Constitution Day ಸಂವಿಧಾನ ದಿನಾಚರಣೆಯ ಅಂಗವಾಗಿ ಇಂದು ವಿಧಾನಸೌಧದ ಮುಂಭಾಗದಲ್ಲಿರುವ ಭಾರತರತ್ನ, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಉಪಮುಖ್ಯಮಂತ್ರಿಗಳಾದ ಡಾ. ಜಿ. ಪರಮೇಶ್ವರ ಅವರು ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು.
ಸಂವಿಧಾನವು ದೇಶದ ಪ್ರತಿಯೊಬ್ಬ ನಾಗರಿಕನಿಗೂ ಸಮಾನತೆ, ಸ್ವಾತಂತ್ರ್ಯ ಮತ್ತು ನ್ಯಾಯದ ಹಕ್ಕುಗಳನ್ನು ಕಲ್ಪಿಸಿ, ಪ್ರಜಾಪ್ರಭುತ್ವದ ಬಲಿಷ್ಠ ಅಡಿಪಾಯವಾಗಿದೆ. ಡಾ. ಬಿ.ಆರ್. ಅಂಬೇಡ್ಕರ್ ಅವರ ದೂರದೃಷ್ಟಿ ಹಾಗೂ ಸಾಮಾಜಿಕ ನ್ಯಾಯದ ಪರಿಕಲ್ಪನೆಗಳು ಇಂದಿಗೂ ದೇಶದ ಅಭಿವೃದ್ಧಿಗೆ ದಾರಿದೀಪವಾಗಿವೆ.
ಸಂವಿಧಾನದ ಆಶಯಗಳನ್ನು ಎತ್ತಿಹಿಡಿದು, ಸಮಾನತೆ ಮತ್ತು ಸಾಮಾಜಿಕ ನ್ಯಾಯದ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡು, ಬಲಿಷ್ಠ ಹಾಗೂ ಸಮೃದ್ಧ ಭಾರತ ನಿರ್ಮಾಣಕ್ಕೆ ನಾವೆಲ್ಲರೂ ಬದ್ಧರಾಗೋಣ ಎಂದು ಡಿಸಿಎಂ ಜಿ.ಪರಮೇಶ್ವರ ಅವರು ತಿಳಿಸಿದ್ದಾರೆ.
Constitution Day ಈ ವೇಳೆ ಸಮಾಜ ಕಲ್ಯಾಣ ಸಚಿವರಾದ ಕೆ.ಹೆಚ್. ಮುನಿಯಪ್ಪ ಅವರು ಹಾಗೂ ವಿವಿಧ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.
