ರಾಯಲ್ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ಅದ್ದೂರಿಯಾಗಿ ಕನಕ ಜಯಂತಿ ಆಚರಿಸಲಾಯಿತು.
ಜೊತೆಗೆ ಪೋಷಕರಿಗೆ ಕ್ರೀಡಾಕೂಟವನ್ನು ಹಮ್ಮಿಕೊಳ್ಳಲಾಗಿತ್ತು. ಈ ಒಂದು ಕಾರ್ಯಕ್ರಮದಲ್ಲಿ ಶಾಲೆಯ ಕಾರ್ಯದರ್ಶಿಗಳಾದ ಶ್ರೀಮತಿ ಪೂಜಾ ನಾಗರಾಜ್ ಪರಿಸರ ಮೇಡಂ ರವರು, ಸಂಸ್ಥೆಯ ಶೈಕ್ಷಣಿಕ ಸಲಹೆಗಾರರಾದ ಪ್ರೊ. ನಾಗರಾಜ ಪರಿಸರ, ಮುಖ್ಯೋಪಾಧ್ಯಾಯರಾದ ಮಂಜುನಾಥ್ ಎಲ್. ಎನ್. ರವರು ಮತ್ತು ಶಿಕ್ಷಕರು, ಪೋಷಕರು, ಮಕ್ಕಳು ಭಾಗವಹಿಸಿದ್ದರು.
ಪೋಷಕರು ದಿನನಿತ್ಯದ ಜಂಜಾಟದಿಂದ ಹೊರಬಂದು ಕ್ರೀಡೆಯಲ್ಲಿ ಆಸಕ್ತಿಯಿಂದ ಭಾಗವಹಿಸಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದರು ಹಾಗೂ ಶಾಲೆಯ ಬಗ್ಗೆ ಸಂತೋಷವನ್ನು ವ್ಯಕ್ತಪಡಿಸಿದರು.
