B.Y. Raghavendra 2024-25 ಹಾಗೂ 2025-26 ನೇ ಸಾಲಿನ ಹವಾಮಾನ ಆಧಾರಿತ ಬೆಳೆ ವಿಮೆ ಪರಿಹಾರ ವಿತರಣೆಯಲ್ಲಿನ ತಾರತಮ್ಯ ಮತ್ತು ಅನ್ಯಾಯವನ್ನು ಖಂಡಿಸಿ ಇಂದು ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಚೇರಿ ಎದುರು ರೈತರು ಹಮ್ಮಿಕೊಂಡಿರುವ ಬೃಹತ್ ಪ್ರತಿಭಟನೆ ಹಾಗೂ ಅನಿರ್ದಿಷ್ಟಾವಧಿ ಧರಣಿ ಸ್ಥಳಕ್ಕೆ ಭೇಟಿ ನೀಡಿ, ರೈತ ಬಾಂಧವರ ಅಹವಾಲುಗಳನ್ನು ಸಂಸದ ಬಿ.ವೈ.ರಾಘವೇಂದ್ರ ಆಲಿಸಿದರು.
ಈ ಸಂದರ್ಭದಲ್ಲಿ ತೀರ್ಥಹಳ್ಳಿ ಕ್ಷೇತ್ರದ ಶಾಸಕರಾದ ಶ್ರೀ ಆರಗ ಜ್ಞಾನೇಂದ್ರ ಅವರು ಹಾಗೂ ಶಿವಮೊಗ್ಗ ಜಿಲ್ಲಾಧಿಕಾರಿಗಳು ಉಪಸ್ಥಿತರಿದ್ದು, ರೈತರ ಸಮಸ್ಯೆಗಳ ಕುರಿತು ಸ್ಥಳದಲ್ಲೇ ಗಂಭೀರವಾಗಿ ಚರ್ಚಿಸಿದರು
ಈ ಹಿಂದೆ ನಡೆದ ಸಭೆಯಲ್ಲಿ ಚರ್ಚಿಸಿದಂತೆ, ದುರಸ್ತಿಯಲ್ಲಿರುವ ಮಳೆ ಮಾಪನ ಕೇಂದ್ರಗಳು ಹಾಗೂ KSNMDC ಮತ್ತು KPTCL ಮಳೆ ಅಂಕಿ-ಅಂಶಗಳ ನಡುವಿನ ವ್ಯತ್ಯಾಸದಿಂದ ರೈತರಿಗೆ ಆಗಿರುವ ಅನ್ಯಾಯವನ್ನು ಸರಿಪಡಿಸಿ ತಕ್ಷಣವೇ ನ್ಯಾಯಯುತ ಪರಿಹಾರ ಮತ್ತು ಪ್ರೀಮಿಯಂ ಮೊತ್ತವನ್ನು ಬಿಡುಗಡೆ ಮಾಡುವಂತೆ ಅಧಿಕಾರಿಗಳಿಗೆ ಮತ್ತೊಮ್ಮೆ ಕಟ್ಟುನಿಟ್ಟಿನ ಸೂಚನೆಯನ್ನ ಬಿ.ವೈರಾಘವೇಂದ್ರ ನೀಡಿದರು
B.Y. Raghavendra ಅನ್ನದಾತರ ಸಂಕಷ್ಟಗಳಿಗೆ ಸ್ಪಂದಿಸಿ, ಅವರಿಗೆ ನ್ಯಾಯ ಒದಗಿಸುವವರೆಗೂ ನಾವು ಸದಾ ರೈತರ ಪರವಾಗಿ ನಿಲ್ಲುತ್ತೇವೆ ಎಂದು ಸಂಸದ ಬಿ.ವೈ.ರಾಘವೇಂದ್ರ ಘೋಷಿಸಿದರು.
