ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ 2026-27ನೇ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿಹೆಚ್.ಡಿ. ಅಧ್ಯಯನ ಪ್ರಾರಂಭಿಸಿರುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ,3ಎ ಹಾಗೂ 3ಬಿಗೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಮಾಸಿಕ ವ್ಯಾಸಂಗ ವೇತನ/ಫೆಲೋಶಿಪ್ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಶಾಸನಬದ್ಧ ವಿಶ್ವ ವಿದ್ಯಾಲಯಗಳಲ್ಲಿ ಅಥವಾ ಅಧೀನ ಸಂಸ್ಥೆಗಳಲ್ಲಿ ಪ್ರಥಮ ವರ್ಷದ ಪಿಹೆಚ್.ಡಿ. ಅಧ್ಯಯನ ಮಾಡುತ್ತಿರುವ ಹೊಸ ಅಭ್ಯರ್ಥಿಗಳು https://bcwd.karnataka.gov.in ಮೂಲಕ ಡಿ. 17 ರೊಳಗಾಗಿ ಅರ್ಜಿ ಸಲ್ಲಿಸುವುದು. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್ಸೈಟ್ ಅಥವಾ ಸಹಾಯವಾಣಿ 8050770004 ನ್ನು ಸಂಪರ್ಕಿಸಬಹುದೆಂದು ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿರುತ್ತಾರೆ.
ಮಾಸಿಕ ವ್ಯಾಸಂಗವೇತನ / ಫೆಲೋಶಿಪ್ ಗಾಗಿ ಆನ್ ಲೈನ್ ಅರ್ಜಿ ಆಹ್ವಾನ
Date:
