Wednesday, November 25, 2026
Wednesday, November 25, 2026

ತೀರ್ಥಹಳ್ಳಿಯಲ್ಲಿ “ರಾಮಾಯಣ” ಸಿನಿಮಾ ವೀಕ್ಷಿಸಿ ಆನಂದಿಸಿದ ಶಾಲಾಮಕ್ಕಳು

Date:

ಮಕ್ಕಳಲ್ಲಿ ಭಾರತೀಯ ಸಂಸ್ಕೃತಿ, ಪರಂಪರೆ ಹಾಗೂ ಪೌರಾಣಿಕ ಮಹಾಕಾವ್ಯಗಳ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ತೀರ್ಥಹಳ್ಳಿಯ ವಾಗ್ದೇವಿ ಶಾಲೆ ವಿನೂತನ ಕಾರ್ಯಕ್ರಮ ಆಯೋಜಿಸಿತು. ಶಾಲೆಯ 4ರಿಂದ 10ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ತೀರ್ಥಹಳ್ಳಿಯ ವಿನಾಯಕ ಚಿತ್ರಮಂದಿರದಲ್ಲಿ ರಾಮಾಯಣ ಸಿನಿಮಾ ವೀಕ್ಷಿಸಲು ವಿಶೇಷ ವ್ಯವಸ್ಥೆ ಕಲ್ಪಿಸಲಾಗಿತ್ತು. ಶ್ರೀರಾಮನ ಆದರ್ಶ ವ್ಯಕ್ತಿತ್ವ, ಸೀತಾಮಾತೆಯ ತಾಳ್ಮೆ, ಲಕ್ಷ್ಮಣನ ಸಹೋದರ ಪ್ರೀತಿ, ಹನುಮಂತನ ಭಕ್ತಿ ಹಾಗೂ ರಾವಣನ ಅಹಂಕಾರದ ಪರಿಣಾಮಗಳನ್ನು ದೃಶ್ಯಮಾಧ್ಯಮದ ಮೂಲಕ ಪರಿಚಯಿಸಲಾಯಿತು. ಪಠ್ಯಪುಸ್ತಕಗಳಲ್ಲಿ ಓದಿದ್ದ ರಾಮಾಯಣದ ಕಥೆಯನ್ನು ತೆರೆಯ ಮೇಲೆ ವೀಕ್ಷಿಸಿದ ವಿದ್ಯಾರ್ಥಿಗಳು ಮಹಾಕಾವ್ಯದ ಮಹತ್ವದ ಜೊತೆಗೆ ಜೀವನ ಮೌಲ್ಯಗಳನ್ನು ತಿಳಿದುಕೊಳ್ಳುವ ಅವಕಾಶ ಪಡೆದರು. ಶಾಲೆಯ ವ್ಯವಸ್ಥಾಪಕ ಜಗದೀಶ್ ಹಾಗೂ ಆಡಳಿತ ಮಂಡಳಿಯ ಸಹಕಾರದೊಂದಿಗೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಶಿಕ್ಷಣವೆಂದರೆ ಕೇವಲ ಅಂಕ ಗಳಿಸುವುದಲ್ಲ, ಸಂಸ್ಕಾರ ಮತ್ತು ಮಾನವೀಯ ಮೌಲ್ಯಗಳನ್ನು ಬೆಳೆಸುವುದೂ ಹೌದು ಎಂಬ ಆಶಯವನ್ನು ಈ ಕಾರ್ಯಕ್ರಮ ಪ್ರತಿಬಿಂಬಿಸಿತು. ರಾಮಾಯಣದ ಬಗ್ಗೆ ಪಠ್ಯಪುಸ್ತಕದಲ್ಲಿ ಓದಿದ್ದೇವೆ. ಆದರೆ ಸಿನಿಮಾ ವೀಕ್ಷಿಸಿದ ಬಳಿಕ ಅದರಲ್ಲಿರುವ ಹಲವು ವಿಚಾರಗಳು ನಮಗೆ ಸಂಪೂರ್ಣವಾಗಿ ಅರ್ಥವಾದವು. ಭಾರತೀಯ ಸಂಸ್ಕೃತಿ ಮತ್ತು ಪರಂಪರೆಯನ್ನು ತಿಳಿದುಕೊಳ್ಳಲು ಉತ್ತಮ ಅವಕಾಶ ಸಿಕ್ಕಿದೆ. ತಂದೆ-ತಾಯಿಯೊಂದಿಗೆ ಸಿನಿಮಾ ನೋಡಬೇಕೆಂಬ ಆಸೆಯಿತ್ತು. ಇದೀಗ ಶಾಲೆಯ ವತಿಯಿಂದ ಸ್ನೇಹಿತರೊಂದಿಗೆ ಸಿನಿಮಾ ವೀಕ್ಷಿಸಿರುವುದು ತುಂಬಾ ಸಂತೋಷ ತಂದಿದೆ ಎಂದು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ದಿತಿ ಸಂತಸ ಹಂಚಿಕೊಂಡರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Club ರಿವರ್ ಸೈಡ್ ರೋಟರಿ ಕ್ಲಬ್ ಗೆ ವಲಯಮಟ್ಟದ ಚಾಂಪಿಯನ್ ಶಿಪ್

Rotary Club ಕ್ರೀಡಾ ಸಂಭ್ರಮ–26 ಕ್ರೀಡಾಕೂಟದಲ್ಲಿ ರೋಟರಿ ಕ್ಲಬ್ ರಿವರ್‌ ಸೈಡ್...

Madhu Bangarappa ಯಾವುದೇ ಕಾರಣಕ್ಕೂ ಕ್ಲಷ್ಟರ್ ಕಿಚನ್ ಕೇಂದ್ರ ಸ್ಥಾಪಿಸುವುದಿಲ್ಲ- ಮಧು ಬಂಗಾರಪ್ಪ

Madhu Bangarappa ರಾಜ್ಯ ಅಕ್ಷರದಾಸೋಹ ಬಿಸಿಯೂಟ ತಯಾರಕರ ಯೂನಿಯನ್‌ನ ಗೌರವಾಧ್ಯಕ್ಷ ಎಸ್....

Klive Special Article ಕುಮಾರ ವ್ಯಾಸ ..ನಾನು ಕಂಡಂತೆ ಲೇ: ಪ್ರಸಾದ್ ಶ್ರೀವತ್ಸ, ದಾವಣಗೆರೆ

“ಕುಮಾರ ವ್ಯಾಸನು ಹಾಡಿದನೆಂದರೆಕಲಿಯುಗ ದ್ವಾಪರವಾಗುವುದುಭಾರತ ಕಣ್ಣಲಿ ಕುಣಿವುದು! ಮೈಯಲಿಮಿಂಚಿನ ಹೊಳೆ ತುಳುಕಾಡುವುದು!“ ಕುಮಾರವ್ಯಾಸನ...