Saturday, November 28, 2026
Saturday, November 28, 2026

ಮೆಗ್ಗಾನ್ ಆಸ್ಪತ್ರೆ; ವೈದ್ಯರ ಕೊರತೆ , ಔಷಧಿಗಳ ಅಲಭ್ಯತೆ . ಸಾರ್ವಜನಿಕರಿಗೆ ತೀವ್ರ ತೊಂದರೆ. ಸಚಿವರೇ ಸರಿಪಡಿಸಿ- ಶಾಸಕ ಚೆನ್ನಿ ಆಗ್ರಹ

Date:

ಶಿವಮೊಗ್ಗ “ಜಿಲ್ಲೆಯ ಬಡ ರೋಗಿಗಳ ಆಶಾಕಿರಣವಾಗಿರುವ ಮೆಗ್ಗಾನ್ ಆಸ್ಪತ್ರೆಯಲ್ಲಿ ವೈದ್ಯರ ಕೊರತೆ ಮತ್ತು ಔಷಧಿ ಅಲಭ್ಯತೆಯಿಂದ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿದೆ. ತಕ್ಷಣವೇ ಆಸ್ಪತ್ರೆಯ ವ್ಯವಸ್ಥೆಯನ್ನು ಸರಿಪಡಿಸುವುದರ ಜೊತೆಗೆ ಶಿವಮೊಗ್ಗಕ್ಕೆ ಪ್ರತ್ಯೇಕ ನೂತನ ಜಿಲ್ಲಾ ಆಸ್ಪತ್ರೆಯನ್ನು ಮಂಜೂರು ಮಾಡಬೇಕು,” ಎಂದು ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎಸ್. ಎನ್. ಚನ್ನಬಸಪ್ಪ (ಚೆನ್ನಿ) ಅವರು ಒತ್ತಾಯಿಸಿದ್ದಾರೆ.

ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಆರೋಗ್ಯ ಇಲಾಖೆಯ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಗರದ ಆರೋಗ್ಯ ಕ್ಷೇತ್ರದ ಪ್ರಮುಖ ಸಮಸ್ಯೆಗಳ ಕುರಿತು ಮನವಿ ಸಲ್ಲಿಸಿದರು.

ಶಾಸಕರ ಪ್ರಮುಖ ಬೇಡಿಕೆಗಳು:
ವೈದ್ಯರ ವರ್ಗಾವಣೆ/ನಿಯೋಜನೆ ಬೇಡ: ಮೆಗ್ಗಾನ್ ಆಸ್ಪತ್ರೆಯಲ್ಲಿರುವ ನುರಿತ ವೈದ್ಯರನ್ನು ಬೇರೆ ಕಡೆಗೆ ನಿಯೋಜನೆ ಮೇಲೆ ಕಳುಹಿಸಬಾರದು.

ನೂತನ ಜಿಲ್ಲಾ ಆಸ್ಪತ್ರೆ ಮಂಜೂರಾತಿ: ಮೆಗ್ಗಾನ್ ಆಸ್ಪತ್ರೆಯು ಜಿಲ್ಲಾ ಬೋಧನಾ ಆಸ್ಪತ್ರೆಯಾಗಿರುವುದರಿಂದ ಜಿಲ್ಲಾ ಆಸ್ಪತ್ರೆಯ ವಿಶೇಷ ಸೌಲಭ್ಯಗಳಿಂದ ವಂಚಿತವಾಗಿದೆ. ಹೀಗಾಗಿ ಪ್ರತ್ಯೇಕ ನೂತನ ಜಿಲ್ಲಾ ಆಸ್ಪತ್ರೆ ಮಂಜೂರು ಮಾಡಬೇಕು.

ಔಷಧಿ ಕೊರತೆ ನಿವಾರಿಸಿ: ಆಸ್ಪತ್ರೆಯಲ್ಲಿ ಔಷಧಿ ಇಲ್ಲ ಎಂಬ ನೆಪದಲ್ಲಿ ಬಡ ರೋಗಿಗಳನ್ನು ಖಾಸಗಿ ಮೆಡಿಕಲ್‌ಗಳಿಗೆ ಕಳುಹಿಸುವುದನ್ನು ತಪ್ಪಿಸಿ, ಸರ್ಕಾರಿ ಆಸ್ಪತ್ರೆಯಲ್ಲೇ ಉಚಿತ ಔಷಧಿ ದೊರೆಯುವಂತೆ ಕ್ರಮ ಕೈಗೊಳ್ಳಬೇಕು.

ಆಡಳಿತ ಮಂಡಳಿ ಹಾಗೂ ಡಯಾಲಿಸಿಸ್ ಯಂತ್ರ: ಮೆಗ್ಗಾನ್ ಆಸ್ಪತ್ರೆಗೆ ನೂತನ ಆಡಳಿತ ಮಂಡಳಿ ರಚಿಸಬೇಕು ಹಾಗೂ ಹಳೆಯದಾಗಿರುವ ಡಯಾಲಿಸಿಸ್ ಯಂತ್ರಗಳನ್ನು ಬದಲಿಸಿ ನೂತನ ಯಂತ್ರಗಳನ್ನು ಒದಗಿಸಬೇಕು.

ಪ್ರಾಥಮಿಕ ಆರೋಗ್ಯ ಕೇಂದ್ರಗಳ ಅಭಿವೃದ್ಧಿ: ನಗರದಲ್ಲಿ ಶಿಥಿಲಾವಸ್ಥೆಯಲ್ಲಿರುವ ಪ್ರಾಥಮಿಕ ಚಿಕಿತ್ಸಾ ಕೇಂದ್ರಗಳಿಗೆ ನೂತನ ಕಟ್ಟಡಗಳನ್ನು ಮಂಜೂರು ಮಾಡಬೇಕು ಎಂದು ಶಾಸಕರು ಮನವಿ ಮಾಡಿದರು.

ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಡಿಎಸ್‌ ಅರುಣ್, ಶ್ರೀಮತಿ ಭಾಲ್ಕಿಶ್ ಬಾನು, ಜಿಲ್ಲಾಧಿಕಾರಿಗಳಾದ ಶ್ರೀ ಪ್ರಕಾಶ್ ಜಿ ಟಿ, ಜಿಲ್ಲಾ ರಕ್ಷಣಾಧಿಕಾರಿಗಳಾದ ಶ್ರೀ ನಿಖಿಲ್ ಸೇರಿದಂತೆ ಆರೋಗ್ಯ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K. Shivakumar ಮುಂದಿನ ಶೈಕ್ಷಣಿಕ ವರ್ಷದಿಂದ ಎಲ್ಲ ಶಾಲೆಗಳಲ್ಲೂ ಸಂವಿಧಾನ ಪಾಠ ಅಳವಡಿಕೆ- ಡಿ.ಕೆ.ಶಿವಕುಮಾರ್.

D.K. Shivakumar ಸಂವಿಧಾನ ಎನ್ನುವುದು ಕೇವಲ ಪುಸ್ತಕವಲ್ಲ, ಅದು ಪ್ರತಿಯೊಬ್ಬ ಭಾರತೀಯನ...

U. T. Khader ಆಶಾ ಕಾರ್ಯಕರ್ತೆಯರ ನ್ಯಾಯಬದ್ಧ ಬೇಡಿಕೆ ಈಡೇರಿಸಲು ಸರ್ಕಾರ ಬದ್ಧ- ಆರೋಗ್ಯ ಸಚಿವ ಯು.ಟಿ.ಖಾದರ್

U. T. Khader ಆಶಾ ಕಾರ್ಯಕರ್ತೆಯರ ಪ್ರತಿಭಟನೆ ಹಾಗೂ ವೇತನ ಹೆಚ್ಚಳದ...

Constitution Day ಡಾ.ಅಂಬೇಡ್ಕರ್ ಪ್ರತಿಪಾದಿಸಿದ ತತ್ವಗಳು ಪ್ರಜಾಪ್ರಭುತ್ವಕ್ಕೆ ಭದ್ರ ಅಡಿಪಾಯ – ಡಾ.ಜಿ.ಪರಮೇಶ್ವರ

Constitution Day ಸಂವಿಧಾನ ದಿನಾಚರಣೆಯ ಅಂಗವಾಗಿ ಇಂದು ವಿಧಾನಸೌಧದ ಮುಂಭಾಗದಲ್ಲಿರುವ ಭಾರತರತ್ನ,...