ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಡಿ ಹೊಸನಗರ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಅಂಗನವಾಡಿಗಳಲ್ಲಿ ಖಾಲಿಯಿರುವ 06 ಕಾರ್ಯಕರ್ತೆಯರ ಹಾಗೂ 48 ಸಹಾಯಕಿಯರ ಹುದ್ದೆಗಳಿಗೆ ಅರ್ಹ ಸ್ಥಳೀಯ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಆಸಕ್ತರು ಆರ್ಜಿ ನಮೂನೆಯನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಸಂತೆ ಮಾರ್ಕೆಟ್ ಹತ್ತಿರ, 1ನೇ ಮಹಡಿ ಸುಮೇಧಾ ಅಡಿಕೆ ಮಂಡಿ ಕಟ್ಟಡ, ಹೊಸನಗರ ಇಲ್ಲಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ ಡಿ.19 ರೊಳಗಾಗಿ ಸಲ್ಲಿಸುವುದು.
ಹೆಚ್ಚಿನ ಮಾಹಿತಿಗಾಗಿ ಹೊಸನಗರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ದೂ.ಸಂ.: 08185-295485 ನ್ನು ಸಂಪರ್ಕಿಸುವಂತೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ತಿಳಿಸಿರುತ್ತಾರೆ.
