ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ವತಿಯಿಂದ ನಿಧಿ ಆಪ್ಕೆ ನಿಕಟ್ 2.0 ಕಾರ್ಯಕ್ರಮವನ್ನು ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ನವೆಂಬರ್ 27 ರಂದು ಆಯೋಜಿಸಲಾಗಿದೆ.
ಶಿವಮೊಗ್ಗ ಜಿಲ್ಲೆಯಲ್ಲಿ ನ್ಯೂರೋಭಾರತ್ ಬ್ರೈನ್, ಸ್ಪೈನ್ ಮತ್ತು ಟ್ರಾಮಾ ಆಸ್ಪತ್ರೆ, ದೀನದಯಾಳ್ ಉಪಾಧ್ಯಾಯ ರಸ್ತೆ, ಬಿಜೆಪಿ ಕಚೇರಿ ಪಕ್ಕ, ಜ್ಯುವೆಲ್ ರಾಕ್ ಹೋಟೆಲ್ ರಸ್ತೆ, ಶಿವಮೊಗ್ಗ ಹಾಗೂ ದಾವಣಗೆರೆ ಜಿಲ್ಲೆಯಲ್ಲಿ ಋತ್ವಿ ಮೋಟಾರ್ಸ್, ಡೆಂಟಲ್ ಕಾಲೇಜು ರಸ್ತೆ, ಎಂ.ಸಿ.ಸಿ.ಬಿ ಬ್ಲಾಕ್, ಇಲ್ಲಿ ನಿಧಿ ಆಪ್ಕೆ ನಿಕಟ್ ಕಾರ್ಯಕ್ರಮ ನಡೆಯಲಿದೆ.
ಉದ್ಯೋಗದಾತರು ಮತ್ತು ಉದ್ಯೋಗಿಗಳಿಗೆ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆ ಹಾಗೂ ಪಿಂಚಣಿದಾರರಿಗೆ ಮಧ್ಯಾಹ್ನ 2.30 ರಿಂದ ಸಂಜೆ 4 ಗಂಟೆವರೆಗೆ ನಿಧಿ ಆಪ್ಕೆ ನಿಕಟ್ ಕಾರ್ಯಕ್ರಮ ನಡೆಯಲಿದ್ದು, ಉದ್ಯೋಗದಾತರು ಮತ್ತು ಉದ್ಯೋಗಿಗಳು ಮತ್ತು ಪಿಂಚಣಿದಾರರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಪ್ರಾದೇಶಿಕ ಕಚೇರಿಯ ಸಹಾಯಕ ಭವಿಷ್ಯ ನಿಧಿ ಆಯುಕ್ತರು ತಿಳಿಸಿದ್ದಾರೆ.
ನವೆಂಬರ್ 27 ರಂದು ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ “ನಿಧಿ ಆಪ್ಕೆ ನಿಕಟ್” ಕಾರ್ಯಕ್ರಮ ಆಯೋಜನೆ
Date:
