಕಾರ್ಡ್ ಮಾಡಿಸಿಕೊಂಡು ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯ ಪಡೆದುಕೊಳ್ಳಬೇಕು. ಕೋವಿಡ್ ಸಂದರ್ಭದಲ್ಲಿ ಮೃತಪಟ್ಟ ಪತ್ರಕರ್ತರ ಕುಟುಂಬಗಳಿಗೆ ಐದು ಲಕ್ಷ ರೂ. ನೆರವು ನೀಡಲಾಗಿದೆ. ಸಂಘಟನೆ ಬಲಿಷ್ಠವಾಗಿದ್ದರೆ ಮಾತ್ರ ಹಕ್ಕುಗಳಿಗಾಗಿ ಹೋರಾಟ ನಡೆಸಲು ಸಾಧ್ಯ. ವಿತರಕರು ಸಂಘಟಿತರಾಗಿ ತಮ್ಮ ಬೇಡಿಕೆಗಳನ್ನು ಸರ್ಕಾರದ ಮುಂದಿಡಬೇಕು. ಪತ್ರಿಕಾ ವಿತರಕರಿಗಾಗಿ ಪ್ರತ್ಯೇಕ ನಿಗಮ ಅಥವಾ ಅಕಾಡೆಮಿ ಸ್ಥಾಪನೆಯಾಗುವ ನಿಟ್ಟಿನಲ್ಲಿ ಒತ್ತಾಯಿಸಬೇಕು ಎಂದು ತಿಳಿಸಿದರು.Gubbi
ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ಅಧ್ಯಕ್ಷ ಕೆ. ಶಂಭುಲಿಂಗ ಮಾತನಾಡಿ, ಪತ್ರಿಕಾ ವಿತರಕರನ್ನು ಸರ್ಕಾರ ಇನ್ನೂ ಸಮರ್ಪಕವಾಗಿ ಗುರುತಿಸಿಲ್ಲ. ರಾಜ್ಯದಲ್ಲಿ ಸುಮಾರು 25 ಸಾವಿರ ವಿತರಕರಿದ್ದು, ಅವರಿಗೆ ಅಪಘಾತ ವಿಮೆ ಸೇರಿದಂತೆ ಕಾರ್ಮಿಕ ಇಲಾಖೆಯ ಸೌಲಭ್ಯಗಳನ್ನು ಒದಗಿಸಬೇಕು. ವಿಮೆ ಪಡೆಯಲು ವಿಧಿಸಿರುವ ಕಠಿಣ ಷರತ್ತುಗಳನ್ನು ಸಡಿಲಗೊಳಿಸಬೇಕು. ವಿತರಕರಿಗಾಗಿ ಪ್ರತ್ಯೇಕ ಕ್ಷೇಮಾಭಿವೃದ್ಧಿ ನಿಧಿ ಸ್ಥಾಪಿಸಬೇಕು. ಸರ್ಕಾರದಿಂದ ಸೂಕ್ತ ಅನುದಾನ ಒದಗಿಸುವುದರ ಜೊತೆಗೆ ಚಾರಿಟಬಲ್ ಟ್ರಸ್ಟ್ ಅಭಿವೃದ್ಧಿಗೂ ಸಹಕಾರ ನೀಡಬೇಕು ಎಂದು ಒತ್ತಾಯಿಸಿದರು
ಆರನೇ ಸಮ್ಮೇಳನ ಅಧ್ಯಕ್ಷ ಪ್ರತಾಪ್ ಭೋಸಲೆ ಮಾತನಾಡಿ, ವಿತರಕರಿಗೆ ಸಂಘಟಿತರಾಗಿ ನಮ್ಮ ಸೌಲಭ್ಯಗಳಿಗೆ ಒತ್ತಾಯ ಮಾಡಬೇಕು ಎಂದು ಹೇಳಿದರು.
ಒಕ್ಕೂಟದ ರಾಜ್ಯ ಪ್ರಧಾನ ಕಾರ್ಯದರ್ಶಿ ಸುರೇಶ್.ಪಿ ಮಾತನಾಡಿ, 2018ರಲ್ಲಿ ಪತ್ರಿಕಾ ವಿತರಕರಿಗೆ ಹಲವು ಸೌಲಭ್ಯಗಳನ್ನು ಘೋಷಿಸಲಾಗಿದ್ದರೂ ಈವರೆಗೂ ಸಮರ್ಪಕವಾಗಿ ಅನುಷ್ಠಾನಗೊಂಡಿಲ್ಲ. ವಿತರಕರ ಕಲ್ಯಾಣಕ್ಕಾಗಿ ಎರಡು ಕೋಟಿ ರೂ. ಅನುದಾನ ನೀಡುವಂತೆ ಮನವಿ ಸಲ್ಲಿಸಲಾಗಿದೆ. ವಿತರಕರಿಗೆ ಹತ್ತು ಲಕ್ಷ ರೂ. ಆರೋಗ್ಯ ವಿಮೆ, ಇವಿಎಂ ದ್ವಿಚಕ್ರ ವಾಹನ ಸೌಲಭ್ಯ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಆಗ್ರಹಿಸಿದರು.
ಇದೇ ಸಂದರ್ಭದಲ್ಲಿ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಪತ್ರಕರ್ತರ ಮಕ್ಕಳನ್ನು ಅಭಿನಂದಿಸಿ ಪ್ರತಿಭಾ ಪುರಸ್ಕಾರ ಮಾಡಲಾಯಿತು. ಬೆಳಗಾವಿ ಮಾಧ್ಯಮ ಪ್ರತಿನಿಧಿಗಳು ಹಾಗೂ ಸಂಪಾದಕರಿಗೆ, ತಾಲೂಕು ಪತ್ರಿಕೆ ವಿತರಕರಿಗೆ ಸೇವಾ ರತ್ನ ಪ್ರಶಸ್ತಿ ನೀಡಲಾಯಿತು.
ಕಾರ್ಯಕ್ರಮದಲ್ಲಿ ಪ್ರಧಾನ ಕಾರ್ಯದರ್ಶಿ ಪ್ರಶಾಂತ್, ಜಿಲ್ಲಾಧ್ಯಕ್ಷ ದೀಪಕ ರಾಜಗೋಳಕರ, ರಾಜ್ಯ ಉಪಾಧ್ಯಕ್ಷ ಎನ್. ಪ್ರಶಾಂತ್ ಕುಮಾರ್, ಸತೀಶ್ ನಾಯಕ್, ಶ್ರೀಕಾಂತ ನೇವಗಿ, ರಾಜಾ ಭೊಸ್ಲೆ, ಸಜಯ ಘೊರ್ಪಡೆ, ಶಿವಾಜಿ ಮೇತ್ರಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜವರಪ್ಪ, ಸುವರ್ಣ ರಾಜೋತ್ಸವ ಪ್ರಶಸ್ತಿ ಪುರಸ್ಕೃತ ಲಕ್ಷ್ಮಿನರಸಪ್ಪ. ಶಿವಮೊಗ್ಗ ಜಿಲ್ಲಾ ಒಕ್ಕೂಟದ ನಿರ್ದೇಶಕರಾದ ಅಜಿತ್ ಉಲ್ಲಾ . ದುರ್ಗೋಜಿ. ಜಗದೀಶ್. ಧನಂಜಯ್. ಸೇರಿದಂತೆ ವಿವಿಧ ಜಿಲ್ಲೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗೃಹಲಕ್ಷ್ಮಿಯ ಬಲ, ಸ್ವಾವಲಂಬನೆಯ ಫಲ- ಡಿ.ಕೆ.ಶಿವಕುಮಾರ್

ಚಕ್ಕುಲಿ, ನಿಪ್ಪಟ್ಟು ಸೇರಿದಂತೆ 20ಕ್ಕೂ ಹೆಚ್ಚು ಬಗೆಯ ತಿನಿಸುಗಳನ್ನು ತಯಾರಿಸಿ ಮಾರಾಟ...

B. Y. Raghavendra ಬೆಳೆ ವಿಮಾ ಕಂಪನಿಗಳು ರೈತರಿಗೆ ಘೋಷಿಸಿದ ವಿಮಾ ಪರಿಹಾರ ಮೊತ್ತ ನೀಡಿ- ಬಿ.ವೈ.ರಾಘವೇಂದ್ರ

B. Y. Raghavendra ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಮುಂಗಾರು...