Tuesday, November 24, 2026
Tuesday, November 24, 2026

ಆಶ್ರಯ ಯೋಜನೆ ಮನೆ ವಿತರಣೆ ವಿಳಂಬಕ್ಕೆ ಶಾಸಕರ ಅಸಮಾಧಾನ : ಬ್ಯಾಂಕ್ ಗಳಿಗೆ ಸೂಕ್ತ ಎಚ್ಚರಿಕೆವಹಿಸಲು ಸೂಚನೆ

Date:

ಶಾಸಕ ಎಸ್.ಎನ್. ಚೆನ್ನಬಸಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಆಶ್ರಯ ಸಮಿತಿ ಸಭೆಯಲ್ಲಿ ವಸತಿ ಯೋಜನೆಯ ಪ್ರಗತಿ ಹಾಗೂ ಫಲಾನುಭವಿಗಳು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಸುದೀರ್ಘ ಚರ್ಚೆ ನಡೆಯಿತು.

ಸಭೆಯಲ್ಲಿ ಒಟ್ಟು 70 ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿದ್ದು, ಸಭೆಯ ಅಂತ್ಯದಲ್ಲಿ ಫಲಾನುಭವಿಗಳಿಗೆ ನೂತನ ಮನೆಗಳ ಕೀಗಳನ್ನು ಹಸ್ತಾಂತರಿಸಲಾಯಿತು. ಫಲಾನುಭವಿಗಳ ಮುಖದಲ್ಲಿನ ಸಂತಸ ಜನಸೇವೆಗೆ ಮತ್ತಷ್ಟು ಸ್ಫೂರ್ತಿ ನೀಡಿದೆ ಎಂದು ಶಾಸಕ ಎಸ್.ಎನ್. ಚೆನ್ನಬಸಪ್ಪ ತಿಳಿಸಿದರು.

ಗೋವಿಂದಪುರ ಆಶ್ರಯ ಯೋಜನೆಯ ಫಲಾನುಭವಿಗಳಿಗೆ ಗೃಹ ಸಾಲ ಮಂಜೂರು ಮಾಡುವಲ್ಲಿ ಬ್ಯಾಂಕ್‌ಗಳಿಂದ ಆಗುತ್ತಿರುವ ವಿಳಂಬ ಹಾಗೂ ತಾಂತ್ರಿಕ ಸಮಸ್ಯೆಗಳನ್ನು ತಕ್ಷಣ ಪರಿಹರಿಸಿ, ಅರ್ಹರಿಗೆ ಸಾಲ ಸೌಲಭ್ಯ ಕಲ್ಪಿಸುವಂತೆ ಬ್ಯಾಂಕ್ ಪ್ರತಿನಿಧಿಗಳಿಗೆ ಸೂಚಿಸಿದರು.

ಅದೇ ರೀತಿ, ಆಶ್ರಯ ಫಲಾನುಭವಿಗಳಿಗೆ ಗ್ರಾಮ ಪಂಚಾಯಿತಿಯಿಂದ ಇ-ಸ್ವತ್ತು ದಾಖಲೆಗಳನ್ನು ವಿತರಿಸುವಲ್ಲಿ ಎದುರಾಗಿರುವ ಅಡೆತಡೆಗಳನ್ನು ಶೀಘ್ರವಾಗಿ ನಿವಾರಿಸಿ, ವಿಳಂಬವಿಲ್ಲದೆ ದಾಖಲೆಗಳನ್ನು ಒದಗಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಇನ್ನು, ಗೋಪಿಶೆಟ್ಟಿಕೊಪ್ಪ ಆಶ್ರಯ ಯೋಜನೆಯ ಕಾಮಗಾರಿ ಗುತ್ತಿಗೆದಾರರ ನಿರ್ಲಕ್ಷ್ಯದಿಂದ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ, ಈ ವಿಷಯವನ್ನು ಸಂಬಂಧಪಟ್ಟ ಸಚಿವರು ಹಾಗೂ ಅಧಿಕಾರಿಗಳ ಗಮನಕ್ಕೆ ತರಲು ಸಭೆಯಲ್ಲಿ ನಿರ್ಧರಿಸಲಾಯಿತು. ಕಾಮಗಾರಿ ವಿಳಂಬ ಮಾಡಿರುವ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಶಾಸಕ ಚೆನ್ನಬಸಪ್ಪ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಡಿ.ಎಸ್. ಅರುಣ್, ಬಲ್ಕೀಶ್ ಬಾನು, ಮಹಾನಗರ ಪಾಲಿಕೆ ಆಯುಕ್ತ ಮಾಯಣ್ಣ ಗೌಡ, ಆಶ್ರಯ ಸಮಿತಿ ಸದಸ್ಯರು, ಪಾಲಿಕೆ ಅಧಿಕಾರಿಗಳು, ಬ್ಯಾಂಕ್ ಪ್ರತಿನಿಧಿಗಳು ಹಾಗೂ ಫಲಾನುಭವಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಯಾವುದೇ ಕಾರಣಕ್ಕೂ ಕ್ಲಷ್ಟರ್ ಕಿಚನ್ ಕೇಂದ್ರ ಸ್ಥಾಪಿಸುವುದಿಲ್ಲ- ಮಧು ಬಂಗಾರಪ್ಪ

Madhu Bangarappa ರಾಜ್ಯ ಅಕ್ಷರದಾಸೋಹ ಬಿಸಿಯೂಟ ತಯಾರಕರ ಯೂನಿಯನ್‌ನ ಗೌರವಾಧ್ಯಕ್ಷ ಎಸ್....

Klive Special Article ಕುಮಾರ ವ್ಯಾಸ ..ನಾನು ಕಂಡಂತೆ ಲೇ: ಪ್ರಸಾದ್ ಶ್ರೀವತ್ಸ, ದಾವಣಗೆರೆ

“ಕುಮಾರ ವ್ಯಾಸನು ಹಾಡಿದನೆಂದರೆಕಲಿಯುಗ ದ್ವಾಪರವಾಗುವುದುಭಾರತ ಕಣ್ಣಲಿ ಕುಣಿವುದು! ಮೈಯಲಿಮಿಂಚಿನ ಹೊಳೆ ತುಳುಕಾಡುವುದು!“ ಕುಮಾರವ್ಯಾಸನ...