Wednesday, November 18, 2026
Wednesday, November 18, 2026

ಜಿಲ್ಲಾ ಗಾಣಿಗರ ಭವನ ನಿರ್ಮಾಣಕ್ಕೆ ಅನುದಾನ ನೀಡಲು ಮನವಿ

Date:

ಸಹಕಾರಿ ಸಪ್ತಾಹ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಶಿವಮೊಗ್ಗಕ್ಕೆ ಆಗಮಿಸಿದ್ದ ಕರ್ನಾಟಕ ಸರ್ಕಾರದ ಮಾನ್ಯ ಸಹಕಾರಿ ಸಚಿವರಾದ ಶ್ರೀ ಲಕ್ಷ್ಮಣ ಸವದಿ ಅವರನ್ನು ಶಿವಮೊಗ್ಗ ಜಿಲ್ಲಾ ಗಾಣಿಗ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಸನ್ಮಾನಿಸಿ, ಗಾಣಿಗ ಸಮುದಾಯ ಭವನ ನಿರ್ಮಾಣಕ್ಕೆ ಅಗತ್ಯ ಅನುದಾನ ಒದಗಿಸುವಂತೆ ಮನವಿ ಸಲ್ಲಿಸಲಾಯಿತು.

ಕಿಮ್ಮನೆ ರೆಸಾರ್ಟ್‌ನಲ್ಲಿ ಗಾಣಿಗ ಸಂಘದ ಅಧ್ಯಕ್ಷರಾದ ಜಿ. ವಿಜಯ್ ಕುಮಾರ್ ಅವರ ನೇತೃತ್ವದಲ್ಲಿ ಸಚಿವರನ್ನು ಭೇಟಿಯಾದ ಸಂಘದ ಪದಾಧಿಕಾರಿಗಳು ಗೌರವಪೂರ್ವಕವಾಗಿ ಅಭಿನಂದಿಸಿದರು.

ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲೆಯ ಗಾಣಿಗ ಸಮಾಜದ ಸ್ಥಿತಿಗತಿ ಹಾಗೂ ಸಮುದಾಯದ ಅಭಿವೃದ್ಧಿ ಕುರಿತು ಸಚಿವರು ಆತ್ಮೀಯವಾಗಿ ವಿಚಾರಿಸಿದರು. ಗಾಣಿಗ ಸಮುದಾಯದ ಸಾಮಾಜಿಕ ಹಾಗೂ ಶೈಕ್ಷಣಿಕ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ಸಮುದಾಯ ಭವನ ನಿರ್ಮಾಣದ ಅಗತ್ಯತೆಯನ್ನು ಸಚಿವರ ಗಮನಕ್ಕೆ ತರಲಾಯಿತು.

ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರಾದ ಶ್ರೀ ಲಕ್ಷ್ಮಣ ಸವದಿ ಅವರು, ಸಮುದಾಯ ಭವನ ನಿರ್ಮಾಣದ ವಿಚಾರವನ್ನು ಮಾನ್ಯ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಅಗತ್ಯ ಅನುದಾನ ಒದಗಿಸಲು ಪ್ರಯತ್ನಿಸುವುದಾಗಿ ಭರವಸೆ ನೀಡಿದರು.

ಈ ಸಂಧರ್ಭದಲ್ಲಿ ಕರ್ನಾಟಕ ರಾಜ್ಯ ಸಹಕಾರಿ ಮಹಾಮಂಡಳದ ಉಪಾಧ್ಯಕ್ಷರಾದ ಮಾನ್ಯ ಬಿ.ಕೆ. ಶಿವಕುಮಾರ್ ರವರು, ಸಂಘದ ಪ್ರಧಾನ ಕಾರ್ಯದರ್ಶಿಗಳಾದ ವಾಗೀಶ್ ಕೋಠಿ, ಖಜಾಂಚಿ ರವಿ ಅಜ್ಜಿಮನೆ, ಪದಾಧಿಕಾರಿಗಳಾದ ಮಂಜಪ್ಪ ಸಜ್ಜನ್ ಶೆಟ್ಟರ್, ಪರಮೇಶ್ವರಪ್ಪ, ಗುರುರಾಜ್ ಮತ್ತಿ, ಕಾನೂರು ಮಲ್ಲಿಕಾರ್ಜುನ ಶಿವಯೋಗೀಶ್ವರ್ ನೀಲಗುಂದ ಹಾಗೂ ಕಿರಣ್ ಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Karnataka Sangha ವಿದ್ವಾನ್ ಜಿ.ಎಸ್. ನಟೇಶ್ ಅವರಿಗೆ ಕರ್ನಾಟಕ ಸಂಘದ ಪ್ರತಿಷ್ಠಿತ “ನವಿಲುಗರಿ” ಪುರಸ್ಕಾರ ನೀಡಿಕೆ ಸಮಾರಂಭ

Shivamogga Karnataka Sangha ಶಿವಮೊಗ್ಗ ಕರ್ನಾಟಕ ಸಂಘವು ಕನ್ನಡ ರಾಜ್ಯೋತ್ಸವದ ಅಂಗವಾಗಿ...

Madhu Bangarappa ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ಮಾಧ್ಯಮ ಜಾರಿ- ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಗಳ ಬಲವರ್ಧನೆ ಮತ್ತು ಖಾಸಗಿ ಶಾಲೆಗಳ ಪೈಪೋಟಿಯನ್ನು...

Klive special Article ಪದೇ ಪದೆ ಮೂತ್ರ ವಿಸರ್ಜನೆ! ಸಮಸ್ಯೆಯ ಮೂಲ ಏನು? ...

ಹಗಲು-ರಾತ್ರಿ ಎನ್ನದೆ ಪದೇ ಪದೇ ಶೌಚಾಲಯಕ್ಕೆ ಓಡಬೇಕಾಗುವುದು ದಿನನಿತ್ಯದ ಬದುಕಿಗೆ, ನೆಮ್ಮದಿಯ...