ಓರಿಯಂಟಲ್ ಇನ್ಶೂರೆನ್ಸ್ ಕಂಪನಿಯಲ್ಲಿ ಅಭಿವೃದ್ಧಿ ಅಧಿಕಾರಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ, ಶ್ರೀ ಶಿವಗಂಗಾ ಯೋಗ ಕೇಂದ್ರದ ವಿಶ್ವಸ್ಥ ಮಂಡಳಿಯ ಪೋಷಕ ಸದಸ್ಯರು ಹಾಗೂ ಯೋಗ ಶಿಕ್ಷಕರಾದ ಜಿ.ಎಸ್. ಓಂಕಾರ್ (69) ಅವರು ತೀವ್ರ ಹೃದಯಾಘಾತದಿಂದ ಭಾನುವಾರ ರಾತ್ರಿ ಶಿವಮೊಗ್ಗದ ಸರ್ಜಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಯೋಗ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಅವರು ಅಪಾರ ಯೋಗ ಬಂಧುಗಳು, ಶಿಷ್ಯರು ಹಾಗೂ ಸ್ನೇಹಿತರನ್ನು ಅಗಲಿದ್ದಾರೆ.
ಅವರ ಅಕಾಲಿಕ ನಿಧನಕ್ಕೆ ಸಂಸದ ಬಿ.ವೈ. ರಾಘವೇಂದ್ರ, ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
ಶಿವಗಂಗಾ ಯೋಗ ಕೇಂದ್ರದ ಯೋಗ ಗುರುಗಳಾದ ಯೋಗಾಚಾರ್ಯ ಡಾ. ಸಿ.ವಿ. ರುದ್ರಾರಾಧ್ಯ, ಕೇಂದ್ರದ ಅಧ್ಯಕ್ಷ ಎಸ್. ರುದ್ರೇಗೌಡ, ಕಾರ್ಯದರ್ಶಿ ಚಂದ್ರಶೇಖರಯ್ಯ, ಎಸ್.ಎಸ್. ಜ್ಯೋತಿಪ್ರಕಾಶ್ ಹಾಗೂ ಯೋಗ ಕೇಂದ್ರದ ಎಲ್ಲಾ ಯೋಗ ಶಿಕ್ಷಕರು, ವಿಶ್ವಸ್ಥ ಮಂಡಳಿ ಸದಸ್ಯರು ಮತ್ತು ಪೋಷಕ ಸದಸ್ಯರು ಮೃತರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.
ರಾಘವ ಶಾಖೆಯ ಯೋಗ ಶಿಕ್ಷಕರಾದ ವಿಜಯಕೃಷ್ಣ, ಹರೀಶ್ ಹೆಚ್.ಕೆ., ಕಾಟನ್ ಜಗದೀಶ್, ಜಿ. ವಿಜಯ್ ಕುಮಾರ್, ಪರಿಸರ ನಾಗರಾಜ್, ನರಸೋಜಿ ರಾವ್, ಯೋಗಪಟುಗಳಾದ ಸುಬ್ರಮಣಿ ಹಾಗೂ ಆನಂದ್ ಸೇರಿದಂತೆ ಯೋಗ ಬಂಧುಗಳು ಸಂತಾಪ ಸೂಚಿಸಿದ್ದಾರೆ.
ಮೃತರ ಅಂತ್ಯಕ್ರಿಯೆ ಸೋಮವಾರ ಮಧ್ಯಾಹ್ನ ಹಿಂದೂ ವೀರಶೈವ ರುದ್ರಭೂಮಿಯಲ್ಲಿ ನೆರವೇರಿತು.
