Saturday, November 14, 2026
Saturday, November 14, 2026

ಆಧುನಿಕತೆಯ ಹೆಸರಿನಲಿ ನೆಲದ ಸಂಸ್ಕೃತಿಯ ಕಡೆಗಣನೆ ಸಲ್ಲದು: ನಟ ಶ್ರೀಧರ್

Date:

ಆಧುನಿಕತೆಯನ್ನು ಸ್ವೀಕರಿಸುವುದು ತಪ್ಪಲ್ಲ. ಆದರೆ ಅದರ ಹೆಸರಿನಲ್ಲಿ ನಮ್ಮ ಸಂಸ್ಕೃತಿ, ಪರಂಪರೆ ಮತ್ತು ಜೀವನ ಮೌಲ್ಯಗಳನ್ನು ಮರೆಯಬಾರದು. ನಮ್ಮ ನೆಲದ ಭಾಷೆ, ಸಾಹಿತ್ಯ ಹಾಗೂ ಸಾಂಸ್ಕೃತಿಕ ಅಸ್ಮಿತೆಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದು ಖ್ಯಾತ ಚಲನಚಿತ್ರ ನಟ ಹಾಗೂ ಭರತನಾಟ್ಯ ಕಲಾವಿದ ಡಾ. ಶ್ರೀಧರ್ ಅಭಿಪ್ರಾಯಪಟ್ಟರು.

ಅವರು ಶುಕ್ರವಾರ ಕುವೆಂಪು ವಿಶ್ವವಿದ್ಯಾಲಯದ ಕನ್ನಡ ಭಾರತಿ ವತಿಯಿಂದ ಬಸವ ಸಭಾಭವನದಲ್ಲಿ ಆಯೋಜಿಸಿದ್ದ 71ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ನಾಡಿನ ಕಲೆ ಮತ್ತು ಸಾಹಿತ್ಯ ವಿದ್ಯಾರ್ಥಿಗಳಿಗೆ ವಿಶಿಷ್ಟ ಜ್ಞಾನ ಮತ್ತು ಆನಂದವನ್ನು ನೀಡುವುದರ ಜೊತೆಗೆ ಬದುಕಿನ ಅನುಭವವನ್ನು ವಿಸ್ತರಿಸುತ್ತದೆ. ಕನ್ನಡದ ಶ್ರೀಮಂತ ಸಾಹಿತ್ಯದ ಮೂಲಕ ನಮ್ಮ ಪೂರ್ವಜರು ರೂಪಿಸಿದ ಭಾರತೀಯ ಜ್ಞಾನ ಪರಂಪರೆಯನ್ನು ಅರಿತುಕೊಳ್ಳುವ ಅಗತ್ಯವಿದೆ ಎಂದರು.

ಆಧುನೀಕರಣದ ಪ್ರಭಾವದಿಂದ ನಮ್ಮ ಜೀವನಶೈಲಿ, ಆಹಾರ ಪದ್ಧತಿ, ಉಡುಗೆ-ತೊಡುಗೆ ಹಾಗೂ ಆಚಾರ-ವಿಚಾರಗಳಲ್ಲಿ ಪಾಶ್ಚಾತ್ಯ ಸಂಸ್ಕೃತಿಯ ಅನುಕರಣೆ ಹೆಚ್ಚುತ್ತಿರುವುದು ಕಳವಳಕಾರಿ ಸಂಗತಿ ಎಂದ ಅವರು, ಪರ ಸಂಸ್ಕೃತಿಯ ವ್ಯಾಮೋಹವನ್ನು ಬದಿಗಿಟ್ಟು, ನಮ್ಮ ನೆಲದ ಜ್ಞಾನವನ್ನು ನಮ್ಮದೇ ಭಾಷೆಯಲ್ಲಿ ಕಲಿಯುವ ಮತ್ತು ಅರಿಯುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.

​ಕುಲಪತಿ ಪ್ರೊ. ಶರತ್ ಅನಂತಮೂರ್ತಿ ಮಾತನಾಡಿ, ಬೆಂಗಳೂರಿನಂತಹ ನಗರಗಳಲ್ಲಿ ಕನ್ನಡದಲ್ಲಿ ಮಾತನಾಡುವುದನ್ನು ಕೀಳರಿಮೆಯೆಂದು ಭಾವಿಸುವ ಮನೋಭಾವ ಹೆಚ್ಚಾಗುತ್ತಿದೆ. ಕನ್ನಡಿಗರು ಆರ್ಥಿಕವಾಗಿ ಸಬಲರಾಗುವ ಮೂಲಕ ಕನ್ನಡ ಭಾಷೆಯನ್ನು ಉಳಿಸಿ, ಬೆಳೆಸಬೇಕಿದೆ ಎಂದರು.

ಸಾಹಿತಿ ಸವಿತಾ ನಾಗಭೂಷಣ್ ಮಾತನಾಡಿ, ಇಂದು ಮಕ್ಕಳಿಗೆ ಕನ್ನಡ ನಾಡು, ನುಡಿ ಹಾಗೂ ಸಂಸ್ಕೃತಿಯ ಬಗ್ಗೆ ಅರಿವು ಮೂಡಿಸಬೇಕಾದ ಅಗತ್ಯವಿದೆ. ಪೋಷಕರು ಆಂಗ್ಲ ಭಾಷೆಯ ವ್ಯಾಮೋಹವನ್ನು ಬಿಟ್ಟು, ಮನೆಯಲ್ಲಿ ಮಕ್ಕಳಿಗೆ ಕನ್ನಡವನ್ನೇ ಕಲಿಸಬೇಕು ಎಂದು ಸಲಹೆ ನೀಡಿದರು.

ಕುಲಸಚಿವ ಪ್ರೊ. ಆರ್. ತಿಮ್ಮರಾಯಪ್ಪ, ಕನ್ನಡ ಭಾರತಿ ನಿರ್ದೇಶಕ ಡಾ. ನೆಲ್ಲಿಕಟ್ಟೆ ಎಸ್. ಸಿದ್ದೇಶ್, ಯುಗಧರ್ಮ ರಾಮಣ್ಣ, ವಿವಿಧ ನಿಕಾಯಗಳ ಡೀನರುಗಳಾದ ಪ್ರೊ. ಚಂದ್ರಶೇಖರ್, ಪ್ರೊ. ಎಸ್.ಕೆ. ನರಸಿಂಹಮೂರ್ತಿ, ಪ್ರೊ. ಗಜಾನನ ಪ್ರಭು ಬಿ., ಯು.ಎಸ್.ಎಂ.ಆರ್. ಕಾಲೇಜಿನ ಪ್ರಾಚಾರ್ಯ ಪ್ರೊ. ಎಸ್.ಎಂ. ಮುತ್ತಯ್ಯ, ವಿವಿಧ ವಿಭಾಗಗಳ ಅಧ್ಯಾಪಕರು, ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಶ್ರೀ ಜ್ಯೋತಿಪ್ರಕಾಶ್ ರವರಿಗೆ 68 ನೇ ಹುಟ್ಟು ಹಬ್ಬ

ವಿವಿಧ ಸಾಮಾಜಿಕ, ಧಾರ್ಮಿಕ ಹಾಗೂ ಶೈಕ್ಷಣಿಕ ಸಂಘ-ಸಂಸ್ಥೆಗಳಲ್ಲಿ ಸಕ್ರಿಯವಾಗಿ ಸೇವೆ ಸಲ್ಲಿಸುತ್ತಿರುವ...

ಗೃಹಲಕ್ಷ್ಮಿಯ ಬಲ, ಸ್ವಾವಲಂಬನೆಯ ಫಲ- ಡಿ.ಕೆ.ಶಿವಕುಮಾರ್

ಚಕ್ಕುಲಿ, ನಿಪ್ಪಟ್ಟು ಸೇರಿದಂತೆ 20ಕ್ಕೂ ಹೆಚ್ಚು ಬಗೆಯ ತಿನಿಸುಗಳನ್ನು ತಯಾರಿಸಿ ಮಾರಾಟ...