ಶಿವಮೊಗ್ಗ, ನ.25(ಕರ್ನಾಟಕ ವಾರ್ತೆ); ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು 2026-27ನೇ ಸಾಲಿಗೆ ಜಿಲ್ಲೆಯಲ್ಲಿ ಖಾಲಿಯಿರುವ 15 ಶುಶ್ರೂಷಾಧಿಕಾರಿ, 18 ಕಿರಿಯ ಪ್ರಯೋಗ ಶಾಲಾ ತಾಂತ್ರಿಕ ಅಧಿಕಾರಿ ಹಾಗೂ 24 ಫಾರ್ಮಸಿ ಅಧಿಕಾರಿಗಳ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿಗಾಗಿ ಅರ್ಜಿ ಸ್ವೀಕರಿಸಲಾಗಿದ್ದು, ತಾತ್ಕಾಲಿಕ ಪ್ರಥಮ ಆಯ್ಕೆ ಪಟ್ಟಿಯನ್ನು ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ.
ಈ ಆಯ್ಕೆ ಪಟ್ಟಿಯಲ್ಲಿ ಯಾವುದೇ ರೀತಿಯ ಆಕ್ಷೇಪಣೆ ಇದ್ದಲ್ಲಿ ಅರ್ಜಿದಾರರು ನ. 27 ರಿಂದ 29ರ ರಜಾದಿನಗಳು ಸೇರಿದಂತೆ ನ. 30 ರ ಮಧ್ಯಾಹ್ನ 3 ಗಂಟೆಯೊಳಗಾಗಿ ಲಿಖಿತವಾಗಿ ಸಲ್ಲಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ.:08182-222382 ನ್ನು ಸಂಪರ್ಕಿಸುವುದು.
ನೇಮಕಾತಿ ಹುದ್ದೆಗಳ ತಾತ್ಕಾಲಿಕ ಪ್ರಥಮ ಆಯ್ಕೆ ಪ್ರಕಟ. ಆಕ್ಷೇಪಣೆಗಳಿಗೆ ಆಹ್ವಾನ
Date:
