ಕರ್ನಾಟಕ ರಾಜ್ಯ ಕುಂಬಾರ ಸಮುದಾಯ ಅಭಿವೃದ್ಧಿ ನಿಗಮವು ಕುಂಬಾರ ಸಮುದಾಯದ ಜನರ ಆರ್ಥಿಕ ಅಭಿವೃದ್ಧಿಗಾಗಿ ವಿವಿಧ ಕಲ್ಯಾಣ ಯೋಜನೆಗಳನ್ನು ಹಮ್ಮಿಕೊಂಡಿದ್ದು, ಆಸಕ್ತರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು-ಶೈಕ್ಷಣಿಕ ಸಾಲ ಯೋಜನೆ ಹಾಗೂ ಸ್ವಾವಲಂಭಿ ಸಾರಥಿ ಯೋಜನೆಗಳಿಗೆ ಕುಂಬಾರ, ಚಕ್ರಸಾಲಿ, ಗುಣಗ, ಗಣಿಗ, ಕೊಯುವ, ಕುಲ, ಕುಲಾಲ, ಕುಂಬಾರ್, ಕುಂಬಾರ್ಡ್, ಕುಮ್ಮಾರ, ಕುಸವನ್, ಮೂಲ್ಯ, ಸಜ್ಜನ ಕುಂಬಾರ, ಖುಮಾರ, ಕುಂಬಾರ, ಖುಂಭಾರ ಮತ್ತು ಕುಲಾಲರ್ ಜಾತಿಗಳಿಗೆ ಸೇರಿದವರಾಗಿದ್ದು, ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ. 98000/- ಮತ್ತು ಪಟ್ಟಣ ಪ್ರದೇಶದವರಿ ರೂ. 1.20 ಲಕ್ಷದೊಳಗಿರಬೇಕು. ಅರ್ಜಿದಾರರ ವಯಸ್ಸು 18-55 ವರ್ಷಗಳ ಮಿತಿಯಲ್ಲಿರಬೇಕು.
ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.
ಆಸಕ್ತ ಕುಂಬಾರ ಸಮುದಾಯದವರು ಸೇವಾಸಿಂಧು https://sevaone.karanatak.gov.in ಮುಖಾಂತರ ಗ್ರಾಮ ಒನ್, ಶಿವಮೊಗ್ಗ ಒನ್ ಹಾಗೂ ಕರ್ನಾಟಕ ಒನ್ ಪೋರ್ಟಲ್ಗಳಲ್ಲಿ ಡಿ. 15 ರೊಳಗಾಗಿ ಅರ್ಜಿ ಸಲ್ಲಿಸುವುದು.
ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ಸೈಟ್ https://bcwd.karnataka.gov.in/kumbaradc/public/ ಅಥವಾ ಜಿಲ್ಲಾ ವ್ಯವಸ್ಥಾಪಕರು ಕಚೇರಿ, ಡಿ. ದೇವರಾಜ ಅರಸು ಭವನ, ಬಾಲರಾಜ್ ಅರಸು ರಸ್ತೆ, ಕೆ.ಇ.ಬಿ. ಸರ್ಕಲ್ ಹತ್ತಿರ, , ದೂ.ಸಂ.:08182-229634ನ್ನು ಸಂಪರ್ಕಿಸಬಹುದೆಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಕುಂಬಾರ ಸಮುದಾಯ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಡಿ ಆನ್ಲೈನ್ ಅರ್ಜಿ ಆಹ್ವಾನ
Date:
