Saturday, November 14, 2026
Saturday, November 14, 2026

ಗೆಜೆಟೆಡ್ ಪ್ರೊಬೇಷನರ್ಸ್ ನೇಮಕಾತಿಗಾಗಿ ಪೂರ್ವಭಾವಿ ಪರೀಕ್ಷೆಗೆ ಜಿಲ್ಲಾಡಳಿತ ಸಜ್ಜು : ಡಿ.ಸಿ.

Date:

ಪ್ರಸಕ್ತ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್ ‘ಎ’ ಮತ್ತು ಗ್ರೂಪ್ ‘ಬಿ’ ವೃಂದದ ಹುದ್ದೆಗಳ ನೇಮಕಾತಿಗಾಗಿ ನವೆಂಬರ್ 15ರಂದು ಶಿವಮೊಗ್ಗ ನಗರದ 24ಪರೀಕ್ಷಾ ಕೇಂದ್ರಗಳಲ್ಲಿ ಪೂರ್ವಭಾವಿ ಪರೀಕ್ಷೆ ನಡೆಯುತ್ತಿದ್ದು, ಈ ಪರೀಕ್ಷೆಯು ಸುಗಮವಾಗಿ ಹಾಗೂ ಪಾರದರ್ಶಕವಾಗಿ ನಡೆಸಲು ಜಿಲ್ಲಾಡಳಿತವು ಅಗತ್ಯ ಸಿದ್ಧತಾ ಕ್ರಮಗಳನ್ನು ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಪ್ರಕಾಶ ಜಿ.ಟಿ. ನಿಟ್ಟಳಿ ಅವರು ಹೇಳಿದರು.
ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಪರೀಕ್ಷಾ ಪೂರ್ವಸಿದ್ಧತೆಗಳ ಕುರಿತು ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡುತ್ತಿದ್ದರು. ಈ ಮಹತ್ವದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪಾರದರ್ಶಕತೆ ಮತ್ತು ಭದ್ರತೆಗೆ ವಿಶೇಷ ಕ್ರಮಗಳನ್ನು ಕೈಗೊಳ್ಳಲಾಗಿದೆ. ನಡೆಯುವ ಪರೀಕ್ಷೆಯಲ್ಲಿ ಯಾವುದೇ ಲೋಪದೋಷಗಳಾಗದಂತೆ ಪಾರದರ್ಶಕವಾಗಿ ನಡೆಸಲು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ವಿಶೇಷವಾಗಿ ಚುನಾವಣಾ ಕಾರ್ಯದ ಮಾದರಿಯಲ್ಲಿ ಅತ್ಯಂತ ಹೆಚ್ಚಿನ ಕಾಳಜಿ ವಹಿಸಿ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದರು.
ಸದರಿ ಪರೀಕ್ಷೆಯಲ್ಲಿ 8466ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಭಾಗವಹಿಸಲಿದ್ದಾರೆ. ಅವರಲ್ಲಿ 156 ಮಂದಿ ವಿಕಲಚೇತನರಿದ್ದು, 18ಮಂದಿ ಅನುಮತಿ ಪಡೆದಿದ್ದಾರೆ ತೃತೀಯ ಲಿಂಗಿಗಳು 02 ಇದ್ದಾರೆ. ಕೆಲವು ಕೇಂದ್ರಗಳು ಮಹಿಳೆಯರಿಗಾಗಿಯೇ ಸೃಜಿಸಲಾಗಿದೆ ಎಂದ ಅವರು, ಪರೀಕ್ಷಾ ಕಾರ್ಯಕ್ಕೆ ಅಗತ್ಯ ಸಿಬ್ಬಂಧಿ ಮತ್ತು ಮಾರ್ಗಾಧಿಕಾರಿಗಳನ್ನು ನಿಯೋಜಿಸಲಾಗಿದೆ. ಪರೀಕ್ಷಾ ಕಾರ್ಯಕ್ಕೆ ನಿಯೋಜಿತ ಅಧಿಕಾರಿ ಸಿಬ್ಬಂಧಿಗಳಿಗೆ ಇಂದು ತರಬೇತಿಯನ್ನು ನೀಡಲಾಗಿದೆ ಎಂದರು.
ಇದೇ ಮೊದಲ ಬಾರಿಗೆ ಪ್ರತಿ ಪರೀಕ್ಷಾ ಕೇಂದ್ರಕ್ಕೆ ಓರ್ವ ವೀಕ್ಷಕರನ್ನು ನಿಯೋಜಿಸಲಾಗಿದೆ. ಪ್ರತಿ ಪರೀಕ್ಷಾ ಕೊಠಡಿಯಲ್ಲಿಯೂ ಸಿಸಿಟಿವಿ ಕ್ಯಾಮೆರಾ ಅಳವಡಿಕೆ ಮಾಡಲಾಗಿದ್ದು, ಪರೀಕ್ಷಾ ಕೇಂದ್ರಗಳ ದೃಶ್ಯಾವಳಿಗಳನ್ನು ಜಿಲ್ಲಾಧಿಕಾರಿ ಕಚೇರಿಯಿಂದಲೇ ವೀಕ್ಷಿಸುವ ವ್ಯವಸ್ಥೆ ಮಾಡಲಾಗಿದೆ. ಅಲ್ಲದೆ ವೆಬ್‌ಕಾಸ್ಟಿಂಗ್ ಮೂಲಕ ಪರೀಕ್ಷಾ ಚಟುವಟಿಕೆಗಳ ನೇರ ಮೇಲ್ವಿಚಾರಣೆಗೆ ವಿಶೇ಼ಷ ಗಮನಹರಿಸಲಾಗಿದೆ ಎಂದರು.
ಪರೀಕ್ಷಾ ಕೇಂದ್ರದೊಳಗೆ ಮೊಬೈಲ್ ಫೋನ್‌ ಸೇರಿದಂತೆ ಯಾವುದೇ ವಿದ್ಯುನ್ಮಾನ ವಾಹಕಗಳ ಬಳಕೆಯನ್ನು ಸಂಪೂರ್ಣ ನಿಷೇಧಿಸಲಾಗಿದೆ. ಪ್ರತಿ ಪರೀಕ್ಷಾ ಕೊಠಡಿಯಲ್ಲಿ ಗರಿಷ್ಠ 24 ಅಭ್ಯರ್ಥಿಗಳಿಗೆ ಅವಕಾಶವಿದ್ದು, ಪ್ರತಿ ಕೊಠಡಿಗೆ ಇಬ್ಬರು ಮೇಲ್ವಿಚಾರಕರನ್ನು, ಓರ್ವರನ್ನು ಪ್ರಶ್ನೆ ಪತ್ರಿಕೆ ಕಸ್ಟೋಡಿಯನ್‌ ಅವರನ್ನು ನಿಯೋಜಿಸಲಾಗಿದೆ. ಅಲ್ಲದೆ ಪ್ರತಿಕೇಂದ್ರಕ್ಕೆ ಓರ್ವರಂತೆ ವಸ್ತ್ರಸಂಹಿತೆ ಅಧಿಕಾರಿಯನ್ನು ನೇಮಿಸಲಾಗಿದೆ ಎಂದರು.
ಪರೀಕ್ಷೆಗಳು ನಡೆಯುವ ದಿನದಂದು ಪರೀಕ್ಷಾ ಕೇಂದ್ರದ ಸುತ್ತಮುತ್ತಲಿನ 200ಮೀ. ಪ್ರದೇಶದ ವ್ಯಾಪ್ತಿಯೊಳಗೆ 163 ಬಿ.ಎನ್.ಎಸ್. ಅನ್ವಯ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ. ಅಂದು ಪರೀಕ್ಷಾ ಕೇಂದ್ರದ ಸುತ್ತಮುತ್ತಲಿನ ಕಂಫ್ಯೂಟರ್‌ ಕೇಂದ್ರಗಳು, ಝೆರಾಕ್ಸ್‌ ಅಂಗಡಿ ಮಳಿಗೆಗಳನ್ನು ತೆರೆಯದಂತೆ ಸೂಚಿಸಲಾಗಿದೆ ಎಂದ ಅವರು, ಪರೀಕ್ಷಾ ಕೇಂದ್ರವನ್ನು ಪ್ರವೇಶಿಸುವ ಪ್ರತಿ ಪರೀಕ್ಷಾರ್ಥಿಗಳಿಗೆ ನಿಯಮಾನುಸಾರ ತಪಾಸಣೆಗೊಳಪಡಿಸಲಾಗುವುದು. ಅಲ್ಲದೇ ಪ್ರತಿ ಕೇಂದ್ರಕ್ಕೆ ಆರೋಗ್ಯ ಇಲಾಖೆ ಹಾಗೂ ಪೊಲೀಸ್‌ ಸಿಬ್ಬಂಧಿಯನ್ನು ನಿಯೋಜಿಸಲಾಗಿದೆ. ಅಂದು ವಿದ್ಯುತ್‌ ಸರಬರಾಜಿನಲ್ಲಿ ಯಾವುದೇ ವ್ಯತ್ಯಯಗಳುಂಟಾಗದಂತೆ ಸೂಚಿಸಲಾಗಿದೆ ಎಂದರು.
ಪತ್ರಿಕಾಗೋಷ್ಟಿಯಲ್ಲಿ ಜಿಲ್ಲಾ ಪೊಲೀಸ್‌ವರಿಷ್ಟಾಧಿಕಾರಿ ಬಿ.ನಿಖಿಲ್‌ ಅವರು ಮಾತನಾಡಿ, ಪರೀಕ್ಷೆಗಳು ಸುಗಮವಾಗಿ ನಡೆಸಲು ಹಾಗೂ ಪರೀಕ್ಷಾ ಕರ್ತವ್ಯದಲ್ಲಿ ಯಾವುದೇ ಅಡಚಣೆಗಳುಂಟಾಗದಿರಲು ಪ್ರತಿ 80ಪರೀಕ್ಷಾರ್ಥಿಗಳಿಗೊಬ್ಬರಂತೆ ಪೊಲೀಸ್‌ ಅದರಲ್ಲೂ ವಿಶೇಷವಾಗಿ ಶೇ.50ರಷ್ಟು ಮಹಿಳಾ ಪೊಲೀಸ್ ಸಿಬ್ಬಂಧಿಯನ್ನು ನಿಯೋಜಿಸಲಾಗಿದೆ. ಪರೀಕ್ಷಾರ್ಥಿಗಳು‌ ಪ್ರವೇಶ ಪತ್ರ, ಪೆನ್ನು ಮತ್ತಿತರ ಅಗತ್ಯ ವಸ್ತುಗಳನ್ನಲ್ಲದೆ ಇತರೆ ವಸ್ತುಗಳನ್ನು ತೆಗೆದುಕೊಂಡು ಹೋಗುವಂತಿಲ್ಲ. ಮೊಬೈಲ್ ಫೋನ್, ಸ್ಮಾರ್ಟ್ ವಾಚ್ ಹಾಗೂ ನಿಷೇಧಿತ ವಸ್ತುಗಳನ್ನು ಪರೀಕ್ಷಾ ಕೇಂದ್ರಕ್ಕೆ ಕೊಂಡೊಯ್ಯದಂತೆ ಹಾಗೂ ಪರೀಕ್ಷಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಲಾಗಿದೆ ಎಂದರು.
ನಿಯೋಜಿತ ಅಧಿಕಾರಿ-ಸಿಬ್ಬಂಧಿಗಳಲ್ಲದೇ ಅನ್ಯರ ಪ್ರವೇಶವನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ನಗರದಲ್ಲಿ ಸಂಚಾರ ದಟ್ಟಣೆಯನ್ನು ನಿಯಂತ್ರಿಸಲು ವಿಶೇಷ ಗಮನಹರಿಸಲಾಗಿದೆ. ಪರೀಕ್ಷಾ ಕೇಂದ್ರ ಪ್ರವೇಶಿಸುವ ಪ್ರತಿ ವ್ಯಕ್ತಿಯ ಚಲನವಲನಗಳನ್ನು ವೀಕ್ಷಿಸಲು ವಹಿಯನ್ನು ನಿರ್ವಹಿಸಲು ಹಾಗೂ ಕಣ್ಗಾವಲು ಇರಿಸಲಾಗಿದೆ. ಅದಕ್ಕಾಗಿ ಡಿವೈಎಸ್ಪಿ ಅವರನ್ನು ನಿಯೋಜಿಸಲಾಗಿದೆ ಅಲ್ಲದೇ ಸಾಮಾಜಿಕ ಜಾಲತಾಣದಲ್ಲಿ ಹರಡುವ ವದಂತಿಗಳನ್ನು ನೋಡಲು ಸಿಬ್ಬಂಧಿಗಳನ್ನು ನಿಯೋಜಿಸಲಾಗಿದೆ. ಮಾಧ್ಯಮ ಪ್ರತಿನಿಧಿಗಳು ವದಂತಿಗಳನ್ನು ಪ್ರಕಟಿಸುವ ಮುನ್ನ ಜಿಲ್ಲಾಡಳಿತ ಗಮನಕ್ಕೆ ತರುವಂತೆ ಅವರು ಮನವಿ ಮಾಡಿದರು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ್‌, ಅಪರ ಜಿಲ್ಲಾಧಿಕಾರಿ ಅಭಿಷೇಕ್‌ ವಿ., ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಚಂದ್ರಪ್ಪ ಗುಂಡಪಲ್ಲಿ ಅವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಶ್ರೀ ಜ್ಯೋತಿಪ್ರಕಾಶ್ ರವರಿಗೆ 68 ನೇ ಹುಟ್ಟು ಹಬ್ಬ

ವಿವಿಧ ಸಾಮಾಜಿಕ, ಧಾರ್ಮಿಕ ಹಾಗೂ ಶೈಕ್ಷಣಿಕ ಸಂಘ-ಸಂಸ್ಥೆಗಳಲ್ಲಿ ಸಕ್ರಿಯವಾಗಿ ಸೇವೆ ಸಲ್ಲಿಸುತ್ತಿರುವ...

ಗೃಹಲಕ್ಷ್ಮಿಯ ಬಲ, ಸ್ವಾವಲಂಬನೆಯ ಫಲ- ಡಿ.ಕೆ.ಶಿವಕುಮಾರ್

ಚಕ್ಕುಲಿ, ನಿಪ್ಪಟ್ಟು ಸೇರಿದಂತೆ 20ಕ್ಕೂ ಹೆಚ್ಚು ಬಗೆಯ ತಿನಿಸುಗಳನ್ನು ತಯಾರಿಸಿ ಮಾರಾಟ...