Wednesday, November 18, 2026
Wednesday, November 18, 2026

ವಿಕಲಚೇತನರು ಮತ್ತು ಹಿರಿಯ ನಾಗರಿಕರ ಸಬಲೀಕರಣ : 14 ವಿವಿಧ ಯೋಜನೆಗಳ ಲಾಭ ಪಡೆಯಲು ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

Date:

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು 2026-27ನೇ ಸಾಲಿಗೆ 14 ಫಲಾನುಭವಿ ಆಧಾರಿತ ಯೋಜನೆಗಳನ್ನು ಸುವಿಧಾ ಯೋಜನೆಯಡಿ ವಿಕಲಚೇತನರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಯೋಜನೆಗಳ ವಿವರ : ಆಧಾರ ಯೋಜನೆ, ವೈದ್ಯಕೀಯ ಪರಿಹಾರ ನಿಧಿ ಯೋಜನೆ, ಸಾಧನೆ ಯೋಜನೆ, ಪ್ರತಿಭಾವಂತ ವಿಕಲಚೇತನ ವಿದ್ಯಾರ್ಥಿಗಳಿಗೆ ಪ್ರೋತ್ಸಾಧನ ಯೋಜನೆ, ನಿರುದ್ಯೋಗ ಭತ್ಯೆ, ಶಿಶುಪಾಲನಾ ಭತ್ಯೆ, ಮರಣ ಪರಿಹಾರ ನಿಧಿ, ಪ್ರತಿಭೆ ಯೋಜನೆ, ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್‌ಟಾಪ್, ದೃಷ್ಟಿದೋಷ ಹೊಂದಿರುವ ವಿಕಲಚೇತನರಿಗೆ ಬ್ರೈಲ್ ಕಿಟ್ ಯೋಜನೆ, ದೈಹಿಕ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರವಾಹನ ಯೋಜನೆ, ಶ್ರವಣದೋಷವುಳ್ಳ ವ್ಯಕ್ತಿಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರ ಯೋಜನೆ, ಸಾಧನ ಸಲಕರಣೆಗಳ ಯೋಜನೆ ಹಾಗೂ ವಿಕಲಚೇತನ ವ್ಯಕ್ತಿಗಳಿಗೆ ಬ್ಯಾಟರಿಚಾಲಿತ ವ್ಹೀಲ್ ಚೇರ್ ಯೋಜನೆಗಳು.
ಆಸಕ್ತ ಶಿವಮೊಗ್ಗ ಜಿಲ್ಲೆಯ ವಿಶೇಷ ವಿಕಲಚೇತನರು ಗ್ರಾಮ ಒನ್, ಕರ್ನಾಟಕ ಒನ್ ಮತ್ತು ಸೇವಾಸಿಂಧು https://sevasindhu.karnataka.gov.in/sevasindhu/kannada ಪೋರ್ಟಲ್‌ನಲ್ಲಿ ನ.30 ರೊಳಗಾಗಿ ಅರ್ಜಿ ಸಲ್ಲಿಸುವುದು. ಸಲ್ಲಿಸಿದ ಅರ್ಜಿಯನ್ನು ಎಲ್ಲಾ ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ ದ್ವಿಪತ್ರಿಯಲ್ಲಿ ಆಯಾ ತಾಲೂಕಿನ ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿ.ಆರ್.ಡಬ್ಲ್ಯೂ/ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಯು.ಆರ್.ಡಬ್ಲ್ಯೂಗಳಿಗೆ ನೀಡುವುದು.
ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ, ದೂ.ಸಂ.: 08182- 251676 ಹಾಗೂ ಶಿವಮೊಗ್ಗ -9980150110/8746997896, ಭದ್ರಾವತಿ-7899137243, ಶಿಕಾರಿಪುರ-9741161346, ಸಾಗರ-9535247757, ಸೊರಬ-9110493122, ತೀರ್ಥಹಳ್ಳಿ-9480767638 ಹಾಗೂ ಹೊಸನಗರ-9731922693 ತಾಲೂಕು ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರುಗಳನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Karnataka Sangha ವಿದ್ವಾನ್ ಜಿ.ಎಸ್. ನಟೇಶ್ ಅವರಿಗೆ ಕರ್ನಾಟಕ ಸಂಘದ ಪ್ರತಿಷ್ಠಿತ “ನವಿಲುಗರಿ” ಪುರಸ್ಕಾರ ನೀಡಿಕೆ ಸಮಾರಂಭ

Shivamogga Karnataka Sangha ಶಿವಮೊಗ್ಗ ಕರ್ನಾಟಕ ಸಂಘವು ಕನ್ನಡ ರಾಜ್ಯೋತ್ಸವದ ಅಂಗವಾಗಿ...

Madhu Bangarappa ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ಮಾಧ್ಯಮ ಜಾರಿ- ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಗಳ ಬಲವರ್ಧನೆ ಮತ್ತು ಖಾಸಗಿ ಶಾಲೆಗಳ ಪೈಪೋಟಿಯನ್ನು...

Klive special Article ಪದೇ ಪದೆ ಮೂತ್ರ ವಿಸರ್ಜನೆ! ಸಮಸ್ಯೆಯ ಮೂಲ ಏನು? ...

ಹಗಲು-ರಾತ್ರಿ ಎನ್ನದೆ ಪದೇ ಪದೇ ಶೌಚಾಲಯಕ್ಕೆ ಓಡಬೇಕಾಗುವುದು ದಿನನಿತ್ಯದ ಬದುಕಿಗೆ, ನೆಮ್ಮದಿಯ...