Tuesday, November 24, 2026
Tuesday, November 24, 2026

ಸರ್ಕಾರಿ ನಿವೃತ್ತ ನೌಕರರ ಸಂಘದ ವತಿಯಿಂದ ಅದ್ಧೂರಿ ರಾಜ್ಯೋತ್ಸವ

Date:

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ 2027ರ ಜನವರಿ 1ನ್ನು ಅರ್ಹತಾ ದಿನಾಂಕವನ್ನಾಗಿ ಪರಿಗಣಿಸಿ, ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಎಸ್‌ಆರ್-2027) ಕಾರ್ಯವನ್ನು ಕೈಗೊಳ್ಳಲಾಗುತ್ತಿದೆ. ಶಿವಮೊಗ್ಗ ಜಿಲ್ಲೆಯ ಅರ್ಹ ನಾಗರಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಶಿವಮೊಗ್ಗ ಮಹಾನಗರಪಾಲಿಕೆಯ ಆಯುಕ್ತರು ಹಾಗೂ 113-ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜನವರಿ 1, 2027ಕ್ಕೆ 18 ವರ್ಷ ಪೂರ್ಣಗೊಳಿಸುವ ಯುವಕರು ಮತ್ತು ಇದುವರೆಗೆ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸದ ಅರ್ಹ ನಾಗರಿಕರು ಹೆಸರು ಸೇರ್ಪಡೆ ಮಾಡಬಹುದು. ಇದರ ಜೊತೆಗೆ 2027ರ ಏಪ್ರಿಲ್ 1, ಜುಲೈ 1 ಹಾಗೂ ಅಕ್ಟೋಬರ್ 1ರಂದು 18 ವರ್ಷ ಪೂರ್ಣಗೊಳಿಸಲಿರುವ ಯುವ ಮತದಾರರಿಂದಲೂ ಮುಂಗಡ ಅರ್ಜಿಗಳನ್ನು ಸ್ವೀಕರಿಸಲಾಗುವುದು.
ಪರಿಷ್ಕರಣೆಯ ಪ್ರಮುಖ ವೇಳಾಪಟ್ಟಿ
ಮತಗಟ್ಟೆಗಳ ಮರುಹೊಂದಾಣಿಕೆ: ನವೆಂಬರ್ 23, 2026
ಕರಡು ಮತದಾರರ ಪಟ್ಟಿ ಪ್ರಕಟಣೆ: ಡಿಸೆಂಬರ್ 1, 2026
ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆ ಅವಧಿ: ಡಿಸೆಂಬರ್ 1 ರಿಂದ ಡಿಸೆಂಬರ್ 31, 2026
ಹಕ್ಕು ಮತ್ತು ಆಕ್ಷೇಪಣೆಗಳ ವಿಲೇವಾರಿ: ಜನವರಿ 14, 2027ರ ಒಳಗೆ
ಅಂತಿಮ ಮತದಾರರ ಪಟ್ಟಿ ಪ್ರಕಟಣೆ: ಜನವರಿ 20, 2027.
ಮತದಾರರು voter.eci.gov.in ಪೋರ್ಟಲ್ ಅಥವಾ ECINET ಆ್ಯಪ್ ಮೂಲಕ ಆಧಾರ್ ಆಧಾರಿತ ಇ-ಸೈನ್ ಬಳಸಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು:
ನಮೂನೆ-6: ಹೊಸದಾಗಿ ಹೆಸರು ಸೇರ್ಪಡೆಗಾಗಿ.
ನಮೂನೆ-6ಎ: ಅನಿವಾಸಿ ಭಾರತೀಯ ಮತದಾರರ ನೋಂದಣಿಗಾಗಿ.
ನಮೂನೆ-7: ಹೆಸರು ತೆಗೆದುಹಾಕಲು ಅಥವಾ ಸೇರ್ಪಡೆಗೆ ಆಕ್ಷೇಪಣೆ ಸಲ್ಲಿಸಲು.
ನಮೂನೆ-8: ವಿಳಾಸ ಬದಲಾವಣೆ, ತಿದ್ದುಪಡಿ, ಬದಲಿ ಗುರುತಿನ ಚೀಟಿ ಹಾಗೂ ವಿಶೇಷಚೇತನ ಗುರುತಿಸುವಿಕೆಗಾಗಿ. ಸಾರ್ವಜನಿಕರು ತಮ್ಮ ಕುಟುಂಬದ ಅರ್ಹ ಸದಸ್ಯರ ಹೆಸರುಗಳು ಮತದಾರರ ಪಟ್ಟಿಯಲ್ಲಿ ಇರುವುದನ್ನು ಖಚಿತಪಡಿಸಿಕೊಂಡು, ಯಾವುದೇ ಹೆಸರು ಬಿಟ್ಟುಹೋಗದಂತೆ ಪರಿಶೀಲನೆ ಮಾಡಿಕೊಳ್ಳುವಂತೆ ಹಾಗೂ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯವನ್ನು ಯಶಸ್ವಿಗೊಳಿಸಲು ಸಹಕರಿಸುವಂತೆ ಮಹಾನಗರಪಾಲಿಕೆ ಉಪ ಆಯುಕ್ತರು ಮನವಿ ಮಾಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಯಾವುದೇ ಕಾರಣಕ್ಕೂ ಕ್ಲಷ್ಟರ್ ಕಿಚನ್ ಕೇಂದ್ರ ಸ್ಥಾಪಿಸುವುದಿಲ್ಲ- ಮಧು ಬಂಗಾರಪ್ಪ

Madhu Bangarappa ರಾಜ್ಯ ಅಕ್ಷರದಾಸೋಹ ಬಿಸಿಯೂಟ ತಯಾರಕರ ಯೂನಿಯನ್‌ನ ಗೌರವಾಧ್ಯಕ್ಷ ಎಸ್....

Klive Special Article ಕುಮಾರ ವ್ಯಾಸ ..ನಾನು ಕಂಡಂತೆ ಲೇ: ಪ್ರಸಾದ್ ಶ್ರೀವತ್ಸ, ದಾವಣಗೆರೆ

“ಕುಮಾರ ವ್ಯಾಸನು ಹಾಡಿದನೆಂದರೆಕಲಿಯುಗ ದ್ವಾಪರವಾಗುವುದುಭಾರತ ಕಣ್ಣಲಿ ಕುಣಿವುದು! ಮೈಯಲಿಮಿಂಚಿನ ಹೊಳೆ ತುಳುಕಾಡುವುದು!“ ಕುಮಾರವ್ಯಾಸನ...