ಶಿವಮೊಗ್ಗ: “ನಗರದ ವಾರ್ಡ್ಗಳಲ್ಲಿ ನಡೆಯುವ ಅಭಿವೃದ್ಧಿ ಕಾಮಗಾರಿಗಳಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯ ಅಥವಾ ಕಳಪೆ ಗುಣಮಟ್ಟವನ್ನು ಸಹಿಸುವುದಿಲ್ಲ. ಸಾರ್ವಜನಿಕರಿಗೆ ತೊಂದರೆಯಾಗದಂತೆ ವ್ಯವಸ್ಥಿತವಾಗಿ ಕಾಮಗಾರಿ ಪೂರ್ಣಗೊಳಿಸಬೇಕು,” ಎಂದು ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎಸ್. ಎನ್. ಚನ್ನಬಸಪ್ಪ (ಚೆನ್ನಿ) ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಾರ್ಡ್ ಸಂಖ್ಯೆ 8ರಲ್ಲಿ ನಡೆಯುತ್ತಿರುವ ರಾಜಕಾಲುವೆಯ ಕಾಮಗಾರಿಗೆ ಸಂಬಂಧಿಸಿದಂತೆ ಸ್ಥಳೀಯ ನಾಗರಿಕರಿಂದ ಹಲವು ದೂರುಗಳು ಬಂದ ಹಿನ್ನೆಲೆಯಲ್ಲಿ, ಶಾಸಕರು ಇಂದು ಬೆಳಗ್ಗೆ ಬಡಾವಣೆಗೆ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಿದರು.
“ಸ್ಥಳೀಯ ನಿವಾಸಿಗಳು ಕಾಮಗಾರಿಯ ಕುರಿತು ಹಲವು ಸಮಸ್ಯೆಗಳನ್ನು ಗಮನಕ್ಕೆ ತಂದಿದ್ದಾರೆ. ಅಧಿಕಾರಿಗಳು ಸ್ಥಳದಲ್ಲೇ ಇದ್ದು ಕಾಮಗಾರಿಯ ಗುಣಮಟ್ಟವನ್ನು ಪರಿಶೀಲಿಸಬೇಕು. ಸಾರ್ವಜನಿಕರ ದೂರುಗಳಿಗೆ ಅವಕಾಶ ನೀಡದಂತೆ ತಕ್ಷಣವೇ ಲೋಪಗಳನ್ನು ಸರಿಪಡಿಸಿ, ತ್ವರಿತವಾಗಿ ಕೆಲಸ ಪೂರ್ಣಗೊಳಿಸಬೇಕು,” ಎಂದು ಶಾಸಕರು ಸಂಬಂಧಪಟ್ಟ ಎಂಜಿನಿಯರ್ಗಳು ಹಾಗೂ ಗುತ್ತಿಗೆದಾರರಿಗೆ ತಾಕೀತು ಮಾಡಿದರು.
ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು, ಬಡಾವಣೆಯ ನಾಗರಿಕರು, ಕಾರ್ಯಕರ್ತರು ಹಾಗೂ ಮಹಾನಗರ ಪಾಲಿಕೆ ಅಧಿಕಾರಿಗಳು ಉಪಸ್ಥಿತರಿದ್ದರು.
— ಶಾಸಕರ ಕಾರ್ಯಾಲಯ, ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರ
